ಬೆಂಗಳೂರು: ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ (Kangana Ranaut) ಒಮ್ಮತ ಮೂಡದ ಹಿನ್ನೆಲೆಯಲ್ಲಿ (Chirag Paswan In Parliament) ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇದೀಗ ಎರಡನೇ ಬಾರಿ ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆಯಾದರು. ಈ ವೇಳೆ ಗಮನ ಸೆಳೆದಿದ್ದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ . ಸಂಸತ್ ಭವನದ ಹೊರಗೆ ಚುನಾವಣಾ ಫಲಿತಾಂಶಗಳು ಪ್ರಕಟವಾದ ತಕ್ಷಣ ಪಾಸ್ವಾನ್ ಹಾಗೂ ಕಂಗನಾ ಒಬ್ಬರಿಗೊಬ್ಬರು ಕೈ ಕುಲುಕಿ ಮಾತನಾಡಿದ್ದಾರೆ. ಇವರಿಬ್ಬರ ಸಂತೋಷದ ಕ್ಷಣ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಈ ಮುಂಚೆ ಒಟ್ಟಿಗೆ ತೆರೆ ಹಂಚಿಕೊಂಡಿದ್ದರು. 2011 ರಲ್ಲಿ, ಇಬ್ಬರು ಮಿಲೇ ನಾ ಮಿಲೇ ಹಮ್ ಚಿತ್ರದಲ್ಲಿ ನಟಿಸಿದ್ದರು. ಅಷ್ಟಾಗಿ ಸಿನಿಮಾ ಯಶಸ್ಸು ಕಂಡಿಲ್ಲ. ಆ ಬಳಿಕ ಕ್ರಮೇಣ ಚಿರಾಗ್ ಪಾಸ್ವಾನ್ ರಾಜಕೀಯಕ್ಕೆ ಎಂಟ್ರಿ ಕೊಟ್ಟರು. ಇದೀಗ ಮತ್ತೆ ಚಿರಾಗ್ ಪಾಸ್ವಾನ್ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಒಟ್ಟಿಗೆ ಕಂಡಿದ್ದಾರೆ.
ಅನೇಕ ಚಲನಚಿತ್ರಗಳು ಮತ್ತು ಹಲವಾರು ಚುನಾವಣೆಗಳ ನಂತರ, ಇಬ್ಬರೂ ಮತ್ತೆ ಸಹೋದ್ಯೋಗಿಗಳಾಗಿದ್ದಾರೆ, ಚಲನಚಿತ್ರ ಸೆಟ್‌ನಲ್ಲಿ ಅಲ್ಲ ಆದರೆ ಸಂಸತ್ತಿನಲ್ಲಿ.
ಇದನ್ನೂ ಓದಿ: Vinay Gowda: ʻಡೆವಿಲ್ʼ ಸಿನಿಮಾದಲ್ಲಿ ನಾನೇ ವಿಲನ್, ಪ್ರಾಜೆಕ್ಟ್ ಏನಾಗುತ್ತೋ ಗೊತ್ತಿಲ್ಲ ಎಂದ ʻಬಿಗ್ ಬಾಸ್ʼ ಆನೆ ವಿನಯ್ ಗೌಡ!
18ನೇ ಲೋಕಸಭೆಯ ಸ್ಪೀಕರ್ ಆಗಿ ಎನ್‌ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ (Om Birla) ಅವರು ಆಯ್ಕೆಯಾಗಿದ್ದಾರೆ (Lok Sabha Speaker). ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇದೀಗ ಎರಡನೇ ಬಾರಿ ಲೋಕಸಭೆ ಸ್ಪೀಕರ್ ಆಗಿ ಆಯ್ಕೆ ಆಗಿರುವ ಓಂ ಬಿರ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ಸಂಸತ್ ಸದಸ್ಯರು ಪಕ್ಷಾತೀತ ಅಭಿನಂದನೆ ಸಲ್ಲಿಸಿದರು.
ವಿಪ್ ಜಾರಿ
ಆರಂಭದಲ್ಲಿ ಎನ್‌ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನಿಸಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂಬ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್‌ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಮಾತುಕತೆ ಮುರಿದು ಬಿದ್ದು ಕೊನೆಯ ಕ್ಷಣದಲ್ಲಿ ಕೊಂಡಿಕುನಾಲ್ ಸುರೇಶ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲ ಸದಸ್ಯರಿಗೆ ಹಾಜರಾಗುವಂತೆ ಮಂಗಳವಾರ ವಿಪ್ ಜಾರಿ ಮಾಡಿದ್ದವು.