Site icon Vistara News

Jawan New Song: ಶಾರುಖ್‌-ನಯನತಾರಾ ರೊಮ್ಯಾಂಟಿಕ್‌ ಟ್ರ್ಯಾಕ್‌ ಶೀಘ್ರವೇ ಬಿಡುಗಡೆ!

SRK Nayanthara

ಶಾರುಖ್ ಖಾನ್ ಅಭಿನಯದ ‘ಜವಾನ್’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಅಟ್ಲಿ ನಿರ್ದೇಶನದ ಈ ಸಿನಿಮಾದಲ್ಲಿ ಶಾರುಖ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಯನತಾರಾ ಮತ್ತು ವಿಜಯ್ ಸೇತುಪತಿ ಕೂಡ ತೆರೆ ಹಂಚಿಕೊಳ್ಳುತ್ತಿದ್ದಾರೆ. ‘ಜವಾನ್’ ಚಿತ್ರದ ಫಸ್ಟ್‌ ಲುಕ್‌ ಬಿಡುಗಡೆಯಾದಾಗಿನಿಂದ ಬಿಡುಗಡೆಯ ಸುತ್ತ ಸಾಕಷ್ಟು ನಿರೀಕ್ಷೆಗಳಿವೆ. ಈಗಾಗಲೇ ಸಿನಿಮಾದ ಜಿಂದಾ ಬಂದಾ ಹಾಡು (Jawan New Song) ಬಿಡುಗಡೆಗೊಳಿಸಿದೆ ಚಿತ್ರತಂಡ. ಇದೀಗ ಶಾರುಖ್‌-ನಯನತಾರಾ ಅವರ ರೊಮ್ಯಾಂಟಿಕ್ ಟ್ರ್ಯಾಕ್ ಟೀಸರ್ ಹಂಚಿಕೊಂಡಿದೆ. ಈ ಮೂಲಕ ಶಾರುಖ್‌ ಮತ್ತೆ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಶಾರುಖ್ ಖಾನ್ ತಮ್ಮ ಟ್ವಿಟರ್‌ನಲ್ಲಿ ‘ಚಲೇಯಾ’ ಟೀಸರ್ ಹಂಚಿಕೊಂಡಿದ್ದಾರೆ. ಇದೇ ಆಗಸ್ಟ್‌ 14 ಹಾಗೂ ಆಗಸ್ಟ್‌ 15ರಂದು ಹಾಡು ಬಿಡುಗಡೆಯಾಗಲಿದೆ ಎಂದು ವರದಿಯಾಗಿದೆ.

ಈ ಚಿತ್ರದಲ್ಲಿ ಶಾರುಖ್ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಕಳೆದ ವಾರ ವರದಿಯಾಗಿತ್ತು. ಟೈಮ್ಸ್ ನೌ ಪ್ರಕಾರ ಕಿಂಗ್ ಖಾನ್ ಚಿತ್ರದಲ್ಲಿ ಫೈಟರ್ (ತಂದೆ) ಮತ್ತು ಜೈಲರ್ (ಮಗ) ಪಾತ್ರವನ್ನು ನಿರ್ವಹಿಸಲಿದ್ದಾರೆ. ಎಸ್‌ಆರ್‌ಕೆ ಆರು ವಿಭಿನ್ನ ಲುಕ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಜವಾನ್‌ನಲ್ಲಿ ಶಾರುಖ್ ಖಾನ್ ಅವರ ಜೈಲರ್ ಪಾತ್ರಕ್ಕೆ ಆಜಾದ್ ಎಂದು ಹೆಸರಿಡಲಾಗಿದೆ. ಶಾರುಖ್‌ ಜತೆಗೆ, ಜವಾನ್ ಸಿನಿಮಾದಲ್ಲಿ ನಯನತಾರಾ, ವಿಜಯ್ ಸೇತುಪತಿ ಮತ್ತು ಸನ್ಯಾ ಮಲ್ಹೋತ್ರಾ ಕೂಡ ನಟಿಸಿದ್ದಾರೆ.

ಇದನ್ನೂ ಓದಿ: Army jawan: ಕಾಶ್ಮೀರದಲ್ಲಿ ನಾಪತ್ತೆಯಾಗಿದ್ದ ಯೋಧ ಪತ್ತೆ ಎಂದ ಕಾಶ್ಮೀರ ಪೊಲೀಸರು

ಈ ಹಿಂದೆ ದೀಪಿಕಾ ಪಡುಕೋಣೆ ಕೂಡ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ಇದೀಗ ದೀಪಿಕಾ ನಟಿಸುತ್ತಿರುವುದು ಕನ್‌ಫರ್ಮ್‌ ಆಗಿದೆ. ಈ ಹಿಂದೆ ಬಿಡುಗಡೆಯಾದ ಟೀಸರ್‌ನಲ್ಲಿ ಶಾರುಖ್ ಬ್ಯಾಂಡೇಜ್‌ನಲ್ಲಿ ಕಾಣಿಸಿಕೊಂಡಿದ್ದರು.ಈಗಾಗಲೇ ಜವಾನ್‌ ಪ್ರಿವ್ಯೂ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಿದೆ.‘ಜವಾನ್’ ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಸಂಸ್ಥೆಯಡಿ ಗೌರಿ ಖಾನ್ ನಿರ್ಮಿಸುತ್ತಿದ್ದು, ಅಟ್ಲಿಯವರ ನಿರ್ದೇಶನದಲ್ಲಿ ಮೂಡಿಬಂದಿದೆ. ಚಿತ್ರದ ಮ್ಯೂಸಿಕ್‌ ರೈಟ್ಸ್‌ ಈಗಾಗಲೇ 36 ಕೋಟಿ ರೂ. ಮಾರಾಟವಾಗಿದೆ ಎಂದು ವರದಿಯಾಗಿದೆ.

Exit mobile version