Site icon Vistara News

Sahil Khan: ಪೊಲೀಸರಿಂದ ತಪ್ಪಿಸಿಕೊಳ್ಳಲು 1,800 ಕಿ.ಮೀ ಪ್ರಯಾಣಿಸಿದ್ದ ನಟ ಸಾಹಿಲ್ ಖಾನ್!

Sahil Khan Travelled 1,800 km In 4 Days To Avoid Arrest

ಬೆಂಗಳೂರು: ಮಹದೇವ್ ಬೆಟ್ಟಿಂಗ್ ಆ್ಯಪ್ (Mahadev betting app case) ಪ್ರಕರಣದ ಆರೋಪದ ಮೇಲೆ (Betting App Case) ನಟ ಮತ್ತು ಫಿಟ್‌ನೆಸ್‌ ಪ್ರಭಾವಿ ಸಾಹಿಲ್ ಖಾನ್ (Sahil Khan Arrested) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮುಂಚೆ ಪೊಲೀಸರಿಂದ ತಪ್ಪಿಸಿಕೊಳ್ಳಲು ನಟ ಹರಸಾಹಸ ಪಟ್ಟಿದ್ದರಂತೆ. ನಾಲ್ಕು ದಿನಗಳಲ್ಲಿ ಐದು ರಾಜ್ಯಗಳಂತೆ 1,800 ಕಿ. ಮೀ ಟ್ರಾವೆಲ್‌ ಮಾಡಿದ್ದಾರೆ ಎಂದು ವರದಿಯಾಗಿದೆ. ಕೊನೆಗೂ ಪೊಲೀಸರು ನಟನನ್ನು ಟ್ರ್ಯಾಕ್‌ ಮಾಡಿ ಛತ್ತೀಸ್‌ಗಢದ ಜಗದಾಲ್‌ಪುರದಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಏಪ್ರಿಲ್ 25ರಂದು ಸಾಹಿಲ್ ಖಾನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ನಟ ಓಡಿ ಹೋಗಲು ಪ್ರಯತ್ನಿಸಿದ್ದರು ಎಂದು ವರದಿಯಾಗಿದೆ. ಗೋವಾಗೆ ಮೊದಲು ನಟ ಹೊರಟು ಅಲ್ಲಿಂದ ಮಹಾರಾಷ್ಟ್ರ ಬಳಿಕ ಕರ್ನಾಟಕದ ಹುಬ್ಬಳ್ಳಿಗೆ ತೆರಳಿ ಹೈದರಾಬಾದ್‌ಗೆ ಪ್ರಯಾಣ ಬೆಳೆಸಿದರು. ಗುರುತು ಹಿಡಿಯಬಾರದೆಂದು ತಪ್ಪಿಸಿಕೊಳ್ಳಲು, ಖಾನ್ ವೇಷ ಬದಲಾಯಿಸಿಕೊಂಡಿದ್ದರಂತೆ. ಸ್ಕಾರ್ಫ್‌ ಧರಿಸಿ ಪ್ರಯಾಣ ಬೆಳೆಸಿದ್ದರು ಎಂದು ವರದಿಯಾಗಿದೆ.

ಇಷ್ಟಾದರೂ ಹೈದರಾಬಾದ್‌ನಲ್ಲಿರುವಾಗ ಪೊಲೀಸರು ಅವರ ಸ್ಥಳವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು. ಕೊನೆಗೂ ಛತ್ತೀಸ್‌ಗಢದ ಜಗದಲ್‌ಪುರದ ಆರಾಧ್ಯ ಇಂಟರ್‌ನ್ಯಾಶನಲ್ ಹೋಟೆಲ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ನಟ ಸಾಹಿಲ್ ಖಾನ್ 4 ದಿನಗಳಲ್ಲಿ 1,800 ಕಿಮೀ ಪ್ರಯಾಣಿಸಿದ್ದಾರೆ.

ಇದನ್ನೂ ಓದಿ: Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

ಮುಂಬೈ ಪೊಲೀಸರು 72 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ್ದಾರೆ. ನಟನನ್ನು ಬಂಧಿಸಿದ ಬಳಿಕ ಪೊಲೀಸರು ನಟನಿಂದ ಎರಡು ಮೊಬೈಲ್ ಫೋನ್‌ಗಳು ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ. ಮುಂಬೈ ನ್ಯಾಯಾಲಯ ಖಾನ್ ಅವರನ್ನು ಮೇ 1 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಏನಿದು ಪ್ರಕರಣ?

