Site icon Vistara News

Kangana Ranaut: ಪ್ರಮಾಣ ವಚನ ಸಮಾರಂಭದಲ್ಲಿ ಬಿಳಿ ಸೀರೆಯಲ್ಲಿ ಮಿಂಚಿದ ಕಂಗನಾ!

Kangana Ranaut Looks Gorgeous In A White Saree

ಬೆಂಗಳೂರು: ಕಂಗನಾ ರಣಾವತ್ (Kangana Ranaut) ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಮಂಡಿ ಕ್ಷೇತ್ರದಿಂದ ಗೆದ್ದಿದ್ದಾರೆ. ಪ್ರಮಾಣ ವಚನ ಸಮಾರಂಭದಲ್ಲಿ ಕಂಗನಾ ಭಾಗಿಯಾಗಿದ್ದರು. ಕಂಗನಾ ಪ್ರಮಾಣ ವಚನ ಸಮಾರಂಭದಲ್ಲಿ ಸೀರೆಯಲ್ಲಿ ಮಿಂಚಿದ್ದಾರೆ. ಬಿಳಿ ಸೀರೆಯಲ್ಲಿ ನಟಿ ಕಂಗೊಳಿಸಿದ್ದಾರೆ. ಶಾರುಖ್ ಖಾನ್, ಅಕ್ಷಯ್ ಕುಮಾರ್, ವಿಕ್ರಾಂತ್ ಮಾಸ್ಸೆ, ಮತ್ತು ಅನುಪಮ್ ಖೇರ್ ಸೇರಿದಂತೆ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಸಮಾರಂಭದಲ್ಲಿ ಭಾಗಿಯಾಗಿದ್ದರು.

ಸಮಾರಂಭದ ಕೇಂದ್ರ ಬಿಂದುವಿನಂತೆ ಬಿಟೌನ್‌ ಕ್ವೀನ್‌ ಕಂಗೊಳಿಸುತ್ತಿದ್ದರು. ಬಿಳಿ ಬಣ್ಣದ ಸೀರೆಯಲ್ಲಿ, ಮುತ್ತಿನ ನೆಕ್ಲೇಸ್‌ ಧರಿಸಿ ಕಂಗನಾ ಕಾಂತಿಯುತವಾಗಿ ಕಾಣಿಸಿಕೊಂಡಿದ್ದಾರೆ. ನಟಿಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ..ಸ್ವತಃ ವಿಡಿಯೊ ಹಂಚಿಕೊಂಡಿರುವ ಕಂಗನಾ ‘ಪ್ರಮಾಣ ದಿನದಂದು ನನ್ನ ನೋಟ’ ಎಂದು ಶೀರ್ಷಿಕೆ ಬರೆದುಕೊಂಡಿದ್ದಾರೆ.

ಕಂಗನಾ ರಣಾವತ್ ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಿದ್ದರು. ನಟಿಯ ಮುಂದೆ ಕಾಂಗ್ರೆಸ್ ಪಕ್ಷದ ನಾಯಕ ವಿಕ್ರಮಾದಿತ್ಯ ಸಿಂಗ್ ಇದ್ದರು. ಕಂಗನಾ ಅವರನ್ನು 74,755 ಮತಗಳಿಂದ ಸೋಲಿಸಿದರು.

ಇದನ್ನೂ ಓದಿ: Sushant Singh: ಕೇದಾರನಾಥಕ್ಕೆ ಭೇಟಿ ಕೊಟ್ಟಾಗ ಸುಶಾಂತ್ ಸಿಂಗ್ ನೆನೆದು ಕಣ್ಣೀರಿಟ್ಟ ಸಹೋದರಿ!

ಕಂಗನಾ ರಣಾವತ್ ಜೂನ್ 6 ರಂದು ನವದೆಹಲಿಗೆ ಪ್ರಯಾಣಿಸುತ್ತಿದ್ದಾಗ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಮಹಿಳಾ ಸಿಐಎಸ್ಎಫ್ ಕಾನ್ಸ್‌ಟೇಬಲ್ ಕಪಾಳಮೋಕ್ಷ ಮಾಡಿದ್ದರು. 2020 ರಲ್ಲಿ, ಕಂಗನಾ ರಣಾವತ್‌ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು. ಇದು ದೊಡ್ಡ ವಿವಾದ ಸೃಷ್ಟಿಸಿತ್ತು. ಅಂದ ಹಾಗೆ ಕಂಗನಾಗೆ ಹೊಡೆದ ಕಾನ್​ಸ್ಟೇಬಲ್​ ಕುಲ್ವಿಂದರ್ ಕೌರ್​ ತಾಯಿಯೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಂಗನಾ ಹೇಳಿಕೆಯಿಂದ ಕೋಪಗೊಂಡಿದ್ದ ಅವರು ಪ್ರತಿಕಾರ ತೀರಿಸಲು ಕಾದಿದ್ದರು. ಅಂತೆಯೇ ಚಂಡಿಗಢದಲ್ಲಿ ತಪಾಸಣಾ ಕೇಂದ್ರಕ್ಕೆ ಬರುತ್ತಿದ್ದಂತೆ ಕಪಾಳ ಮೋಕ್ಷ ಮಾಡಿದ್ದಾರೆ.

Exit mobile version