Site icon Vistara News

Virat Kohli: ವಿಶ್ವಕಪ್ ಗೆದ್ದ ನಂತರ ಅನುಷ್ಕಾ ಶರ್ಮಾಗೆ ವಿಡಿಯೊ ಕಾಲ್‌ ಮಾಡಿ ಫ್ಲೈಯಿಂಗ್ ಕಿಸ್‌ ಕೊಟ್ಟ ವಿರಾಟ್ ಕೊಹ್ಲಿ!

Virat Kohli video calls Anushka Sharma after winning

ಬೆಂಗಳೂರು: ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ಜೂನ್ 29ರಂದು ನಡೆದ ಟಿ20 ವಿಶ್ವಕಪ್​ 2024 (T20 World Cup 2024) ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ (Virat Kohli) ಹೊರ ಹೊಮ್ಮಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.  ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಭಾರತೀಯ ಆಟಗಾರರು ಸಂಭ್ರಮಿಸುತ್ತಿರುವ ವಿಡಿಯೊಗಳು ಮತ್ತು ಫೋಟೋಗಳು ಸದ್ದು ಮಾಡುತ್ತಿವೆ. ವಿಶ್ವಕಪ್ ಗೆದ್ದ ನಂತರ ವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾಗೆ ವಿಡಿಯೊ ಕಾಲ್‌ ಮಾಡಿರುವ ಫೋಟೊಗಳು ಸಖತ್‌ ವೈರಲ್‌ ಆಗುತ್ತಿವೆ.

ವೈರಲ್‌ ಆದ ಫೋಟೊಗಳಲ್ಲಿ ವಿರಾಟ್‌ ಸಂತಸದಿಂದ ಪತ್ನಿ ಜತೆ ಮಾತನಾಡುತ್ತಿರುವುದು ಕಂಡು ಬಂದಿದೆ. ಮಾತ್ರವಲ್ಲ ಕಾಲ್‌ ಮೂಲಕವೇ ಫ್ಲೈ ಕಿಸ್‌ ಕೂಡ ಕೊಟ್ಟಿದ್ದಾರೆ. ಈ ಭಾವುಕ ಕ್ಷಣಗಳನ್ನು ಅಭಿಮಾನಿಗಳು ಕೂಡ ಹಾಡಿ ಹೊಗಳುತ್ತಿದ್ದಾರೆ.

ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ-ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹೊಗಳಿ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಮಗಳು ವಾಮಿಕಾ ಬಗ್ಗೆ ಘಟನೆವೊಂದನ್ನು ಹಂಚಿಕೊಂಡಿದ್ದಾರೆ. ಅನುಷ್ಕಾ ಶರ್ಮಾ ಪೋಸ್ಟ್‌ನಲ್ಲಿ ʻʻನಮ್ಮ ಮಗಳ ದೊಡ್ಡ ಕಾಳಜಿ ಏನೆಂದರೆ, ಎಲ್ಲಾ ಆಟಗಾರರು ಟಿವಿಯಲ್ಲಿ ಅಳುತ್ತಿರುವುದನ್ನು ನೋಡಿದ ನಂತರ ಅವರನ್ನು ತಬ್ಬಿಕೊಳ್ಳಲು ಯಾರಾದರೂ ಇದ್ದರೆ ಎಂದು. ಆಗ ನಾನು ಅಂದೆ ..ಹೌದು, ಅವರನ್ನು 1.5 ಬಿಲಿಯನ್ ಜನರು ತಬ್ಬಿಕೊಂಡರು ಎಂದೆ. ಎಂತಹ ಅದ್ಭುತ ಗೆಲುವು ಮತ್ತು ಎಂತಹ ಪೌರಾಣಿಕ ಸಾಧನೆ!! ಚಾಂಪಿಯನ್ಸ್ – ಅಭಿನಂದನೆಗಳು!! ಎಂದು ಬರೆದುಕೊಂಡಿದ್ದಾರೆ. ಮತ್ತೊಂದು ಪೋಸ್ಟ್‌ನಲ್ಲಿ, ಅನುಷ್ಕಾ ಅವರು ವಿರಾಟ್ ಮುಗುಳ್ನಕ್ಕು ಟ್ರೋಫಿಯನ್ನು ಎತ್ತುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Virat Kohli: ಗೆಲುವಿನ ಬಳಿಕ ಪಂಜಾಬಿ ಹಾಡಿಗೆ ಮಸ್ತ್​ ಸ್ಟೆಪ್ಸ್​ ಹಾಕಿದ ವಿರಾಟ್​ ಕೊಹ್ಲಿ

ವಿದಾಯ ಹೇಳಿದ ರೋಹಿತ್​


ನಾಯಕನಾಗಿ ಮತ್ತು ಆಟಗಾರನಾಗಿ 2 ಟಿ20 ವಿಶ್ವಕಪ್​ ಗೆದ್ದ ರೋಹಿತ್​ ಗೆಲುವಿನ ಬಳಿಕ ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಈ ಮೂಲಕ ಸ್ಮರಣೀಯ ವಿದಾಯ ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್​, “ಇದು ನನ್ನ ಕೊನೆಯ ಅಂತಾರಾಷ್ಟ್ರೀಯ ಟಿ20 ಪಂದ್ಯ. ಚುಟುಕು ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ಇದಕ್ಕಿಂತ ಸಕಾಲ ಇನ್ನೊಂದಿಲ್ಲ. ನಾನು ಮೊದಲು ಭಾರತ ತಂಡಕ್ಕೆ ಪದಾರ್ಪಣೆ ಮಾಡಿದ್ದೇ ಟಿ20 ಆಡುವ ಮೂಲಕ. ನಾಕಯನಾಗಿ ನಾನು ಕಪ್ ಗೆಲ್ಲಬೇಕೆಂದು ಬಯಸಿದ್ದೆ. ಇದು ಸಾಕಾರಗೊಂಡಿದೆ” ಎಂದು ಹೇಳುವ ಮೂಲಕ ವಿದಾಯ ಹೇಳಿದರು. ಟಿ20ಯಲ್ಲಿ 159 ಪಂದ್ಯಗಳನ್ನು ಆಡಿರುವ ರೋಹಿತ್‌, 4231 ರನ್‌ ಗಳಿಸಿದ್ದು, 5 ಶತಕ ಹಾಗೂ 37 ಅರ್ಧಶತಕಗಳನ್ನು ಬಾರಿಸಿದ್ದಾರೆ.

ವಿದಾಯ ಹೇಳಿದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಈ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದರು. ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದು ಹೇಳಿದರು.

Exit mobile version