Site icon Vistara News

Urfi Javed: ಉರ್ಫಿ ಜಾವೇದ್‌ಗೆ ಮುಖ ಹೀಗೆ ಊದಿಕೊಳ್ಳುತ್ತೆ; ಆರೋಗ್ಯ ಸಮಸ್ಯೆಯಿಂದ ಬಳಲ್ತಾ ಇದ್ದಾರೆ ಫ್ಯಾಷನ್‌ ಐಕಾನ್‌!

Urfi Javed shares photos of swollen face, accepts

ಬೆಂಗಳೂರು: ಫ್ಯಾಷನ್‌ ಐಕಾನ್‌ ಎಂದೇ ಖ್ಯಾತಿ ಪಡೆದಿರುವ ಉರ್ಫಿ ಜಾವೇದ್ (Urfi Javed) ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಉರ್ಫಿ ಜಾವೇದ್ ಇತ್ತೀಚೆಗೆ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಕೆಲವು ಪೋಟೊಗಳನ್ನು ಶೇರ್ ಮಾಡಿಕೊಂಡಿದ್ದರು. ಅದರಲ್ಲಿ ಅವರ ಮುಖ ಊದಿಕೊಂಡಿತ್ತು. ಈ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ತನಗೆ ಆರೋಗ್ಯ ಸಮಸ್ಯೆಯಿದೆ ಎಂದು ಹೇಳಿಕೊಂಡಿದ್ದಾರೆ.

ಉರ್ಫಿ ಜಾವೇದ್‌ ಪೋಸ್ಟ್‌ನಲ್ಲಿ ʻ”ನನ್ನ ಮುಖದ ವಿಚಾರವಾಗಿ ನಾನು ಹಲವಾರು ಟೀಕೆಗಳನ್ನು ಎದುರಿಸಿದ್ದೆ. ನನಗೆ ಅಲರ್ಜಿ ಇದೆ, ನನ್ನ ಮುಖವು ಹೆಚ್ಚಾಗಿ ಊದಿಕೊಳ್ಳುತ್ತದೆ. ಬೆಳಗ್ಗೆ ಎದ್ದಾಗ ಮುಖ ಸದಾ ಊದಿಕೊಂಡಿರುತ್ತದೆ. ಪ್ರತಿ ಎರಡು ದಿನಕ್ಕೊಮ್ಮೆ ನಾನು ಬೆಳಗ್ಗೆ ಏಳುವಾಗ ನನ್ನ ಮುಖ ಹೀಗೆ ಊದಿಕೊಂಡಿರುತ್ತೆ. ಯಾವಾಗಲೂ ಹೀಗಾದಾಗ ನಾನು ಕಿರಿಕಿರಿಯನ್ನು ಅನುಭವಿಸುತ್ತೇನೆ” ಎಂದು ಉರ್ಫಿ ಜಾವೇದ್ ಬರೆದುಕೊಂಡಿದ್ದಾರೆ.

ʻʻಇಮ್ಯೂನೋಥೆರಪಿ ನಡೆಯುತ್ತಿದೆ. ಮಾಮೂಲಿ ಫಿಲ್ಲರ್ಸ್ ಬಿಟ್ಟರೆ ಬೇರೆ ಏನನ್ನೂ ನಾನು ಮಾಡಿಸಿಕೊಳ್ಳುವುದಿಲ್ಲ. ಇದನ್ನು ನಾನು ನನಗೆ 18 ವರ್ಷವಿದ್ದಾಗಿನಿಂದ ಮಾಡಿಕೊಂಡು ಬಂದಿದ್ದೇನೆ. ಎಂದಾದರೂ ಊದಿಕೊಂಡ ಮುಖ ನೋಡಿದಾಗ, ನನಗೆ ಸಲಹೆ ನೀಡಲು ಬರಬೇಡಿ.” ಎಂದು ಊರ್ಫಿ ಟೀಕೆಗಳಿಗೆ ಉತ್ತರ ಕೊಟ್ಟಿದ್ದಾರೆ.

ಇದನ್ನೂ ಓದಿ: Urfi Javed: ಉರ್ಫಿ ʻಮ್ಯಾಜಿಕ್ʼ ಡ್ರೆಸ್‌ಗೆ ಸಮಂತಾ ಮೆಚ್ಚುಗೆ; ಗೌನ್‌ನಿಂದ ಹಾರಿತು ಬಣ್ಣದ ಚಿಟ್ಟೆ!

ಬಾಲಿವುಡ್‌ಗೆ ಪದಾರ್ಪಣೆ

ಇದರ ಜತೆಗೆ ಉರ್ಫಿ ಜಾವೇದ್‌ ಬಾಲಿವುಡ್‌ಗೂ ಕಾಲಿಟ್ಟಿದ್ದಾರೆ. ಏಕ್ತಾ ಕಪೂರ್ ನಿರ್ಮಾಣದ ‘ಲವ್ ಸೆಕ್ಸ್ ಔರ್ ಧೋಖಾ 2’ ಸಿನಿಮಾದಲ್ಲಿ ಅವರು ಅಭಿನಯಿಸಿದ್ದರು. ಏಪ್ರಿಲ್ 19ರಂದು ಸಿನಿಮಾ ಬಿಡುಗಡೆಯಾಗಿತ್ತು. ಈ ಚಿತ್ರವನ್ನು ದಿವಾಕರ್ ಬ್ಯಾನರ್ಜಿ ನಿರ್ದೇಶಿಸಿದ್ದರು. ಈ ಹಿಂದೆ ಇವರು ʻಲವ್ ಸೆಕ್ಸ್ ಔರ್ ಧೋಖಾʼ ಸಿನಿಮಾಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದರು. ʼಲವ್ ಸೆಕ್ಸ್ ಔರ್ ಧೋಖಾ 2ʼನಲ್ಲಿ ಆಸಕ್ತಿದಾಯಕ ಕಥೆ ಇರಲಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಇಂಟರ್‌ನೆಟ್‌ ಜಗತ್ತಿನಲ್ಲಿ ನಡೆಯುವ ಪ್ರೀತಿಯ ಕಥೆ ಇರಲಿದೆ ಎನ್ನಲಾಗಿತ್ತು. ಬಾಲಿವುಡ್‌ ಕಲಾವಿದರಾದ ತುಷಾರ್ ಕಪೂರ್ ಮತ್ತು ಮೌನಿ ರಾಯ್ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ವಿಶೇಷ ಎಂದರೆ ಇದು ಉರ್ಫಿ ಜಾವೇದ್‌ ಅಭಿನಯದ ಮೊದಲ ಬಾಲಿವುಡ್‌ ಚಿತ್ರ. ಬಿಗ್‌ಬಾಸ್‌ ರಿಯಾಲಿಟಿ ಶೋದ ಮೂಲಕ ಗಮನ ಸೆಳೆದಿದ್ದ ಅವರು ಸಿನಿಮಾದಲ್ಲಿ ಯಾವ ರೀತಿ ಕಾಣಿಸಿಕೊಳ್ಳಬಹುದು ಎನ್ನುವ ಕುತೂಹಲ ಮೂಡಿತ್ತು. ಮಾತ್ರವಲ್ಲ ಅವರು ಸ್ಪ್ಲಿಟ್‌ವಿಲ್ಲಾ ಎಕ್ಸ್ 5 (Splitsvilla X5) ಶೋದಲ್ಲಿಯೂ ಕಾಣಿಸಿಕೊಂಡಿದ್ದಾರೆ.

Exit mobile version