ಬೆಂಗಳೂರು: ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದು ಅಭಿನಯಕ್ಕಾಗಿ ಹೆಸರುವಾಸಿಯಾಗಿರುವ ನಟಿ ಕಂಗನಾ ಕ್ವೀನ್, ತನು ವೆಡ್ಸ್ ಮನು ರಿಟರ್ನ್ಸ್, ಮಣಿಕರ್ಣಿಕಾ- ದಿ ಕ್ವೀನ್ ಆಫ್ ಝಾನ್ಸಿ, ಮತ್ತು ಪಂಗಾ ಚಿತ್ರಗಳಿಗಾಗಿ ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ನಟನೆಯ ಹೊರತಾಗಿ, ಆಗಾಗ ತಮ್ಮ ಹೇಳಿಕೆಗಳ ಮೂಲಕ ಟ್ರೋಲ್‌ಗೆ ಗುರಿಯಾಗುತ್ತಲೇ ಇರುತ್ತಾರೆ. ಈಗ ಬಿಜೆಪಿ ಸಂಸದೆ ಆಗಿರುವ ಕಂಗನಾ ರಣಾವತ್ (Kangana Ranaut) ಅವರ ಹಳೆಯ ವಿಡಿಯೊವೊಂದು ವೈರಲ್ ಆಗಿದೆ. ವಿಡಿಯೊ ಡಬಲ್-ಮೀನಿಂಗ್‌ನಲ್ಲಿದ್ದು, ಸಹ-ನಟ ಆರ್ ಮಾಧವನ್ ಬಿದ್ದು ಬಿದ್ದು ನಕ್ಕಿದ್ದಾರೆ.
ರಾಷ್ಟ್ರಪ್ರಶಸ್ತಿ ಗೆದ್ದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಹಳೆಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ವೈರಲ್ ಆದ ವಿಡಿಯೊಗೆ ಸಬ್‌ಟೈಟಲ್ ಕೂಡ ಇದೆ. ಹೆಚ್ಚು ಡಬಲ್-ಮೀನಿಂಗ್‌ನಲ್ಲಿಯೂ ಇದೆ.
ಸಿದ್ಧಾರ್ಥ್ ಕಣ್ಣನ್ ಅವರೊಂದಿಗಿನ ಸಂದರ್ಶನದಲ್ಲಿ ಈ ಘಟನೆ ನಡೆದಿದೆ. ವೈರಲ್ ಆದ ವಿಡಿಯೊದಲ್ಲಿ ಸಂದರ್ಶಕರು ಕಂಗನಾಗೆ, “ರಾಷ್ಟ್ರೀಯ ಪ್ರಶಸ್ತಿ ಗೆದ್ದ ನಂತರ ನಿಮಗೆ ಏನನಿಸುತ್ತದೆ? ನಿಮ್ಮೊಳಗೆ ರಾಷ್ಟ್ರೀಯ ಪ್ರಶಸ್ತಿ ಇದೆಯಾ?ಎಂದು ಕೇಳಿದ್ದಾರೆ. ನಿಮ್ಮೊಳಗೆ ರಾಷ್ಟ್ರೀಯ ಪ್ರಶಸ್ತಿ ಇದೆಯಾ ಎಂದು ಪ್ರಶ್ನೆ ಕೇಳಿದ ಕೂಡಲೇ ನಟ ಆರ್ ಮಾಧವನ್ ಬಿದ್ದು ಬಿದ್ದು ನಕ್ಕಿದ್ದಾರೆ.
ಆ ಬಳಿಕ ಕಂಗನಾ ಉತ್ತರ ನೀಡಿ ʻʻನಮ್ಮೊಳಗೆ ರಾಷ್ಟ್ರೀಯ ಪ್ರಶಸ್ತಿ ಬಗ್ಗೆ ತಿಳಿದಿಲ್ಲ ಆದರೆ ನಾನು ರೋಮಾಂಚನಗೊಂಡಿದ್ದೇನೆ. ಈ ವಯಸ್ಸಿನಲ್ಲಿ ನನಗೆ ಈ ಪ್ರಶಸ್ತಿ ಸಿಕ್ಕಿದೆ ಎಂದು ನಾನು ರೋಮಾಂಚನಗೊಂಡಿದ್ದೇನೆʼʼಎಂದಿದ್ದಾರೆ. ಇಷ್ಟಾದರೂ ಮಾಧವನ್ ಅವರಿಗೆ ಮಾತ್ರ ನಗು ಕಂಟ್ರೋಲ್ ಆಗಿಲ್ಲ. ಈ ವಿಡಿಯೊಗೆ ನೆಟ್ಟಿಗರು ಬಗೆ ಬಗೆಯಲ್ಲಿ ಕಮೆಂಟ್ ಮಾಡಿದ್ದಾರೆ. ಒಬ್ಬರು ʻʻಈ ಹಾಸ್ಯ ನಿರೂಪಕನಿಗೆ ಇಂದಿನವರೆಗೂ ಅರ್ಥವಾಗಲಿಲ್ಲʼʼಎಂದು ಕಮೆಂಟ್ ಮಾಡಿದ್ದಾರೆ.
