Site icon Vistara News

Kangana Ranaut: ಲೋಕಸಭಾ ಚುನಾವಣೆ: ಕಂಗನಾ ʻಎಮರ್ಜೆನ್ಸಿʼ ಸಿನಿಮಾ ಮತ್ತೆ ಪೋಸ್ಟ್‌ಪೋನ್‌!

Kangana Ranaut's Emergency gets postponed again

ಬೆಂಗಳೂರು: ಕಂಗನಾ ರಣಾವತ್ (Kangana Ranaut) ಅವರು ತಮ್ಮ ನಿರ್ದೇಶನದ ʻಎಮರ್ಜೆನ್ಸಿʼ ಸಿನಿಮಾವನ್ನು ಮುಂದೂಡುವುದಾಗಿ ಘೋಷಿಸಿದ್ದಾರೆ. ಈ ಹಿಂದೆ ಈ ವರ್ಷ ನವೆಂಬರ್ 24ರಂದು ಎಮರ್ಜೆನ್ಸಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಲಾಗಿತ್ತು. ಪ್ರೊಡಕ್ಷನ್ ಬ್ಯಾನರ್ ಮಣಿಕರ್ಣಿಕಾ ಫಿಲ್ಮ್ಸ್ ತಮ್ಮ ಸಾಮಾಜಿಕ ಮಾಧ್ಯಮದ ಮೂಲಕ ಈ ಬಗ್ಗೆ ಹೊಸ ಅಪ್‌ಡೇಟ್‌ ಹಂಚಿಕೊಂಡಿದೆ. ‘ದೇಶಕ್ಕೆ ನನ್ನ ಕರ್ತವ್ಯ ಮತ್ತು ದೇಶಕ್ಕೆ ಸೇವೆ ಸಲ್ಲಿಸುವ ನನ್ನ ಬದ್ಧತೆಗೆ ಆದ್ಯತೆ ನೀಡುತ್ತಿರುವುದರಿಂದ’ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ಘೋಷಿಸಿದ್ದಾರೆ ಕಂಗನಾ.  ಈ ಸಿನಿಮಾದಲ್ಲಿ ಕಂಗನಾ ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿದ್ದಾರೆ. ಕಂಗನಾ ಈ ಬಾರಿ ತಮ್ಮ ತವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಸಿನಿಮಾ ಮುಂದೂಡಲಾಗಿದೆ.

ಮಣಿಕರ್ಣಿಕಾ ಫಿಲ್ಮ್ಸ್ ಈ ಬಗ್ಗೆ ಪೋಸ್ಟ್‌ ಮಾಡಿ ʻʻನಮ್ಮ ರಾಣಿ ಕಂಗನಾ ರಣಾವತ್‌ ರಾಷ್ಟ್ರಕ್ಕೆ ತಮ್ಮ ಕರ್ತವ್ಯ ಮತ್ತು ದೇಶ ಸೇವೆ ಮಾಡುವ ಬದ್ಧತೆಗೆ ಆದ್ಯತೆ ನೀಡುತ್ತಿರುವುದರಿಂದ, ನಮ್ಮ ಬಹು ನಿರೀಕ್ಷಿತ ಚಿತ್ರ ‘ಎಮರ್ಜೆನ್ಸಿ’ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಹೊಸ ಬಿಡುಗಡೆ ದಿನಾಂಕವನ್ನು ಶೀಘ್ರದಲ್ಲೇ ಅನೌನ್ಸ್‌ ಮಾಡಲಿದ್ದೇವೆ. ನಿಮ್ಮ ನಿರಂತರ ಬೆಂಬಲಕ್ಕಾಗಿ ಧನ್ಯವಾದಗಳುʼʼಎಂದು ಬರೆದುಕೊಂಡಿದೆ.

ಇದನ್ನೂ ಓದಿ: Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು

ಈ ಚಿತ್ರವನ್ನು ಮೊದಲು ಜೂನ್ 14 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಜನವರಿಯಲ್ಲಿ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ ಒಂದು ದಿನದ ನಂತರ ಕಂಗನಾ ʻಎಮರ್ಜೆನ್ಸಿʼ ಬಿಡುಗಡೆಯ ದಿನಾಂಕವನ್ನು ಘೋಷಿಸಿದ್ದರು. ಇದಾದ ಬಳಿಕ 2023ರ ನ.24ರಂದು ಥಿಯೇಟರ್‌ಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಮತ್ತೆ ಸಿನಿಮಾ ಬಿಡುಗಡೆಯಾಗುತ್ತಿಲ್ಲ ಎಂದು ಘೋಷಿಸಿದರು.

ಎಮರ್ಜೆನ್ಸಿಯಲ್ಲಿ ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಾಡೆ, ವಿಶಾಕ್ ನಾಯರ್ ಮತ್ತು ದಿವಂಗತ ಸತೀಶ್ ಕೌಶಿಕ್ ಕೂಡ ಕಾಣಿಸಿಕೊಂಡಿದ್ದಾರೆ. ಎಮರ್ಜೆನ್ಸಿ ಸಿನಿಮಾದಲ್ಲಿ ಕಂಗನಾ ಅವರು ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಿತೇಶ್ ಶಾ ಕಥೆಯನ್ನು ಬರೆದಿದ್ದು, ಈ ಹಿಂದೆ ಅವರು ಕಂಗನಾ ಅವರ ಕೊನೆಯ ಚಿತ್ರ ಧಾಕಡ್ ಅನ್ನು ಸಹ ಬರೆದಿದ್ದಾರೆ. ಆದರೆ ಬಾಕ್ಸ್‌ ಆಫೀಸ್‌ನಲ್ಲಿ ಸಿನಿಮಾ ಗಳಿಕೆ ಕಂಡಿರಲಿಲ್ಲ. ಅನುಪಮ್ ಖೇರ್, ಮಿಲಿಂದ್ ಸೋಮನ್, ಮಹಿಮಾ ಚೌಧರಿ, ಸತೀಶ್ ಕೌಶಿಕ್ ಮತ್ತು ಶ್ರೇಯಸ್ ತಲ್ಪಡೆ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಪಾತ್ರವನ್ನು ಶ್ರೇಯಸ್ ತಲ್ಪಡೆ ನಿರ್ವಹಿಸಲಿದ್ದಾರೆ. 

ಕಂಗನಾ ಲೋಕಸಭೆ ಚುನಾವಣೆಗೆ ಮುನ್ನ ತಮ್ಮ ಪ್ರಚಾರ ಕಾರ್ಯಗಳಲ್ಲಿ ನಿರತರಾಗಿದ್ದಾರೆ. ಈಗಾಗಲೇ ಕಂಗನಾ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಕಂಗನಾ ಅವರು “ಇಂದು ನಾನು ಮಂಡಿ ಲೋಕಸಭಾ ಸ್ಥಾನದಿಂದ ನಾಮಪತ್ರ ಸಲ್ಲಿಸಿದ್ದೇನೆ. ಮಂಡಿಯಿಂದ ಸ್ಪರ್ಧಿಸುವ ಅವಕಾಶ ಸಿಕ್ಕಿರುವುದು ಹೆಮ್ಮೆಯ ಸಂಗತಿ. ಬಾಲಿವುಡ್ ನಲ್ಲಿ ಯಶಸ್ಸು ಕಂಡಿರುವ ನನಗೆ ರಾಜಕೀಯ ಕ್ಷೇತ್ರದಲ್ಲೂ ಯಶಸ್ಸು ಸಿಗುತ್ತದೆ ಎಂಬ ಭರವಸೆ ನನಗಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Exit mobile version