Site icon Vistara News

Katrina Kaif: ಕೊರಗಜ್ಜನ ಕ್ಷೇತ್ರದಲ್ಲಿ ಕತ್ರಿನಾ ಕೈಫ್; ದೈವದ ಬಳಿ ನಟಿ ಬೇಡಿಕೊಂಡಿದ್ದೇನು?

Katrina Kaif Visited Swamy Koragajja Aadisthala Kuthar

ಬೆಂಗಳೂರು: ಜುಲೈ 16ರಂದು ಕತ್ರಿನಾ ಕೈಫ್ (Katrina Kaif) ಅವರ ಜನ್ಮದಿನ. ಇದಕ್ಕೂ ಮುನ್ನ ಮಂಗಳೂರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ. ಶಿಲ್ಪಾ ಶೆಟ್ಟಿ, ಸುನೀಲ್ ಶೆಟ್ಟಿ ಮೊದಲಾದವರು ಆಗಾಗ ಇಲ್ಲಿಗೆ ಆಗಮಿಸಿ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ, ಬಾಲಿವುಡ್​ನ ಉಳಿದವರಿಗೂ ಈ ಬಗ್ಗೆ ನಂಬಿಕೆ ಮೂಡಿದೆ.ಕತ್ರಿನಾ ಕೈಫ್ ಜೊತೆ ಸುನೀಲ್ ಶೆಟ್ಟಿ ಫ್ಯಾಮಿಲಿ ಕೂಡ ಇಲ್ಲಿಗೆ ಆಗಮಿಸಿದೆ. ಸುನೀಲ್ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಅಥಿಯಾ ಶೆಟ್ಟಿ ಹಾಗೂ ಅಳಿಯ ಕೆ.ಎಲ್. ರಾಹುಲ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಕೆ ಮಾಡಿದ್ದಾರೆ.

ಭಾರತ ತಂಡದ ಬಲಗೈ ಬ್ಯಾಟರ್ ಹಾಗೂ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ (KL Rahul) ಇಲ್ಲಿನ ಐತಿಹಾಸಿಕ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಭಾನುವಾರ ಭೇಟಿ ನೀಡಿದ್ದಾರೆ. ಪತ್ನಿ ಅಥಿಯಾ ಶೆಟ್ಟಿ ಅವರ ಜತೆ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ನೆರವೇರಿಸಿದರು. ಬಪ್ಪನಾಡು ಕ್ಷೇತ್ರವು ಮಂಗಳೂರು ನಗರದ ಹೊರವಲಯದ ಮುಲ್ಕಿ ಸಮೀಪ ಇದೆ. ದೇಗುಲಕ್ಕೆ ಭೇಟಿ ನೀಡಿದ ದಂಪತಿಗೆ ದೇವಾಲಯದ ವತಿಯಿಂದ ವಿಶೇಷ ಗೌರವ ಸಲ್ಲಿಸಲಾಯಿತು.

ಇದನ್ನೂ ಓದಿ: Kamal Haasan: ಇಂದೇ ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗುತ್ತಿದೆ ಕಮಲ್ ಹಾಸನ್ ನಟನೆಯ ʻಇಂಡಿಯನ್’ ಸಿನಿಮಾ?

ವಿಶ್ವ ಕಪ್​ ತಂಡದಲ್ಲಿ ಅವಕಾಶ ಪಡೆಯದೇ ಕೆ. ಎಲ್ ರಾಹುಲ್​ ಮುಂಬರುವ ಶ್ರೀಲಂಕಾ ಪ್ರವಾಸದಲ್ಲಿ ಭಾರತ ತಂಡ ಸೇರುವ ನಿರೀಕ್ಷೆಯಿದೆ. ಆದರೆ ಅದಿನ್ನೂ ಸ್ಪಷ್ಟವಾಗಿಲ್ಲ. ತಂಡವೂ ಪ್ರಕಟಗೊಂಡಿಲ್ಲ. ಅವಕಾಶದ ನಿರೀಕ್ಷೆಯಲ್ಲಿರುವ ಅವರೀಗ ಅಮೂಲ್ಯ ಸಮಯವನ್ನು ಕುಟುಂಬದ ಜತೆ ಕಳೆಯುತ್ತಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಅನಂತ್​ ಅಂಬಾನಿ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ದಂಪತಿ ಜತೆಯಾಗಿ ಭಾಗಿಯಾಗಿದ್ದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿಕಾಣಿಸಿಕೊಂಡಿದ್ದವು.

