ಬೆಂಗಳೂರು: ಹಿರಿಯ ನಟ ಮತ್ತು ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ (Mithun Chakraborty) ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ, ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ಫೆ. 10ರಂದು ಅವರನ್ನು ದಾಖಲು ಮಾಡಲಾಗಿದೆ. ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಿಥುನ್ ಚಕ್ರವರ್ತಿ ಅವರಿಗೆ ಇತ್ತೀಚೆಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿತ್ತು. ಮಿಥುನ್ ಚಕ್ರವರ್ತಿ ಆರೋಗ್ಯದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ ಅವರ ಕುಟುಂಬದವರು ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.
ಪದ್ಮಭೂಷಣ ಪ್ರಶಸ್ತಿ ಬಗ್ಗೆ ಇತ್ತೀಚೆಗೆ ನಟ ಮಾತನಾಡಿ ʻʻಈ ಪ್ರಶಸ್ತಿಯನ್ನು ಸ್ವೀಕರಿಸಿದ್ದಕ್ಕಾಗಿ ನನಗೆ ಹೆಮ್ಮೆಯಿದೆ. ನನಗೆ ಸಂತೋಷವಾಗಿದೆ. ನಾನು ಎಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ನಾನು ಯಾರಿಂದಲೂ ನನಗಾಗಿ ಏನನ್ನೂ ಕೇಳಿಲ್ಲ. ಈ ಪ್ರಶಸ್ತಿ ಸಿಕ್ಕಿದ್ದು ಸಂಪೂರ್ಣವಾಗಿ ವಿಭಿನ್ನ ಭಾವನೆʼʼ ಎಂದಿದ್ದರು.
ಮಿಥುನ್ ಕೊನೆಯ ಬಾರಿಗೆ ಬಂಗಾಳಿ ಚಿತ್ರ ‘ಕಾಬುಲಿವಾಲಾ’ದಲ್ಲಿ ಕಾಣಿಸಿಕೊಂಡರು. ಇದು ಡಿಸೆಂಬರ್ 2023ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಚಿತ್ರವನ್ನು ಸುಮನ್ ಘೋಷ್ ನಿರ್ದೇಶಿಸಿದ್ದಾರೆ.
ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಅವರು ಜಡ್ಜ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 1976ರಲ್ಲೇ ಚಿತ್ರರಂಗಕ್ಕೆ ಕಾಲಿಟ್ಟರು. ಮೊದಲ ಚಿತ್ರದಲ್ಲೇ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆದರು. ಹೀರೊ ಆಗಿ ಅವರು ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅವರು ಪೋಷಕ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.
ಇದನ್ನೂ ಓದಿ: ಮಿಥುನ್ ಚಕ್ರವರ್ತಿ@72
ಹಿಂದಿ, ಬೆಂಗಾಲಿ, ಒಡಿಯಾ, ಭೋಜ್‌ಪುರಿ ಮತ್ತು ತಮಿಳು ಸೇರಿದಂತೆ ಇತರ ಭಾರತೀಯ ಭಾಷೆಗಳಲ್ಲಿ ಸುಮಾರು 350 ಚಿತ್ರಗಳಲ್ಲಿ ನಟಿಸಿದ್ದರು ಮಿಥುನ್ ಚಕ್ರವರ್ತಿ.