Site icon Vistara News

Sonakshi Sinha: ಮುಸ್ಲಿಂ ಹುಡುಗನ ಜತೆ ಮಗಳು ಸೋನಾಕ್ಷಿ ಮದುವೆ; ಶತ್ರುಘ್ನ ಸಿನ್ಹಾ ಮುನಿಸು?

Sonakshi Sinha

ಮುಂಬಯಿ: ಬಾಲಿವುಡ್ ನಟಿ (bollywood actress) ಸೋನಾಕ್ಷಿ ಸಿನ್ಹಾ (Sonakshi Sinha) ಮುಸ್ಲಿಂ ಹುಡುಗನ ಜತೆ ಮದುವೆ ಆಗುತ್ತಿರುವ ಬಗ್ಗೆ (Sonakshi Sinha’s Wedding) ಮತ್ತು ತಮ್ಮ ಮದುವೆ ಬಗ್ಗೆ ಮೊದಲೇ ತಿಳಿಸದಿದ್ದಕ್ಕಾಗಿ ತಂದೆ ಶತ್ರುಘ್ನ ಸಿನ್ಹಾ (Shatrughan Sinha) ಅವರು ಅಸಮಾಧಾನಗೊಂಡಿದ್ದಾರೆ ಎಂದು ಸೋನಾಕ್ಷಿ ಅವರ ಮಾವ ಪಹ್ಲಾಜ್ ನಿಹಲಾನಿ (Pahlaj Nihalani) ಖಚಿತಪಡಿಸಿದ್ದಾರೆ.

ಕಳೆದ ವಾರವಷ್ಟೇ ಸೋನಾಕ್ಷಿ ಅವರು ತಮ್ಮ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಅವರನ್ನು ವರಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದ್ದು, ಬಳಿಕ ಇದನ್ನು ಮದುವೆಯ ಆಮಂತ್ರಣವು ದೃಢಪಡಿಸಿತು. ಸೋನಾಕ್ಷಿ ಏಳು ವರ್ಷಗಳಿಂದ ಜಹೀರ್ ಜೊತೆ ಡೇಟಿಂಗ್ ನಡೆಸುತ್ತಿದ್ದಾರೆ. ಮದುವೆಯ ವದಂತಿಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ ಶತ್ರುಘ್ನ ಅವರು ಮದುವೆಯ ಬಗ್ಗೆ ತಿಳಿದಿರಲಿಲ್ಲ ಎಂದು ಒಪ್ಪಿಕೊಂಡರು. ಮಾತ್ರವಲ್ಲದೇ ಅವರು ಇದರಿಂದ ಅಸಮಾಧಾನಗೊಂಡಿರುವುದು ಅವರ ಹೇಳಿಕೆಯಿಂದ ತಿಳಿದು ಬಂದಿತ್ತು.

ಈ ಬಗ್ಗೆ ಪಹ್ಲಾಜ್ ನಿಹಲಾನಿ ಅವರು ಪ್ರತಿಕ್ರಿಯೆ ನೀಡಿದ್ದು, ಶತ್ರುಘ್ನ ತಮ್ಮ ಮಗಳೊಂದಿಗೆ ಅಸಮಾಧಾನ ಹೊಂದಿದ್ದಾರೆ. ಆದರೆ ಅದು ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಅವರು ಖಚಿತಪಡಿಸಿದರು. ಶತ್ರುಘ್ನ ಕೂಡ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.


ಸೋನಾಕ್ಷಿ ಅವರ ಮುದ್ದಿನ ಮಗಳು. ಅವರು ಮದುವೆಗೆ ಬಾರದೇ ಇರಲು ಸಾಧ್ಯವೇ ಇಲ್ಲ. ಶತ್ರುಜಿ ಅವರು “”ಈಗಿನ ಮಕ್ಕಳು ಪೋಷಕರ ಅನುಮತಿ ಪಡೆಯದೇ ಮದುವೆಯಾಗುತ್ತಾರೆ. ಸೋನಾಕ್ಷಿ ತನ್ನ ಇಷ್ಟದ ಹುಡುಗನನ್ನು ಮದುವೆಯಾಗುವುದಾದರೆ ನಾನೇಕೆ ಅಸಮಾಧಾನಗೊಳ್ಳಬೇಕುʼʼ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

ನಲವತ್ತು ವರ್ಷಗಳ ಹಿಂದೆ ತಮಗೆ ಇಷ್ಟವಾದ ಹುಡುಗಿಯನ್ನು ಮದುವೆಯಾಗಿದ್ದಾರೆ. ನಾನು ನನ್ನ ಹೆಂಡತಿಯನ್ನು ಮದುವೆಯಾದಾಗ ನಾನು ನನ್ನ ಜೀವನ ಸಂಗಾತಿಯನ್ನು ಆರಿಸಿಕೊಂಡೆ. ಒಬ್ಬನು ತನ್ನ ಮಕ್ಕಳಿಂದ ಅವಾಸ್ತವಿಕ ನಿರೀಕ್ಷೆಗಳನ್ನು ಹೊಂದಿರಬಾರದು ಎಂದು ಶತ್ರುಘ್ನ ಸಿನ್ಹಾ ಇತ್ತೀಚೆಗೆ ಹೇಳಿದ್ದರು.