ಶ್ರೀಲಂಕಾ ಪ್ರವಾಸದ ಏಕ ದಿನ ತಂಡಕ್ಕೆ ಕೆ. ಎಲ್ ರಾಹುಲ್ ನಾಯಕ?

ಜಿಂಬಾಬ್ವೆ ಪ್ರವಾಸದ ಬಳಿಕ ಟೀಮ್ ಇಂಡಿಯಾ ತನ್ನ ಮುಂದಿನ ಕಾರ್ಯಯೋಜನೆಗೆ ಸಜ್ಜಾಗಬೇಕಾಗಿದೆ ವೈಟ್-ಬಾಲ್ ಸರಣಿಗಾಗಿ ಭಾರತ ಬಳಗ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಹೊಸ ಕೋಚ್​ ಗೌತಮ್ ಗಂಭೀರ್ ಅಡಿಯಲ್ಲಿ ಈ ತಂಡ ದ್ವೀಪ ರಾಷ್ಟ್ರಕ್ಕೆ ಹೋಗಲಿದೆ. ಈ ಸರಣಿಯಲ್ಲಿ ಯಾರೆಲ್ಲ ಇರುತ್ತಾರೆ ಎಂಬ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಆದರೆ, ವರದಿಗಳ ಪ್ರಕಾರ, ಸ್ಟಾರ್ ಬ್ಯಾಟರ್​ ಹಾಗೂ ಕನ್ನಡಿಗ ಕೆಎಲ್ ರಾಹುಲ್ (KL Rahul) ತಂಡಕ್ಕೆ ಮರಳಲಿದ್ದು ತಂಡವನ್ನು ಮುನ್ನಡೆಸುವ ನಿರೀಕ್ಷೆಯಿದೆ.

ಏಕದಿನ ಸರಣಿಯಿಂದ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದ್ದು, ವಿರಾಟ್ ಕೊಹ್ಲಿಗೂ ವಿಶ್ರಾಂತಿ ನೀಡಲಾಗಿದೆ ಎಂದು ವರದಿಯಾಗಿದೆ. ಈ ಸರಣಿಯು ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಅಡಿಯಲ್ಲಿ ತಂಡಕ್ಕೆ ಮೊದಲನೆಯದು ಶ್ರೀಲಂಕಾ ಸವಾಲು. ಹೀಗಾಗಿ ಈ ಸರಣಿಯಲ್ಲಿ ಭಾರತವನ್ನು ಮುನ್ನಡೆಸಲು ಕೆಎಲ್ ರಾಹುಲ್ ಮುಂಚೂಣಿಯಲ್ಲಿ ಆಯ್ಕೆಯಾಗಿದ್ದಾರೆ.

ಕೆಎಲ್ ರಾಹುಲ್ ಟಿ 20 ವಿಶ್ವಕಪ್​​ ಗೆ ಹೋಗಿದ್ದ ಭಾರತದ ತಂಡದಿಂದ ಹೊರಗುಳಿದಿದ್ದರು. ಆದರೆ ಈಗ ಶ್ರೀಲಂಕಾ ಪ್ರವಾಸದ ಏಕದಿನ ಹಂತದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ನಾಯಕತ್ವದ ಪಾತ್ರವನ್ನು ಸಹ ತೆಗೆದುಕೊಳ್ಳಲಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟಿ 20 ಯಿಂದ ನಿವೃತ್ತರಾಗುವುದರೊಂದಿಗೆ ಆಲ್ರೌಂಡರ್ ಹಾರ್ದಿಕ್ ಚುಟುಕು ಸ್ವರೂಪದ ಕ್ರಿಕೆಟ್​​ನಲ ಲಿ ತಂಡದ ಜವಾಬ್ದಾರಿ ವಹಿಸುವ ನಿರೀಕ್ಷೆಯಿದೆ.

Exit mobile version