ಮಹದೇವ್ ಬೆಟ್ಟಿಂಗ್ ಆ್ಯಪ್ (Mahadev betting app case) ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ (Betting App Case) ನಟ ಮತ್ತು ಫಿಟ್‌ನೆಸ್‌ ಪ್ರಭಾವಿ ಸಾಹಿಲ್ ಖಾನ್ (Sahil Khan Arrested) ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಛತ್ತೀಸ್‌ಗಢದಲ್ಲಿ ಮುಂಬೈ ಸೈಬರ್ ಸೆಲ್‌ನ ವಿಶೇಷ ತನಿಖಾ ತಂಡ (ಎಸ್‌ಐಟಿ) ನಟನನ್ನು ಬಂಧಿಸಿದ್ದು, ಬಾಂಬೆ ಹೈಕೋರ್ಟ್‌ ಪೂರ್ವ ಬಂಧನದ ಜಾಮೀನು ಅರ್ಜಿಯನ್ನು (pre-arrest bail was rejected ) ತಿರಸ್ಕರಿಸಿತ್ತುಇದಕ್ಕೂ ಮೊದಲು, 2023ರ ಡಿಸೆಂಬರ್‌ನಲ್ಲಿ ಸಾಹಿಲ್ ಮತ್ತು ಇದೇ ಪ್ರಕರಣಕ್ಕೆ ಸಂಬಂಧಿಸಿದ ಇನ್ನುಳಿದ ಮೂವರನ್ನು ವಿಶೇಷ ತನಿಖಾ ತಂಡ ವಿಚಾರಣೆಗೆ ಕರೆದಿತ್ತು. ಆದರೆ ಅವರು ಹಾಜರಾಗಲಿಲ್ಲ. ತಾವು ಕೇವಲ ಬ್ರ್ಯಾಂಡ್ ಪ್ರಮೋಟರ್‌ ಎಂದು ಹೇಳಿಕೊಂಡು ಬಂದಿದ್ದರು. ಆದರೆ ಪೊಲೀಸರು ಸಾಹಿಲ್ ಅವರು ಆ್ಯಪ್‌ನ ಸಹ ಮಾಲೀಕರು ಆಗಿದ್ದರು ಎಂದು ಹೇಳಿದ್ದರು.

ನಟ ಬೆಟ್ಟಿಂಗ್ ಆ್ಯಪ್‌ ಸಂಬಂಧಿಸಿದ ಪ್ರಚಾರದ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲು ತಿಂಗಳಿಗೆ 3 ಲಕ್ಷ ರೂ. ಹಣವನ್ನು ಪಡೆದುಕೊಳ್ಳುತ್ತಿದ್ದರು ಎಂದು ವರದಿಯಾಗಿತ್ತು. ಮಾತ್ರವಲ್ಲ ನಟ 24 ತಿಂಗಳುಗಳ ಕಾಲ ಈ ಆ್ಯಪ್‌ ಜತೆಗೆ ಒಪ್ಪಂದ ಮಾಡಿಕೊಂಡಿದ್ದರು. ಇದರ ಹೊರತಾಗಿಯೂ, ಕಾನೂನುಬಾಹಿರ ಕಾರ್ಯಾಚರಣೆಯಲ್ಲಿ ನೇರವಾಗಿ ಭಾಗಿಯಾಗಿರುವುದನ್ನು ಉಲ್ಲೇಖಿಸಿ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ʻಸ್ಟೈಲ್ʼ ಮತ್ತು ʻಎಕ್ಸ್‌ಕ್ಯೂಸ್ ಮಿʼ ಸಿನಿಮಾ ಪಾತ್ರಗಳಿಗೆ ಹೆಸರುವಾಸಿಯಾದ ಸಾಹಿಲ್ ಈಗ ಫಿಟ್‌ನೆಸ್‌ನತ್ತ ಗಮನಹರಿಸಿದ್ದಾರೆ.

2023ರಲ್ಲಿ, ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ವಿಚಾರಣೆ ನಡೆಸಿದ ಕ್ರೈಂ ಬ್ರ್ಯಾಂಚ್‌ ವಿಭಾಗ ಡಿಸೆಂಬರ್ 15 ರಂದು ತಮ್ಮ ಹೇಳಿಕೆಗಳನ್ನು ದಾಖಲಿಸಲು ಸಾಹಿಲ್ ಖಾನ್ ಮತ್ತು ಇತರ ಮೂವರಿಗೆ ಸಮನ್ಸ್ ನೀಡಿತ್ತು ಎಂದು ವರದಿಯಾಗಿತ್ತು. ಆದರೆ, ಸಾಹಿಲ್ ಖಾನ್ ತನಿಖೆಗಾಗಿ ಪೊಲೀಸರ ಮುಂದೆ ಹಾಜರಾಗಲಿಲ್ಲ. ಇದಲ್ಲದೇ ಸೋಷಿಯಲ್‌ ಮೀಡಿಯಾಗಳಲ್ಲಿ ನಿರಂತರವಾಗಿ ಪೋಸ್ಟ್‌ ಮಾಡುತ್ತಲೇ ಇರುತ್ತಿದ್ದರು. ಪೊಲೀಸರ ಸಮನ್ಸ್‌ಗಳನ್ನು ಅವರು ನಿರ್ಲಕ್ಷಿಸುತ್ತಿರುವುದನ್ನು ಕಂಡು ನೆಟ್ಟಿಗರಿಂದ ಟೀಕೆಗೆ ಗುರಿಯಾಗುತ್ತಿದ್ದರು. ವರದಿಗಳ ಪ್ರಕಾರ, ಸಾಹಿಲ್ ಖಾನ್ ಅವರು ಈ ಆ್ಯಪ್ ಪ್ರಚಾರ ಮಾಡಲು ಸೆಲೆಬ್ರಿಟಿ ಕೂಟಗಳನ್ನು ಆಯೋಜಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು.

Exit mobile version