Site icon Vistara News

Sonakshi Sinha: ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ಸೋನಾಕ್ಷಿ ಸಿನ್ಹಾ ಅದ್ಧೂರಿ ಮದುವೆ?

Sonakshi Sinha to marry boyfriend Zaheer Iqbal on June 23

ಬೆಂಗಳೂರು: ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ (Sonakshi Sinha) ಅವರು ತಮ್ಮ ಬಾಯ್‌ಫ್ರೆಂಡ್‌ ನಟ ಜಹೀರ್ ಇಕ್ಬಾಲ್ ಜತೆ ಜೂನ್ 23ರಂದು ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಸೋನಾಕ್ಷಿ ಮತ್ತು ಜಹೀರ್ ದಕ್ಷಿಣ ಮುಂಬೈನಲ್ಲಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಆದರೆ ಜೋಡಿ ಎಲ್ಲಿಯೂ ತಮ್ಮ ಮದುವೆ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಸೋನಾಕ್ಷಿ ಹಾಗೂ ಜಹೀರ್ ಹಲವು ವರ್ಷಗಳಿಂದ ಸುತ್ತಾಟ ನಡೆಸುತ್ತಿದ್ದರೂ ಪ್ರೀತಿ ವಿಚಾರವನ್ನು ಒಪ್ಪಿಕೊಂಡಿಲ್ಲ. ಇತ್ತೀಚೆಗೆ ಇವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿತ್ತು. ಇವರು ಈಗ ವಿವಾಹ ಆಗುವ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸೋನಾಕ್ಷಿ 2010ರಲ್ಲಿ ʻದಬಾಂಗ್‌ʼ ಸಿನಿಮಾದಿಂದ ಬಾಲಿವುಡ್‌ಗೆ ಪದಾರ್ಪಣೆ ಮಾಡಿದರೆ, ಜಹೀರ್ ಅವರ ಮೊದಲ ಚಿತ್ರ 2019ರಲ್ಲಿ ತೆರೆ ಕಂಡ ʻನೋಟ್‌ಬುಕ್ʼ ಆಗಿತ್ತು. ʻಡಬಲ್ ಎಕ್ಸ್‌ಎಲ್‌ʼ ಸಿನಿಮಾದಲ್ಲಿ ಜಹೀರ್ ಇಕ್ಬಾಲ್ ಹಾಗೂ ಸೋನಾಕ್ಷಿ ಸಿನ್ಹಾ ಒಟ್ಟಿಗೆ ನಟಿಸಿದ್ದರು.

ಮುಂಬೈನ ಬಾಸ್ಟಿಯನ್​ನಲ್ಲಿ ವಿವಾಹ ನಡೆಯಲಿದೆ ಎನ್ನಲಾಗಿದೆ. ಜಹೀರ್ ಅವರನ್ನು ಸೋನಾಕ್ಷಿ ಭೇಟಿ ಮಾಡಿದ್ದು ಸಲ್ಮಾನ್ ಖಾನ್ ಮೂಲಕ. ಸಲ್ಲು ಹಾಗೂ ಜಹೀರ್ ಗೆಳೆಯರು. ಭೇಟಿ ಬಳಿಕ ಸೋನಾಕ್ಷಿ ಹಾಗೂ ಜಹೀರ್ ಮಧ್ಯೆ ಫ್ರೆಂಡ್​ಶಿಪ್ ಬೆಳೆಯಿತು. ಆ ಬಳಿಕ ಅದು ಪ್ರೀತಿಗೆ ತಿರುಗಿತು ಎನ್ನಲಾಗಿದೆ.

ಕಳೆದ ವಾರ ಸೋನಾಕ್ಷಿ ಅವರ ಹುಟ್ಟುಹಬ್ಬದಂದು, ಜಹೀರ್ ಹಲವು ಫೋಟೊಗಳನ್ನು ಹಂಚಿಕೊಂಡಿದ್ದರು. ಮೊದಲ ಚಿತ್ರದಲ್ಲಿ ಸೋನಾಕ್ಷಿ ಅವರನ್ನು ಜಹೀರ್ ಬಿಗಿಯಾಗಿ ಅಪ್ಪಿಕೊಳ್ಳುವುದು ಇದೆ. “ಜನ್ಮದಿನದ ಶುಭಾಶಯಗಳು ಸೋನಾʼʼಎಂದು ಶೀರ್ಷಿಕೆ ನೀಡಿದ್ದರು.

ಈ ಹಿಂದೆ ಸಲ್ಮಾನ್‌ ಖಾನ್‌ ಅವರ ಸಹೋದರಿ ಅರ್ಪಿತಾ ಖಾನ್‌ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಸೋನಾಕ್ಷಿಯನ್ನು “ಅತ್ತಿಗೆ” ಎಂದು ಕರೆದಿದ್ದರು. ಕೆಲವೇ ಕ್ಷಣಗಳಲ್ಲಿ ಆ ಸ್ಟೋರಿಯನ್ನು ಡಿಲೀಟ್‌ ಮಾಡಿದ್ದರು ಕೂಡ. ಆಗ ಸೋನಾಕ್ಷಿ ಹಾಗೂ ಜಹೀರ್‌ ನಡುವೆ ಸಂಬಂಧ ಇದೆ ಎಂಬ ಸುದ್ದಿ ವೈರಲ್‌ ಆಗಿತ್ತು.

ಇದನ್ನೂ ಓದಿ: Sonakshi Sinha : ಪ್ರೀತಿಯಲ್ಲಿ ಬಿದ್ದ ಸೋನಾಕ್ಷಿ, ಲವ್‌ ಯು ಎಂದು ಪೋಸ್ಟ್‌ ಹಾಕಿದ ಬಾಯ್‌ಫ್ರೆಂಡ್‌ ಯಾರು ನೋಡಿ!

ಸೋನಾಕ್ಷಿ ಕೊನೆಯದಾಗಿ ಸಂಜಯ್ ಲೀಲಾ ಬನ್ಸಾಲಿಯವರ ಸಿರೀಸ್‌ ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಕಾಣಿಸಿಕೊಂಡಿದ್ದರು. ಹೀರಾಮಂಡಿ: ದಿ ಡೈಮಂಡ್ ಬಜಾರ್‌ ಸದ್ಯ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮ್ ಆಗುತ್ತಿದೆ. ಹೀರಾಮಂಡಿ: ದಿ ಡೈಮಂಡ್ ಬಜಾರ್‌ನಲ್ಲಿ ಮನಿಶಾ ಕೊಯಿರಾಲಾ, ರಿಚಾ ಚಡ್ಡಾ, ಸಂಜೀದಾ ಶೇಖ್, ಅದಿತಿ ರಾವ್ ಹೈದರಿ, ಶರ್ಮಿನ್ ಸೆಗಲ್ ಮೆಹ್ತಾ, ಫರೀದಾ ಜಲಾಲ್, ಫರ್ದೀನ್ ಖಾನ್ ಮತ್ತು ಅಧ್ಯಯನ್ ಸುಮನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Exit mobile version