ಬೆಂಗಳೂರು: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ (Sachin Tendulkar) ಡಿಸೆಂಬರ್ 2ರ ರಾತ್ರಿ ನಟ ವಿಕ್ಕಿ ಕೌಶಲ್ ಅವರ ʻಸ್ಯಾಮ್ ಬಹದ್ದೂರ್ʼ ಸಿನಿಮಾದ ವಿಶೇಷ ಪ್ರದರ್ಶನದಲ್ಲಿ ಭಾಗವಹಿಸಿದ್ದರು. ತೆಂಡೂಲ್ಕರ್ ಅವರ ಪತ್ನಿ ಅಂಜಲಿ ತೆಂಡೂಲ್ಕರ್ ಕೂಡ ಜತೆಗಿದ್ದರು. ಸ್ಕ್ರೀನಿಂಗ್ ಆದ ಬಳಿಕ ಸಚಿನ್ ತೆಂಡೂಲ್ಕರ್ ಜತೆ ವಿಕ್ಕಿ ಪೋಸ್ ನೀಡಿದ್ದಾರೆ.
ಸಚಿನ್ ಚಿತ್ರವನ್ನು ಕಂಡು “ಇದು ತುಂಬಾ ಒಳ್ಳೆಯ ಸಿನಿಮಾ. ವಿಕ್ಕಿ ಅವರ ನಟನೆಯಿಂದ ನಾನು ತುಂಬಾ ಪ್ರಭಾವಿತನಾಗಿದ್ದೇನೆ. ಫೀಲ್ಡ್ ಮಾರ್ಷಲ್ ಸ್ಯಾಮ್ ನಿಜವಾಗಿಯೂ ಇದ್ದಂತೆ ಭಾಸವಾಯಿತು. ನಮ್ಮ ದೇಶದ ಇತಿಹಾಸ ತಿಳಿಯಲು ಎಲ್ಲಾ ಜನರೇಶನ್ ಅವರಿಗೆ ಪ್ರಮುಖ ಚಿತ್ರವಾಗಿದೆʼʼ ಎಂದು ಮಾಧ್ಯಮದ ಮುಂದೆ ಹೇಳಿಕೊಂಡರು.
ವಿಕ್ಕಿ ಅವರು ಸಚಿನ್ ತೆಂಡೂಲ್ಕರ್ ಅವರೊಂದಿಗಿನ ಫೋಟೊವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. “ನನ್ನ ಬಾಲ್ಯದ ಹೀರೊ ಇಂದು ನನ್ನ ಸಿನಿಮಾವನ್ನು ನೋಡಿದ್ದಾರೆ. ಧನ್ಯವಾದಗಳು ಸಚಿನ್ ಸರ್. ನಿಮ್ಮ ಮಾತುಗಳಿಗೆʼʼಎಂದು ಬರೆದುಕೊಂಡಿದ್ದಾರೆ. ಸ್ಯಾಮ್ ಬಹದ್ದೂರ್ ಭಾರತದಲ್ಲಿ ಮೊದಲ ದಿನದಂದು 5.50 ಕೋಟಿ ರೂ. ಗಳನ್ನು ಗಳಿಸಿತು. ಭಾರತದಲ್ಲಿ ಶನಿವಾರ 9.25 ಕೋಟಿ ರೂ. ನಿವ್ವಳ ಗಳಿಸಿದೆ ಎಂದೂ ವರದಿಯಾಗಿದೆ. ಡಿಸೆಂಬರ್ 2ರಂದು ಚಿತ್ರದ ಒಟ್ಟು ಕಲೆಕ್ಷನ್ 15.5 ಕೋಟಿ ರೂ. ಆಗಿದೆ ಎಂದು ವರದಿಯಾಗಿದೆ.
