ಬೆಂಗಳೂರು: ಬಾಲಿವುಡ್ ನಟ ವರುಣ್ ಧವನ್ (Varun Dhawan) ದಂಪತಿಗೆ ಹೆಣ್ಣು ಮಗುವಾಗಿದೆ. ಅಭಿಮಾನಿಗಳಿಗೆ ಸಂತೋಷವಾಗಿದೆ. ಅವರ ಪತ್ನಿ, ಫ್ಯಾಷನ್ ಡಿಸೈನರ್ ನತಾಶಾ ದಲಾಲ್ ಮುಂಬೈನ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ವರುಣ್ ಧವನ್ ಹಾಗೂ ಡೇವಿಡ್ ಮುಂಬೈನ ಖಾಸಗಿ ಆಸ್ಪತ್ರೆಗೆ ನಡೆದು ಹೊರಟಿದ್ದರು. ಈ ವೇಳೆ ಅಲ್ಲಿದ್ದ ಪಾಪರಾಜಿಗಳು ಈ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ‘ವರುಣ್ಗೆ ಹೆಣ್ಣು ಮಗು ಜನಿಸಿದ್ದು ನಿಜವೇ’ ಎಂದು ಕೇಳಲಾಗಿದೆ. ಇದಕ್ಕೆ ಡೇವಿಡ್ ಅವರು ಹೌದು ಎಂದಿದ್ದಾರೆ. ಇದರ ಜೊತೆಗೆ ವಿಶ್ ಮಾಡಿದ ಎಲ್ಲರಿಗೂ ಅವರು ಧನ್ಯವಾದ ಹೇಳಿದ್ದಾರೆ.
ಸ್ವಲ್ಪ ಸಮಯದ ನಂತರ, ವರುಣ್ ಅವರ ತಾಯಿ ಲಲ್ಲಿ ಧವನ್ ಮತ್ತು ಸೊಸೆ ಜಾನ್ವಿ ಧವನ್ ಆಸ್ಪತ್ರೆಯಿಂದ ಹೊರಹೋಗುತ್ತಿರುವುದು ಕಂಡುಬಂದಿತು. ದಂಪತಿ ತಮ್ಮ ಮಗಳ ಜನನದ ಬಗ್ಗೆ ಇನ್ನೂ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿಲ್ಲ.
ನಟನ ಅಭಿಮಾನಿಗಳು ದಂಪತಿಗೆ ಶುಭ ಹಾರೈಸಿದರು. ಲಕ್ಷ್ಮಿ ದೇವಿಯು ನಿಮ್ಮ ಮನೆಗೆ ಪ್ರವೇಶಿಸಿದ್ದಾಳೆ, ಅಭಿನಂದನೆಗಳು ವರುಣ್ ಎಂದು ಅಭಿಮಾನಿಯೊಬ್ಬರು ಬರೆದಿದ್ದಾರೆ. ವರುಣ್ ತಮ್ಮ ದೀರ್ಘಕಾಲದ ಗೆಳತಿ ನತಾಶಾಳೊಂದಿಗೆ 2021ರ ಜನವರಿ 24 ರಂದು ಮದುವೆಯಾಗಿದ್ದರು. ಸಿನಿಮಾ ವಿಚಾರಕ್ಕೆ ಬಂದರೆ ವರುಣ್ ಅವರು ʻಬೇಬಿ ಜಾನ್ʼನಲ್ಲಿ ವರುಣ್ ಕಾಣಿಸಿಕೊಳ್ಳಲಿದ್ದಾರೆ. ಬೇಬಿ ಜಾನ್ ಚಿತ್ರವನ್ನು ಎ ಕಾಳೀಶ್ವರನ್ ನಿರ್ದೇಶಿಸಿದ್ದಾರೆ. ಜಿಯೋ ಸ್ಟುಡಿಯೋಸ್ ಮತ್ತು ಸಿನಿ1 ಸ್ಟುಡಿಯೋಸ್ ಸಹಯೋಗದಲ್ಲಿ ಅಟ್ಲಿ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ.
ಇದನ್ನೂ ಓದಿ: Dolly Dhananjay: ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ; ಜೂನ್ 14ರಂದು ಸಿನಿಮಾ ತೆರೆಗೆ!
ವರುಣ್ ಧವನ್ ಶೀಘ್ರದಲ್ಲೇ ಅವರ ಮುಂಬರುವ ಚಿತ್ರ ‘ವಿಡಿ 18’ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಲ್ಲದೆ, ಅವರು ಅಮೆಜಾನ್ ಪ್ರೈಮ್ ವೀಡಿಯೊದ ವೆಬ್ ಸರಣಿ ‘ಸಿಟಾಡೆಲ್’ ನಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಮಂತಾ ಕೂಡ ವರುಣ್ ದವನ್ ಜೊತೆ ಸಿಟಾಡೆಲ್ ನಲ್ಲಿ ನಟಿಸಿದ್ದಾರೆ. ಇದನ್ನು ರಾಜ್ ಮತ್ತು ಡಿಕೆ ನಿರ್ದೇಶಿಸಿದ್ದಾರೆ.
ಕರಣ್ ಜೋಹರ್ ಅವರ ಧರ್ಮ ಪ್ರೊಡಕ್ಷನ್ಸ್ ನಿರ್ಮಿಸುವ ಮುಂಬರುವ ಚಿತ್ರದಲ್ಲಿ ಸಮಂತಾ ರುತ್ ಪ್ರಭು ಮತ್ತು ಸಲ್ಮಾನ್ ಖಾನ್ ರೊಮ್ಯಾನ್ಸ್ ಮಾಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಚಿತ್ರಕ್ಕಾಗಿ ನಿರ್ದೇಶಕ ವಿಷ್ಣುವರ್ಧನ್ ಅವರೊಂದಿಗೆ ಸಮಂತಾ ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ವರದಿಯ ಪ್ರಕಾರ ಈ ಸಿನಿಮಾಗೆ ಸಮಂತಾ ಜತೆಗೆ ತ್ರಿಶಾ ಮತ್ತು ಅನುಷ್ಕಾ ಶೆಟ್ಟಿ ಕೂಡ ಇರಲಿದ್ದಾರೆ ಎಂದು ಹೇಳಲಾಗಿದೆ. ಸದ್ಯಕ್ಕೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.