ಬೆಂಗಳೂರು: ಲೋಕಸಭಾ ಚುನಾವಣೆ(Lok Sabha Election 2024)ಯಲ್ಲಿ ಹಿಮಾಚಲಪ್ರದೇಶದ ಮಂಡಿಯಿಂದ ಸಂಸದರಾಗಿ ಆಯ್ಕೆಯಾದ ಕಂಗನಾ ರಣಾವತ್ (Kangana Ranaut)ಗೆ ಕಪಾಳಮೋಕ್ಷ ಮಾಡಿದ್ದ ಕಾನ್ಸ್ಟೇಬಲ್ ಕುಲ್ವಿಂದರ್ ಕೌರ್ರನ್ನು ಅರೆಸ್ಟ್ ಮಾಡಲಾಗಿದೆ. ಚಂಡೀಗಢ ವಿಮಾನ ನಿಲ್ದಾಣದಲ್ಲಿ ಗುರುವಾರ ಕಂಗನಾ ಮೇಲೆ CISF ಸಿಬ್ಬಂದಿ ಕೌರ್ ಹಲ್ಲೆ ನಡೆಸಿದ್ದರು. ಇದಾದ ಬಳಿಕ ಆಲಿಯಾ ಭಟ್, ಸೋನಾಕ್ಷಿ ಸಿನ್ಹಾ, ಜೋಯಾ ಅಖ್ತರ್, ಸೋನಿ ರಜ್ದಾನ್, ಅರ್ಜುನ್ ಕಪೂರ್ ಮತ್ತು ಪ್ರಜಕ್ತಾ ಕೋಲಿ ಸೇರಿದಂತೆ ಹಲವು ಬಾಲಿವುಡ್ ಗಣ್ಯ ವ್ಯಕ್ತಿಗಳು ಕಂಗನಾ ರಣಾವತ್ಗೆ ಬೆಂಬಲವನ್ನು ನೀಡಿದ್ದಾರೆ. ಅನುಪಮ್ ಖೇರ್, ಮಿಕಾ ಸಿಂಗ್, ರವೀನಾ ಟಂಡನ್ ಮತ್ತು ಶೇಖರ್ ಸುಮನ್ ಸೇರಿದಂತೆ ಹಲವಾರು ವ್ಯಕ್ತಿಗಳು ಘಟನೆಯನ್ನು ಖಂಡಿಸಿದ್ದಾರೆ.
ಪತ್ರಕರ್ತೆ ಫಾಯೆ ಡಿಸೋಜಾ ಅವರು ಕಪಾಳಮೋಕ್ಷ ಘಟನೆಯನ್ನು ಖಂಡಿಸಿ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ, “ಹಿಂಸೆ ಎಂದಿಗೂ ಉತ್ತರವಾಗುವುದಿಲ್ಲ” ಎಂದು ಹೇಳಿದ್ದಾರೆ. “ವಿಶೇಷವಾಗಿ ಗಾಂಧಿಯವರ ಅಹಿಂಸೆಯ ಆದರ್ಶಗಳಿಂದ ಹುಟ್ಟಿದ ನಮ್ಮ ದೇಶದಲ್ಲಿ ಅಲ್ಲ. ಯಾರೋ ಮಾಡಿದ ಅಭಿಪ್ರಾಯಗಳು ಮತ್ತು ಹೇಳಿಕೆಗಳೊಂದಿಗೆ ನಾವು ಎಷ್ಟು ಭಿನ್ನಾಭಿಪ್ರಾಯ ಹೊಂದಿದ್ದೇವೆ ಎಂಬುದು ಮುಖ್ಯವಲ್ಲ, ನಾವು ಹಿಂಸೆಯಿಂದ ಪ್ರತಿಕ್ರಿಯಿಸಲು ಸಾಧ್ಯವಿಲ್ಲ ಮತ್ತು ನಾವು ಅದನ್ನು ಕ್ಷಮಿಸಬಾರದು, ಹಿಂಸೆ ಎಂದಿಗೂ ಉತ್ತರವಾಗುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.