ಇದನ್ನೂ ಓದಿ: Kangana Ranaut: ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕಾನ್‌ಸ್ಟೇಬಲ್ ಬೆಂಗಳೂರಿಗೆ ವರ್ಗಾವಣೆ?
ಈ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದ ಕಂಗನಾ ಕೆಲವು ದಿನಗಳ ಹಿಂದೆ ಚಿತ್ರದ ಬಿಡುಗಡೆಯನ್ನು ಮುಂದಕ್ಕೆ ಹಾಕಿದ್ದರು. ಇಲ್ಲದಿದ್ದರೆ ಇಷ್ಟರಲ್ಲಾಗಲೇ ಚಿತ್ರ ತೆರೆ ಕಾಣಬೇಕಿತ್ತು. ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಅವರು ರಿಲೀಸ್ ಡೇಟ್ ಮುಂದೂಡಿದ್ದರು. ಸದ್ಯ ಅವರು ಹಿಮಾಚಲ ಪ್ರದೇಶ ಮಂಡಿ ಕ್ಷೇತಚರದಿಂದ ಗೆದ್ದು, ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ರಾಹಜೀಯಕ್ಕೆ ಆದ್ಯತೆ ನೀಡುವುದಾಗಿ ಈ ಹಿಂದೆ ಕಂಗನಾ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಚಿತ್ರ ಬಿಡುಗಡೆ ಬಗ್ಗೆ ಕೆಲವರು ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಈಗ ಅನುಮಾನಕ್ಕೆ ಸ್ವತಃ ಅವರೇ ತೆರೆ ಎಳೆದಿದ್ದಾರೆ.
‘ಎಮರ್ಜೆನ್ಸಿ’ಯಲ್ಲಿ ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಾಡೆ, ವಿಶಾಕ್ ನಾಯರ್ ಮತ್ತು ದಿವಂಗತ ಸತೀಶ್ ಕೌಶಿಕ್ ಕೂಡ ಕಾಣಿಸಿಕೊಂಡಿದ್ದಾರೆ. ಕಂಗನಾ ಅವರು ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರ ಪಾತ್ರದಲ್ಲಿ ನಟಿಸಿದ್ದು, ಫಸ್ಟ್ ಲುಕ್‌ನಲ್ಲಿ ಇಂದಿರಾ ಗಾಂಧಿ ಅವರನ್ನೇ ಹೋಲುತ್ತಿರುವುದನ್ನು ನೋಡಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಇನ್ನು ಅಟಲ್ ಬಿಹಾರಿ ವಾಜಪೇಯಿ ಪಾತ್ರವನ್ನು ಶ್ರೇಯಸ್ ತಲ್ಪಡೆ ನಿರ್ವಹಿಸಿದ್ದಾರೆ. ಸಿನಿಮಾದಲ್ಲಿ ಇಂದಿರಾ ಗಾಂಧಿಯ ಗಟ್ಟಿ ವ್ಯಕ್ತಿತ್ವದ ಅನಾವರಣ ಮಾಡಲಾಗಿದೆ ಎನ್ನಲಾಗುತ್ತಿದೆ. ಜತೆಗೆ ತುರ್ತು ಪರಿಸ್ಥಿತಿಯನ್ನೂ ಇಂಚು ಇಂಚಾಗಿ ತೆರೆದಿಡಲಿದೆ. ಹೀಗಾಗಿ ಈಗಾಗಲೇ ಸಿನಿಮಾ ಗಮನ ಸೆಳೆದಿದೆ.