ಬೆಂಗಳೂರು: ರಣಬೀರ್ ಕಪೂರ್ (Ranbir Kapoor) ಮುಂಬರುವ ಸಿನಿಮಾ ‘ರಾಮಾಯಣ’ ಚಿತ್ರದ ರಾಮನ ಪಾತ್ರಕ್ಕಾಗಿ ಕಠಿಣ ತರಬೇತಿಯನ್ನು ಪಡೆಯುತ್ತಿದ್ದಾರೆ. ನಟ ಸಿನಿಮಾಗಾಗಿ ತರಬೇತಿ ಪಡೆಯುತ್ತಿರುವ ವಿಡಿಯೊ ವೈರಲ್ ಆಗಿದೆ. ‘ದಂಗಲ್’ ಸಿನಿಮಾ ಮೂಲಕ ಗಮನ ಸೆಳೆದ ನಿತೇಶ್ ತಿವಾರಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ರಣಬೀರ್ ಕಪೂರ್ ಅವರು ತಮ್ಮ ಟ್ರೇನರ್ ಜತೆ ಹಳ್ಳಿಗೆ ಹೋಗಿ ತರಬೇತಿ ಪಡೆದುಕೊಳ್ಳುತ್ತಿದ್ದಾರೆ. ನಟ ವಿವಿಧ ಬಗೆಯ ವ್ಯಾಯಾಮ ಮಾಡುತ್ತಿರುವ ವಿಡಿಯೊವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.
ರಣಬೀರ್ ಅವರ ತರಬೇತುದಾರರು ಪೋಸ್ಟ್ ಮಾಡಿದ ವಿಡಿಯೊ ಇದೀಗ ವೈರಲ್ ಆಗಿದೆ. ರಣಬೀರ್ ಕಪೂರ್ ತಮ್ಮ ಪಾತ್ರಕ್ಕಾಗಿ ಕಠಿಣವಾಗಿ ವರ್ಕೌಟ್ ಮಾಡುತ್ತಿರುವುದುನ್ನು ಕಂಡು ಫ್ಯಾನ್ಸ್ ಫಿದಾ ಆಗಿದ್ದಾರೆ. ರನ್ನಿಂಗ್, ಈಜುವುದು ಹೀಗೆ ಅನೇಕ ತಾಲೀಮು ನಡೆಸುತ್ತಿದ್ದಾರೆ.
ಈ ಸಿನಿಮಾದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಯಶ್ ಅವರು ರಾವಣನಾಗಿ ಕಾಣಿಸಿಕೊಳ್ಳುತ್ತಾರೆ ಎಂಬ ಗಾಸಿಪ್ ಹಬ್ಬಿದೆ. ಸಾಯಿ ಪಲ್ಲವಿ ಅವರಿಗೆ ಸೀತೆಯ ಪಾತ್ರವನ್ನು ನೀಡಲಾಗುತ್ತಿದೆ ಎಂದು ಕೂಡ ಅನೇಕ ಮಾಧ್ಯಮಗಳು ಸುದ್ದಿ ಪ್ರಕಟ ಮಾಡಿವೆ.
ಇದನ್ನೂ ಓದಿ: Ranbir Kapoor: ಐಷಾರಾಮಿ ಕಾರು ಖರೀದಿಸಿದ ರಣಬೀರ್ ಕಪೂರ್; ಇವರ ಬಳಿ ಎಂಥೆಂಥ ಕಾರುಗಳಿವೆ ಗೊತ್ತೆ?
ಈ ಮುಂಚೆ ನಟರ ವೇಷಭೂಷಣದಲ್ಲಿರುವ ಚಿತ್ರಗಳು ಸೋರಿಕೆಯಾದ ಬಳಿಕ ಚಿತ್ರೀಕರಣದ ಮೊದಲ ಎರಡು ದಿನಗಳು ಕಾಲ ನಿರ್ದೇಶಕರು ಒತ್ತಡವನ್ನುಂಟುಮಾಡಿಕೊಂಡಿದ್ದರು ಎಂದು ವರದಿಯಾಗಿದೆ. ಈ ಫೋಟೊಗಳಿಂದ ನಿರ್ದೇಶಕ ನಿತೇಶ್ ತಿವಾರಿ ತುಂಬ ಬೇಸರಿಸಿಗೊಂಡಿದ್ದರು ಎಂದು ವರದಿಯಾಗಿದೆ. ಈಗಾಗಲೇ ಸೆಟ್‌ನಲ್ಲಿ ಕಟ್ಟುನಿಟ್ಟಾದ ಕ್ರಮ ಕೈಗೊಂಡಿದ್ದು ಫೋನ್‌ಕೂಡ ನಿಷೇಧಿಸಲಾಗಿದೆ ಎನ್ನಲಾಗಿದೆ.
ದೃಶ್ಯಕ್ಕೆ ಅಗತ್ಯವಿರುವ ನಟರು ಮತ್ತು ತಂತ್ರಜ್ಞರನ್ನು ಮಾತ್ರ ಸೆಟ್‌ನಲ್ಲಿ ಇರುವಂತೆ ಆದೇಶ ನೀಡಿದ್ದು, ಉಳಿದವರಿಗೆ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ.
ಏಪ್ರಿಲ್ 15ರ ವೇಳೆಗೆ ರಣ್‌ಬೀರ್ ಕಪೂರ್ ಕೂಡ ರಾಮಾಯಣ ಚಿತ್ರೀಕರಣದಲ್ಲಿ ಭಾಗಿ ಆಗುವ ಸಾಧ್ಯತೆಯಿದೆ. ಇನ್ನು ದಶರಥನಾಗಿ ಅರುಣ್ ಗೋವಿಲ್, ಹನುಮಂತನಾಗಿ ಸನ್ನಿ ಡಿಯೋಲ್ ನಟಿಸುತ್ತಾರೆ ಎನ್ನಲಾಗುತ್ತಿದೆ. ರಾವಣನ ಸಹೋದರಿ ಶೂರ್ಪನಖಿಯಾಗಿ ರಕುಲ್‌ಪ್ರೀತ್ ಸಿಂಗ್ ಹಾಗೂ ಮಡದಿ ಮಂಡೋದರಿಯಾಗಿ ಸಾಕ್ಷಿ ತನ್ವರ್ ನಟಿಸುತ್ತಾರೆ ಎಂದು ವರದಿಯಾಗಿದೆ.
ರಾಮನವಮಿ ದಿನ ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗುವ ಸಾಧ್ಯತೆಯಿದೆ. ಸದ್ಯ ಯಶ್ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ‘ರಾಮಾಯಣ’ ಚಿತ್ರದಲ್ಲಿ ಸದ್ಯ ಬೇರೆ ಕಲಾವಿದರ ದೃಶ್ಯಗಳನ್ನು ಸೆರೆಹಿಡಿಯಲಿದ್ದು ನಿಧಾನವಾಗಿ ಯಶ್ ತಂಡ ಸೇರಿಕೊಳ್ಳುತ್ತಾರೆ ಎನ್ನಲಾಗುತ್ತಿದೆ. ಚಿತ್ರದಲ್ಲಿ ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ನಟಿಸುತ್ತಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಯಶ್ ಕೂಡ ಇನ್ನು ಮಾತನಾಡಿಲ್ಲ.