ಬೆಂಗಳೂರು: ಮಲೈಕಾ ಅರೋರಾ (Malaika Arora) ಮತ್ತು ಅರ್ಜುನ್ ಕಪೂರ್(Arjun Kapoor) ಆಗಾಗ ವಕೇಶನ್ ಮೂಡ್‌ನಲ್ಲಿರುವ ಫೋಟೊವನ್ನು ಶೇರ್ ಮಾಡಿಕೊಳ್ಳುತ್ತಲೇ ಇರುತ್ತಾರೆ. ಜತೆಗೆ ಅದೆಷ್ಟೋ ಬಾರಿ ಸಾರ್ವಜನಿಕವಾಗಿ ಕಾಣಿಸಿದ್ದುಂಟು. ಆದರೀಗ ಜೋಡಿ ಬೇರೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಪರಸ್ಪರರ ಭವಿಷ್ಯದ ಒಳಿತಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ಮಲೈಕಾ ಮತ್ತು ಅರ್ಜುನ್ ʼವಿಶೇಷವಾದ ಸಂಬಂಧʼವನ್ನು ಹೊಂದಿದ್ದರು. ಇಬ್ಬರೂ ಪರಸ್ಪರರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಆದರೆ ಇದೀಗ ಜೋಡಿ ಬೇರೆಯಾಗಬೇಕು ಎಂದು ನಿರ್ಧರಿಸಿದೆ. ಇಷ್ಟೂ ವರ್ಷಗಳಲ್ಲಿ, ಅವರು ತಮ್ಮ ಸಂಬಂಧಕ್ಕೆ ಗೌರವವನ್ನು ನೀಡಿದ್ದಾರೆ. ಒಂದು ವೇಳೆ ಬೇರೆಯಾಗಲು ನಿರ್ಧರಿಸಿದರೂ ಪರಸ್ಪರ ಅದೇ ಗೌರವವನ್ನು ಕಾಪಾಡಿಕೊಂಡು ಹೋಗುತ್ತಾರೆ ಎಂದು ವರದಿಯಾಗಿದೆ.
ಮಲೈಕಾ ಅರೋರಾ ಅವರಿಗೆ ಈಗ 50 ವರ್ಷ. ಅರ್ಜುನ್ ಕಪೂರ್‌ಗೆ 38. ಇಬ್ಬರ ಮಧ್ಯೆ ಸುಮಾರು 11 ವರ್ಷಗಳ ಅಂತರ ಇದೆ. ಅರ್ಜುನ್ ಕಪೂರ್ ವಯಸ್ಸಿನಲ್ಲಿ ಸಣ್ಣವರು. ಮಾತ್ರವಲ್ಲ ಕೆಲವು ದಿನಗಳಿಂದ ಮಗು ವಿಚಾರವಾಗಿ ಸಾಕಷ್ಟು ಟ್ರೋಲ್ ಆಗಿತ್ತು ಜೋಡಿ. ಮಲೈಕಾ ಹಾಗೂ ಅರ್ಜುನ್ ಕಪೂರ್‌ಗೆ ಮದುವೆ ಯಾವಾಗ ಎನ್ನುವ ಪ್ರಶ್ನೆ ಎದುರಾಗುತ್ತಲೇ ಇತ್ತು. ಆದರೆ, ಈ ಬಗ್ಗೆ ಈ ಜೋಡಿ ಮೌನ ವಹಿಸಿದ್ದರು.
ಇತ್ತೀಚಿನ ವರದಿಗಳ ಪ್ರಕಾರ ಇಬ್ಬರ ನಡುವೆ ಬಿರುಕು ಮೂಡಿದೆ ಎನ್ನಲಾಗಿದೆ. ಅರ್ಜುನ್ ಕಪೂರ್ ಕುಟುಂಬದವರನ್ನು ಅನ್ಫಾಲೋ ಮಾಡಿದ್ದಾರೆ ಮಲೈಕಾ ಅರೋರಾ. ಅಷ್ಟೇ ಅಲ್ಲದೇ ಅರ್ಜುನ್ ಕಪೂರ್ ಈಗ ನಟಿ ಕುಶಾ ಕಪಿಲಾ (Kusha Kapila) ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂತಲೂ ವರದಿಗಳಿವೆ.
ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ ಸೆಡ್ಡು: ‘ರಘು ತಾತಾ’ ರಿಲೀಸ್ ಡೇಟ್ ಅನೌನ್ಸ್!
ಈ ಮೊದಲು ಮಲೈಕಾ ಅವರು ಅರ್ಜುನ್ ಕಪೂರ್ ತಂದೆ ಬೋನಿ ಕಪೂರ್, ಕುಟುಂಬದ ಇತರ ಸದಸ್ಯರಾದ ಅನಿಲ್ ಕಪೂರ್, ಜಾನ್ವಿ ಕಪೂರ್, ಖುಷಿ ಕಪೂರ್ ಅವರನ್ನು ಇನ್ಸ್ಟಾಗ್ರಾಮ್ನಲ್ಲಿ ಫಾಲೋ ಮಾಡುತ್ತಿದ್ದರು. ಆದರೆ, ಇವರುಗಳನ್ನು ಮಲೈಕಾ ಅನ್ಫಾಲೋ ಮಾಡಿದ್ದಾರೆ. ಆದರೆ, ಅರ್ಜುನ್ ಕಪೂರ್ ಅವರನ್ನು ಈಗಲೂ ಅವರು ಫಾಲೋ ಮಾಡುತ್ತಿದ್ದಾರೆ. ಇತ್ತೀಚೆಗೆ ಮುಂಬೈನಲ್ಲಿರುವ ಕರಣ್ ಜೋಹರ್ ಅವರ ಮನೆಯಲ್ಲಿ ಅರ್ಜುನ್ ಮತ್ತು ಕುಶಾ ಒಟ್ಟಿಗೆ ಪಾರ್ಟಿ ಮಾಡಿದ್ದಾಗಿನಿಂದಲೂ ಸಂಬಂಧದ ವದಂತಿಗಳು ಪ್ರಾರಂಭವಾದವು.
ಮಲೈಕಾ ಈ ಹಿಂದೆ ನಟ, ನಿರ್ಮಾಪಕ ಅರ್ಬಾಜ್ ಖಾನ್ ಅವರನ್ನು ವಿವಾಹವಾಗಿದ್ದರು. ಇಬ್ಬರು 2016ರಲ್ಲಿ ವಿಚ್ಛೇದನ ಪಡೆದುಕೊಂಡಿದ್ದಾರೆ. ಅವರಿಗೆ ಅರ್ಹಾನ್ ಖಾನ್ ಹೆಸರಿನ ಮಗನಿದ್ದಾನೆ. ಮಲೈಕಾ ಮತ್ತು ಅರ್ಜುನ್ ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದು, 2019ರಲ್ಲಿ ಅದನ್ನು ಸಾರ್ವಜನಿಕವಾಗಿ ಹೇಳಿಕೊಂಡಿದ್ದಾರೆ.
ಸಿನಿಮಾ ವಿಚಾರಕ್ಕೆ ಬಂದರೆ ಅರ್ಜುನ್ ಕಪೂರ್ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರ ʼಸಿಂಗಮ್ ಅಗೇನ್ʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಅವರು ಅಜಯ್ ದೇವಗನ್‌ಗೆ ಪ್ರತಿಸ್ಪರ್ಧಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಅಕ್ಷಯ್ ಕುಮಾರ್ ಮತ್ತು ಕರೀನಾ ಕಪೂರ್ ಖಾನ್ ಸೇರಿದಂತೆ ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆಗಸ್ಟ್ 15ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.