ಮೇಘನಾ ಗುಲ್ಜಾರ್ ನಿರ್ದೇಶಿಸಿದ ಈ ಚಿತ್ರದಲ್ಲಿ ಸನ್ಯಾ ಮಲ್ಹೋತ್ರಾ ಮತ್ತು ಫಾತಿಮಾ ಸನಾ ಶೇಖ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ತೆಂಡೂಲ್ಕರ್ ಜತೆಗೆ ಕ್ರಿಕೆಟಿಗರಾದ ಜಹೀರ್ ಖಾನ್ ಮತ್ತು ಅಜಿತ್ ಅಗರ್ಕರ್ ಕೂಡ ಪ್ರದರ್ಶನದಲ್ಲಿ ಹಾಜರಾಗಿದ್ದರು.
ಮೇಘನಾ ಗುಲ್ಜಾರ್ ನಿರ್ದೇಶನದ ಚಿತ್ರ, ರಣಬೀರ್ ಕಪೂರ್ ಅವರ ‘ಅನಿಮಲ್ ಸಿನಿಮಾ ಜತೆ ಕ್ಲಾಶ್ ಆಗಿದೆ. ‘ವಿಕ್ಕಿ ಹೊರತುಪಡಿಸಿ, ಚಿತ್ರದಲ್ಲಿ ಸನ್ಯಾ ಮಲ್ಹೋತ್ರಾ ಮತ್ತು ಫಾತಿಮಾ ಸನಾ ಶೇಖ್ ಪ್ರಮುಖ ಪಾತ್ರಗಳಲ್ಲಿದ್ದಾರೆ.
ಇದನ್ನೂ ಓದಿ: Sachin Tendulkar : ಲಂಕಾ ವಿರುದ್ಧ ಪಂದ್ಯದ ಬೆಸ್ಟ್ ಫೀಲ್ಡರ್ ಯಾರೆಂದು ಘೋಷಿಸಿದ ಸಚಿನ್ ತೆಂಡೂಲ್ಕರ್
ದೇಶದ ಮೊದಲ ಫೀಲ್ಡ್ ಮಾರ್ಷಲ್ ಕಥೆ ಇದು. ಈ ಸಿನಿಮಾ 1971ರ ಭಾರತ ಮತ್ತು ಪಾಕಿಸ್ತಾನ ಯುದ್ಧದ ಸಮಯದಲ್ಲಿ ಭಾರತೀಯ ಸೇನೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಸ್ಯಾಮ್ ಮಾಣೆಕ್ ಶಾ ಅವರ ನಿಜಜೀವನದ ಘಟನೆಗಳನ್ನು ಆಧರಿಸಿದೆ. ವಿಕ್ಕಿ ಕೌಶಲ್ ಅಭಿನಯದ ಸ್ಯಾಮ್ ಬಹದ್ದೂರ್ ದೇಶದ ಮೊದಲ ಫೀಲ್ಡ್ ಮಾರ್ಷಲ್ ಕಥೆ ಇದು. ಈ ಸಿನಿಮಾ 1971ರ ಭಾರತ ಮತ್ತು ಪಾಕಿಸ್ತಾನ ಯುದ್ಧದ ಸಮಯದಲ್ಲಿ ಭಾರತೀಯ ಸೇನೆಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಸ್ಯಾಮ್ ಮಾಣೆಕ್ ಶಾ ಅವರ ನಿಜಜೀವನದ ಘಟನೆಗಳನ್ನು ಆಧರಿಸಿದೆ. ಸ್ಯಾಮ್ ಮಾಣೆಕ್ ಶಾ ಅವರು ಫೀಲ್ಡ್ ಮಾರ್ಷಲ್ ಹುದ್ದೆಗೇರಿದ ಮೊದಲ ಭಾರತೀಯ ಸೇನಾ ಅಧಿಕಾರಿ. ಎರಡನೇ ವಿಶ್ವ ಯುದ್ಧದ ಸಮಯದಲ್ಲಿ ತಮ್ಮ ಮಿಲಿಟರಿ ವೃತ್ತಿಜೀವನವನ್ನು ಪ್ರಾರಂಭಿಸಿ, ನಾಲ್ಕು ದಶಕಗಳ ಕಾಲ. ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಐದು ಯುದ್ಧಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.