Site icon Vistara News

Sonu Nigam: ಅಯೋಧ್ಯೆ ಜನರಿಗೆ ಛೀಮಾರಿ ಹಾಕಿದ್ರಾ ಸೋನು ನಿಗಮ್?

Sonu Nigam Hit Backs To Ayodhya People For Not Vote For BJP

ಬೆಂಗಳೂರು: ಉತ್ತರ ಪ್ರದೇಶದ ಮಂದಿ ಬಿಜೆಪಿಯನ್ನು ಬೆಂಬಲಿಸದ ಕಾರಣಕ್ಕೆ ಸೋನು ನಿಗಮ್ (Sonu Nigam) ಛೀಮಾರಿ ಹಾಕಿದ್ದಾರೆ ಎಂಬ ಪೋಸ್ಟ್ ವೈರಲ್ ಆಗಿದೆ. ಆದರೆ, ಸೋನು ನಿಗಮ್ ಈ ರೀತಿ ಹೇಳಿಯೇ ಇಲ್ಲ . ಈಗಾಗಲೇ ಸೋನು ನಿಗಮ್ ಸೋಷಿಯಲ್‌ ಮೀಡಿಯಾದಿಂದ ದೂರವೇ ಉಳಿದಿದ್ದಾರೆ. ಆದರೂ ಗಾಯಕನ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಕಿಡಿಗೇಡಿಗಳು.

ವೈರಲ್ ಆದ ಟ್ವೀಟ್ ಹೀಗಿದೆ, “ಇಡೀ ಅಯೋಧ್ಯೆಯನ್ನು ಸರ್ಕಾರ ಸುಂದರಗೊಳಿಸಿತ್ತು. ಹೊಸ ವಿಮಾನ ನಿಲ್ದಾಣ, ರೈಲು ನಿಲ್ದಾಣವನ್ನು ನೀಡಿತ್ತು. 500 ವರ್ಷಗಳ ನಂತರ ರಾಮ ಮಂದಿರವನ್ನು ನಿರ್ಮಿಸಿತ್ತು, ಇಡೀ ದೇವಾಲಯದ ಆರ್ಥಿಕತೆಯನ್ನು ಸುಧಾರಿಸುತ್ತು. ಅಂಥ ಪಕ್ಷವು ಅಯೋಧ್ಯೆಯಲ್ಲಿ ಗೆಲ್ಲಲಾಗಿಲ್ಲ. ಅಯೋಧ್ಯೆಯ ಜನರು ನಾಚಿಕೆಪಡಬೇಕು’ ಎಂದು ಸೋನು ನಿಗಮ್ ಹೆಸರಿನ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ.

ಆದರೆ ಈ ಪೋಸ್ಟ್‌ ಮಾಡಿದ್ದು ಸೋನು ನಿಗಮ್‌ ಅಲ್ಲ. ಸೋನು ನಿಗಮ್ ಅವರೇ ಈ ರೀತಿ ಹೇಳಿದ್ದಾರೆ ಎಂದು ಕೆಲವರು ತಪ್ಪಾಗಿ ಭಾವಿಸಿದರು. ಈ ಬಗ್ಗೆ ವರದಿ ಕೂಡ ಮಾಡಿದರು. ಈ ವಿಚಾರದ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ‘ನಾನು ಆ ರೀತಿ ಹೇಳಿಯೇ ಇಲ್ಲ. ಈ ಕಾರಣದಿಂದಲೇ ನಾನು ಸೋಶಿಯಲ್ ಮೀಡಿಯಾವನ್ನು ಏಳು ವರ್ಷದ ಹಿಂದೆ ತೊರೆದೆ’ ಎಂದಿದ್ದಾರೆ ಸೋನು ನಿಗಮ್‌.

ʻʻನಾನು ಯಾವುದೇ ರಾಜಕೀಯ ಟೀಕೆಗಳನ್ನು ಮಾಡುವುದನ್ನು. ಮತ್ತು ನಂಬುವುದಿಲ್ಲ. ಮತ್ತು ನಾನು ನನ್ನ ಕೆಲಸದ ಮೇಲೆ ಮಾತ್ರ ಗಮನ ಹರಿಸುತ್ತೇನೆ. ಆದರೆ ಈ ಘಟನೆಯು ನನಗೆ ಮಾತ್ರವಲ್ಲ ಕುಟುಂಬಕ್ಕೂ ಆತಂಕಕಾರಿಯಾಗಿದೆʼʼ ಎಂದು ಸೋನು ನಿಗಮ್ ಹೇಳಿದ್ದಾರೆ.

ಇದನ್ನೂ ಓದಿ: Sunil Lahri: ಅಯೋಧ್ಯೆಯಲ್ಲಿ ಬಿಜೆಪಿಗೆ ದಾರುಣ ಸೋಲು; ಅಲ್ಲಿಯ ಜನರ ವಿರುದ್ಧ ರಾಮಾಯಣದ ಲಕ್ಷ್ಮಣ ಕೆಂಡಾಮಂಡಲ!

ಅಯೋಧ್ಯೆಯಲ್ಲಿ ಬಿಜೆಪಿಗೆ ದಾರುಣ ಸೋಲು; ಅಲ್ಲಿಯ ಜನರ ವಿರುದ್ಧ ರಾಮಾಯಣದ ಲಕ್ಷ್ಮಣ ಕೆಂಡಾಮಂಡಲ!

