Site icon Vistara News

Munawar Faruqui: ಮತ್ತೊಂದು ಮದುವೆಯಾದರಾ ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ?

Munawar Faruqui gets married for second timeʼ Munawar Faruqui gets married for second timeʼ

ಬೆಂಗಳೂರು: ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ (Munawar Faruqui)  ಎರಡನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ ಎಂದು ವರದಿಯಾಗಿದೆ. ಈ ತಿಂಗಳ ಆರಂಭದಲ್ಲಿ ಮೆಹಜಬೀನ್ ಕೋಟ್ವಾಲಾ (Mehzabeen Coatwala) ಅವರನ್ನು ವಿವಾಹವಾಗಿದ್ದಾರೆ ಎಂದು ವರದಿಯಾಗಿದೆ. ಈ ವಿಚಾರವನ್ನು ಅವರು ಮುಚ್ಚಿಟ್ಟಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಮುನಾವರ್ ಮದುವೆಯಲ್ಲಿ ಅವರ ಆತ್ಮೀಯರು ಮಾತ್ರ ಹಾಜರಿದ್ದರು. ಮೇಕಪ್ ಕಲಾವಿದೆ ಮೆಹಜಬೀನ್ ಕೋಟ್ವಾಲಾ ಅವರೊಂದಿಗೆ ಮದುವೆಯಾಗಿದ್ದಾರೆ ಎನ್ನಲಾಗುತ್ತಿದೆ. ಮುನಾವರ್ ಮತ್ತು ಮೆಹಜಬೀನ್ ಕೋಟ್ವಾಲಾ ಮುಂಬೈನ ಐಟಿಸಿ ಗ್ರ್ಯಾಂಡ್ ಮರಾಠಾದಲ್ಲಿ ಆರತಕ್ಷತೆಯನ್ನು ಕೂಡ ಆಯೋಜಿಸಿದ್ದರು ಎಂದು ವರದಿಯಾಗಿದೆ. ವರದಿಯ ಪ್ರಕಾರ, ಮುನಾವರ್ ಅವರ ಸ್ನೇಹಿತ-ನಟ ಹಿನಾ ಖಾನ್ ಈ ಸಮಾರಂಭಕ್ಕೆ ಆಹ್ವಾನಿತರಾದವರಲ್ಲಿ ಒಬ್ಬರು. ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಹಿನಾ ಈ ಫೋಟೊಗಳನ್ನು ಹಂಚಿಕೊಂಡಿದ್ದರು.

ಈ ಹಿಂದೆ ಬಿಗ್‌ ಬಾಸ್‌ನಲ್ಲಿ ಆಯೇಷಾ ಖಾನ್‌ ತಮಗೆ ಮೋಸ ಮಾಡಿದ್ದಾರೆ ಎಂದು ಮುನಾವರ್ ಹೇಳಿಕೊಂಡಿದ್ದರು. 2017ರಲ್ಲಿ ಜಾಸ್ಮಿನ್‌ ಎಂಬುವರನ್ನು ಮುನಾವರ್‌ ವಿವಾಹವಾಗಿದ್ದರು. ವಿಚ್ಛೇದನ ಬಳಿಕ ಮಗನನ್ನು ಇವರೇ ನೋಡಿಕೊಳ್ಳುತ್ತಿದ್ದಾರೆ. ಇದಾದ ಬಳಿಕ ಮುನಾವರ್‌ ನಾಜಿಲ್‌ ಸಿತೈಶಿ ಎಂಬುವರ ಜತೆ ಡೇಟಿಂಗ್‌ ನಡೆಸುತ್ತಿದ್ದರು.

ಇದನ್ನೂ ಓದಿ: Munawar Faruqui: ʻಬಿಗ್ ಬಾಸ್ 17ʼರ ವಿಜೇತ ಮುನಾವರ್ ಫಾರೂಕಿ ಆಸ್ಪತ್ರೆಗೆ ದಾಖಲು

ಮುನಾವರ್‌ ಅವರು ಸಾಕಷ್ಟು ವಿವಾದಾತ್ಮಕ ಸುದ್ದಿಗಳಿಗೆ ಹೆಸರುವಾಸಿ. ಮುಂಬೈ ಬಂದರು ಪ್ರದೇಶದ ಹುಕ್ಕಾ ಬಾರ್‌ನಲ್ಲಿ ಪೊಲೀಸರು ಮಾ.26ರ ಮಂಗಳವಾರ ದಾಳಿ ನಡೆಸಿದ್ದರು. ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಮೂಲಕ ಹೊರಗೆ ಬಂದಿದ್ದರು ಮುನಾವರ್.

ಏ. 10ರ ಮಧ್ಯರಾತ್ರಿ ಮುಂಬೈನ ಮೊಹಮ್ಮದ್ ಅಲಿ ರಸ್ತೆಯಲ್ಲಿ ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಮೇಲೆ ರೆಸ್ಟೋರೆಂಟ್ ಮಾಲೀಕರು ಮೊಟ್ಟೆ ಎಸೆದಿದ್ದರು. ಆರೋಪಿಗಳು ಮುನಾವರ್ ಫಾರೂಕಿ ಅವರನ್ನು ಮಿನಾರಾ ಮಸೀದಿ ಪ್ರದೇಶದ ತಮ್ಮ ರೆಸ್ಟೋರೆಂಟ್‌ ಇಫ್ತಾರ್‌ಗೆ ಆಹ್ವಾನಿಸಿದ್ದರು. ಆದರೆ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಹತ್ತಿರದ ಮತ್ತೊಂದು ಉಪಾಹಾರ ಗೃಹಕ್ಕೆ ಹೋಗಿದ್ದರು. ಇದರಿಂದಾಗಿ ಕೋಪಗೊಂಡು ಮುನಾವರ್ ಫಾರೂಕಿ ಮೇಲೆ ಮೇಲೆ ಮೊಟ್ಟೆಗಳನ್ನು ಎಸೆದಿರುವುದಾಗಿ ವರದಿಯಾಗಿತ್ತು. ಘಟನೆಯಲ್ಲಿ ಭಾಗಿಯಾಗಿರುವ ಆರು ಮಂದಿಯ ವಿರುದ್ಧ ಪೈದೋನಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿತ್ತು.

Exit mobile version