ಈ ಪೋಸ್ಟ್ಗೆ ಹೃತಿಕ್ ರೋಷನ್, ಆಲಿಯಾ ಭಟ್, ಅರ್ಜುನ್ ಕಪೂರ್, ಸೋನಾಕ್ಷಿ ಸಿನ್ಹಾ, ಜೋಯಾ ಅಖ್ತರ್ ಮತ್ತು ಸೋನಿ ರಜ್ದಾನ್ ಸೇರಿದಂತೆ ಅನೇಕರು ಲೈಕ್ ಕೊಟ್ಟಿದ್ದಾರೆ.
ಇದನ್ನೂ ಓದಿ: Kangana Ranaut: ಕಾರಣ ಇದ್ದರೆ ಕೊಲೆ, ಅತ್ಯಾಚಾರ ಮಾಡಬಹುದೆ? ; ವಿರೋಧಿಗಳ ವಿರುದ್ಧ ಗುಡುಗಿದ ಕಂಗನಾ
Liked by Hrithik
byu/Icy-One-5297 inBollyBlindsNGossip
ಏನಿದು ಘಟನೆ?
2020 ರಲ್ಲಿ, ಕಂಗನಾ ರಣಾವತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು. ಇದು ದೊಡ್ಡ ವಿವಾದ ಸೃಷ್ಟಿಸಿತ್ತು. ಅಂದ ಹಾಗೆ ಕಂಗನಾಗೆ ಹೊಡೆದ ಕಾನ್ಸ್ಟೇಬಲ್ ಕುಲ್ವಿಂದರ್ ಕೌರ್ ತಾಯಿಯೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಂಗನಾ ಹೇಳಿಕೆಯಿಂದ ಕೋಪಗೊಂಡಿದ್ದ ಅವರು ಪ್ರತಿಕಾರ ತೀರಿಸಲು ಕಾದಿದ್ದರು. ಅಂತೆಯೇ ಚಂಡಿಗಢದಲ್ಲಿ ತಪಾಸಣಾ ಕೇಂದ್ರಕ್ಕೆ ಬರುತ್ತಿದ್ದಂತೆ ಕಪಾಳ ಮೋಕ್ಷ ಮಾಡಿದ್ದಾರೆ.
100 ರೂಪಾಯಿಗೆ ಸಿಗುವ ಮಹಿಳೆಯರು ಎಂದು ಕಂಗನಾ ಕೊಟ್ಟಿರುವ ಹೇಳಿಕೆಯು ಎಕ್ಸ್ ನಲ್ಲಿ(ಟ್ವಿಟರ್) ಕಂಗನಾ ಮತ್ತು ಗಾಯಕ-ನಟ ದಿಲ್ಜೀತ್ ದೋಸಾಂಜ್ ನಡುವೆ ಗಲಾಟೆಗೆ ಕಾರಣವಾಗಿತ್ತು. ಫೆಬ್ರವರಿ 2021 ರಲ್ಲಿ, ಅಂತಾರಾಷ್ಟ್ರೀಯ ಪಾಪ್ ಸೆನ್ಸೇಷನ್ ರಿಹಾನ್ನಾ ಅವರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕಂಗನಾ ರನೌತ್ ಪ್ರತಿಭಟನಾಕಾರರನ್ನು “ಭಯೋತ್ಪಾದಕರು” ಎಂದು ಕರೆದಿದ್ದರು ಮತ್ತು ಅವರು ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.
ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಸಿಬ್ಬಂದಿ ರೈತರ ಚಳವಳಿ ಕುರಿತು ನೀಡಿದ್ದ ಹೇಳಿಕೆಯಿಂದ ನನಗೆ ನೋವಾಗಿತ್ತು ಎಂದು ವಿಚಾರಣೆ ವೇಳೆ ಹೇಳಿದ್ದಾರೆ. ಕಂಗನಾ ರಣಾವತ್ ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಿದ್ದರು. ನಟಿಯ ಮುಂದೆ ಕಾಂಗ್ರೆಸ್ ಪಕ್ಷದ ನಾಯಕ ವಿಕ್ರಮಾದಿತ್ಯ ಸಿಂಗ್ ಇದ್ದರು. ಕಂಗನಾ ಅವರನ್ನು 74,755 ಮತಗಳಿಂದ ಸೋಲಿಸಿದರು.