ಈ ವರ್ಷದ ಆರಂಭದಲ್ಲಿ ಭವ್ಯವಾದ ಶ್ರೀರಾಮ ಮಂದಿರದ (Ayodhya Ram Mandir) ಪ್ರಾಣಪ್ರತಿಷ್ಠೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (Ayodhya election results 2024) ಮಾಡಲಾಗಿತ್ತು. ಆದರೆ ಅಯೋಧ್ಯೆಯನ್ನು ಒಳಗೊಂಡಿರುವ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ (Faizabad Election Result) ಎಸ್‌ಪಿ (SP) ಅಭ್ಯರ್ಥಿಯ ಮುಂದೆ ಬಿಜೆಪಿ (BJP) ಅಭ್ಯರ್ಥಿ ಸೋತಿದ್ದರು ‘ರಾಮಾಯಣ’ ಧಾರಾವಾಹಿಯಲ್ಲಿ ಲಕ್ಷ್ಮಣನ ಪಾತ್ರ ನಿರ್ವಹಿಸಿದ್ದ ನಟ ಸುನಿಲ್ ಲಹರಿ ಬಿಜೆಪಿ ಸೋತಿರುವ ಬಗ್ಗೆ ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. ʻʻಅಯೋಧ್ಯೆಯ ಪ್ರಜೆಗಳು ಯಾವಾಗಲೂ ತಮ್ಮ ರಾಜನಿಗೆ ದ್ರೋಹ ಬಗೆಯುತ್ತಾರೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆʼʼ ಎಂದು ಇನ್‌ಸ್ಟಾದಲ್ಲಿ ಬರೆದುಕೊಂಡಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ, ಕಟ್ಟಪ್ಪ ಬಾಹುಬಲಿಯನ್ನು ಕೊಲ್ಲುವ ದೃಶ್ಯದ ಚಿತ್ರವನ್ನು ಸುನಿಲ್ ಹಂಚಿಕೊಂಡಿದ್ದಾರೆ. ಒಂದು ಪೋಸ್ಟ್‌ನಲ್ಲಿ ಅವರು ಬಾಹುಬಲಿ ಸಿನಿಮಾದಲ್ಲಿ ಕಟ್ಟಪ್ಪನು ಅಮರೇಂದ್ರ ಬಾಹುಬಲಿಗೆ ಹಿಂಭಾಗದಿಂದ ಕತ್ತಿಯನ್ನು ಇರಿಯುತ್ತಿರುವ ದೃಶ್ಯ ಇದೆ. ಇದರಲ್ಲಿ ಕಟ್ಟಪ್ಪನ್ನು ಅಯೋಧ್ಯೆ ಎಂದು ಕರೆದರೆ, ಬಾಹುಬಲಿ ಪ್ರಭಾಸ್ ಅವರನ್ನು ಬಿಜೆಪಿ ಎಂದು ಕರೆದಿದ್ದಾರೆ. ʻʻವನವಾಸದಿಂದ ಹಿಂದಿರುಗಿದ ನಂತರ ಸೀತಾದೇವಿಯನ್ನು ಅನುಮಾನಿಸಿದ ಅಯೋಧ್ಯೆಯ ಪ್ರಜೆಗಳು ಇವರೇ ಎಂಬುದನ್ನು ನಾವು ಮರೆಯುತ್ತಿದ್ದೇವೆ. ದೇವರನ್ನು ನಿರಾಕರಿಸುವ ವ್ಯಕ್ತಿಯನ್ನು ನೀವು ಏನೆಂದು ಕರೆಯುತ್ತೀರಿ? ಸ್ವಾರ್ಥಿ. ಅಯೋಧ್ಯೆಯ ಪ್ರಜೆಗಳು ಯಾವಾಗಲೂ ತಮ್ಮ ರಾಜನಿಗೆ ದ್ರೋಹ ಬಗೆದಿದ್ದಾರೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಅವರಿಗೆ ನಾಚಿಕೆಯಾಗಬೇಕುʼʼ ಎಂದು ಬರೆದುಕೊಂಡಿದ್ದಾರೆ.

ಅವರ ಕೊನೆಯ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ, “ಅಯೋಧ್ಯೆಯ ಪ್ರಿಯ ನಾಗರಿಕರೇ, ಸೀತಾ ದೇವಿಯನ್ನು ಸಹ ಬಿಡದ ನಿಮ್ಮ ಶ್ರೇಷ್ಠತೆಗೆ ನಾವು ನಮಸ್ಕರಿಸುತ್ತೇವೆ. ಶ್ರೀರಾಮನು ಆ ಚಿಕ್ಕ ಗುಡಿಸಲಿನಿಂದ ಹೊರಬಂದು ಸುಂದರವಾದ ದೇವಾಲಯದಲ್ಲಿ ಪ್ರತಿಷ್ಠಾಪಿಸಲ್ಪಡುವಂತೆ ಮಾಡಿದ ವ್ಯಕ್ತಿಗೆ ನೀವು ದ್ರೋಹ ಮಾಡಿದಿರಿ. ಇಡೀ ರಾಷ್ಟ್ರವು ನಿಮ್ಮನ್ನು ಮತ್ತೆ ಗೌರವದಿಂದ ನೋಡುವುದಿಲ್ಲʼʼ ಎಂದೂ ಬರೆದುಕೊಂಡಿದ್ದಾರೆ.

Exit mobile version