ಶತ್ರುಘ್ನ ಅವರ ಆರಂಭಿಕ ಪ್ರತಿಕ್ರಿಯೆಯನ್ನು ಸಮರ್ಥಿಸಿಕೊಂಡ ಪಹ್ಲಾಜ್, ಚುನಾವಣೆಯಿಂದಾಗಿ ಅವರು ಸುಮಾರು ಮೂರು ತಿಂಗಳ ಕಾಲ ಮುಂಬಯಿನಿಂದ ಹೊರಗಿದ್ದರು. ಶತ್ರುಘ್ನ ಅವರ ಪತ್ನಿಗೆ ಈ ವಿಷಯ ಗೊತ್ತಿರಬೇಕು. ಶತ್ರುಘ್ನ ಅವರು ಹಿಂದಿರುಗಿದ ಅನಂತರ ಅವರಿಗೆ ಈ ಬಗ್ಗೆ ಹೇಳಲು ನಿರ್ಧರಿಸಿರಬೇಕು. ಈಗ ಅವರು ಮುಂಬಯಿಗೆ ಮರಳಿದ್ದಾರೆ ಮತ್ತು ಸೋನಾಕ್ಷಿ ಮತ್ತು ಅವರ ಕುಟುಂಬದ ನಡುವೆ ಎಲ್ಲವೂ ಚೆನ್ನಾಗಿದೆ ಎಂದು ತಿಳಿಸಿದರು.


ಶತ್ರುಘ್ನ ಹೇಳಿದ್ದೇನು?

ಸೋನಾಕ್ಷಿ ವಿವಾಹದ ಕುರಿತು ಮಾತನಾಡಿದ್ದ ಶತ್ರುಘ್ನ ಅವರು, ನನಗೆ ಸೋನಾಕ್ಷಿ ಮದುವೆ ಬಗ್ಗೆ ಯಾಕೆ ತಿಳಿದಿಲ್ಲ ಎಂದು ನನ್ನ ಹತ್ತಿರದ ಜನರು ನನ್ನನ್ನು ಕೇಳುತ್ತಿದ್ದಾರೆ. ನಾನು ಹೇಳುವುದು ಇಷ್ಟೇ, ಅವರು ಇವತ್ತಿನ ಮಕ್ಕಳು ತಂದೆ ತಾಯಿಯ ಅನುಮತಿ ಕೇಳುವುದಿಲ್ಲ. ಕೇವಲ ಮಾಹಿತಿ ನೀಡುತ್ತಾರೆ. ನಾವು ಆ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದಿದ್ದರು.

ಅವರ ಈ ಹೇಳಿಕೆ ಬಳಿಕ ಮದುವೆಯ ವದಂತಿಗಳನ್ನು ಅವರು ದೃಢೀಕರಿಸದೇ ಇದ್ದರೂ, ಸೋನಾಕ್ಷಿಗೆ ತಮ್ಮ ಜೀವನದ ಮಹತ್ವದ ದಿನಕ್ಕಾಗಿ ಎಲ್ಲಾ ಆಶೀರ್ವಾದಗಳನ್ನು ನೀಡುತ್ತಿದ್ದೇನೆ ಎಂದು ಹೇಳಿದ್ದರು.

ನನ್ನ ಮಗಳು ಮದುವೆಯಾದರೆ ನಾನು ಅವಳಿಗೆ ನನ್ನ ಆಶೀರ್ವಾದವನ್ನು ನೀಡುತ್ತೇನೆ. ಅವಳ ನಿರ್ಧಾರ ಮತ್ತು ಆಯ್ಕೆಯನ್ನು ಬೆಂಬಲಿಸುತ್ತೇನೆ. ಸೋನಾಕ್ಷಿಗೆ ತನ್ನ ಒಡನಾಡಿಯನ್ನು ಆಯ್ಕೆ ಮಾಡುವ ಹಕ್ಕಿದೆ ಮತ್ತು ಅವಳ ಮದುವೆಯ ದಿನದಂದು ನಾನು ಅತ್ಯಂತ ಸಂತೋಷದ ತಂದೆಯಾಗುತ್ತೇನೆ. ನಾನು ಯಾವಾಗಲೂ ಅವಳಿಗೆ ಶುಭ ಹಾರೈಸುತ್ತೇನೆ ಎಂದು ಶತ್ರುಘ್ನ ಹೇಳಿದರು. ಮುಂಬಯಿನಲ್ಲಿ ಆತ್ಮೀಯರ ಸಮ್ಮುಖದಲ್ಲಿ ಜೂನ್ 23ರಂದು ಸೋನಾಕ್ಷಿ ಮತ್ತು ಜಹೀರ್ ವಿವಾಹವಾಗಲಿದ್ದಾರೆ.

Exit mobile version