ಬೆಂಗಳೂರು: ಕ್ರಿಕೆಟ್, ಕಬ್ಬಡಿ, ಬ್ಯಾಡ್ಮಿಂಟನ್ ಲೀಗ್ ಹೀಗೆ ಅನೇಕ ಲೀಗ್‌ಗಳ ಜತೆಗೆ ಇದೀಗ ಬೌಲಿಂಗ್ ಲೀಗ್ (Bowling League) ಕೂಡ ಸದ್ದು ಮಾಡುತ್ತಿದೆ. ಸ್ಯಾಂಡಲ್‌ವುಡ್‌ನಲ್ಲಿ ಮೊದಲ ಬೌಲಿಂಗ್ ಲೀಗ್ ಯಶಸ್ವಿಯಾದ ಬೆನ್ನಲ್ಲೇ ಇದೀಗ 2ನೇ ಲೀಗ್‌ಗೆ ತಾರೆಯರು ಸಜ್ಜಾಗಿದ್ದಾರೆ. ಬೌಲಿಂಗ್ ಲೀಗ್ ಪ್ರಾರಂಭಕ್ಕೂ ಮೊದಲು ಸ್ಟಾರ್ಸ್ ಮಾಧ್ಯಮದ ಮುಂದೆ ಹಾಜರಾಗಿದ್ದರು.
ಬೌಲಿಂಗ್ ಲೀಗ್ ಸ್ಯಾಂಡಲ್‌ವುಡ್‌ಗೆ ಪರಿಚಯಿಸಿದ್ದು ನಿರ್ಮಾಪಕ ಕಮರ್. ಕಳೆದ ವರ್ಷ ಬೌಲಿಂಗ್ ಲೀಗ್‌ಅನ್ನು ಯಶಸ್ವಿಯಾಗಿ ನಿಭಾಯಿಸಿದ್ದ ಕಮರ್ ಈ ಬಾರಿ ಕೂಡ ಅದೇ ಹುರುಪಿನಲ್ಲಿ ಈ ಮಾದರಿಯ ಲೀಗ್ ಮಾಡಲು ಮುಂದಾಗಿದ್ದಾರೆ. ಈ ವಿಚಾರವಾಗಿ ಮಾಧ್ಯಮಗೋಷ್ಠಿ ಆಯೋಜಿಸಲಾಗಿದ್ದು ಲೀಗ್ ಬಗ್ಗೆ ಮಾಹಿತಿ ಹಂಚಿಕೊಂಡರು.
ನಟಿಯರಾದ ಕಾರುಣ್ಯಾ ರಾಮ್, ಧನ್ಯಾ ರಾಮ್ ಕುಮಾರ್, ರಕ್ಷಿತಾ ಶೆಟ್ಟಿ, ರಚನಾ ಇಂದರ್, ಬೃಂದಾ ಆಚಾರ್ಯ, ಸಾಕ್ಷಿ ಇನ್ನೂ ನಟರಾದ ತರುಣ್ ಚಂದ್ರ, ಕೆಂಪೇಗೌಡ, ಭರತ್ ಸೇರಿದಂತೆ ಅನೇಕರು ಹಾಜರಿದ್ದರು. ಈ ಬಾರಿಯ ಲೀಗ್‌ನಲ್ಲಿ ಒಟ್ಟು ಆರು ತಂಡಗಳಿರಲಿದ್ದು, ತಾರೆಯರ ಜತೆಗೆ ಪತ್ರಕರ್ತರು ಕೂಡ ಲೀಗ್‌ನಲ್ಲಿ ಭಾವಹಿಸುತ್ತಿರುವುದು ವಿಶೇಷ.
ಇದನ್ನೂ ಓದಿ: Cricket League: ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್-3; ಶುಭ ಕೋರಿದ ಬಸವರಾಜ ಹೊರಟ್ಟಿ
ಕಳೆದ ಬಾರಿಯ ಲೀಗ್‌ನಲ್ಲಿ ಶ್ರೀನಗರ ಕಿಟ್ಟಿ ಮತ್ತು ತಂಡ ಗೆದ್ದು ಬೀಗಿದ್ದರು. ಈ ಬಾರಿಯ ಬೌಲಿಂಗ್ ಲೀಗ್ ಕಪ್ ಯಾರ ಮುಡಿಗೇರಲಿದೆ ಎಂದು ಕಾದು ನೋಡಬೇಕು. ಡಿಸೆಂಬರ್‌ನಲ್ಲಿ ಲೀಗ್ ಲೀಗ್ ಪ್ರಾರಂಭವಾಗಲಿದೆ ಎರಡು ದಿನಗಳು ನಡೆಯಲಿದ್ದು ಅನೇಕ ಸ್ಟಾರ್ಸ್ ಭಾಗಿಯಾಗಲಿದ್ದಾರೆ. ಇನ್ನು ಏನೆಲ್ಲ ವಿಶೇಷತೆ ಇರಲಿದೆ, ಯಾರೆಲ್ಲ ಕಲಾವಿದರು ಭಾಗಿಯಾಗುತ್ತಾರೆ ಎನ್ನುವ ಬಗ್ಗೆ ಸದ್ಯದಲ್ಲೇ ಮಾಹಿತಿ ಬಹಿರಂಗ ಪಡಿಸಲಿದೆ ಕಮರ್ ಫಿಲ್ಮ್ ಫ್ಯಾಕ್ಟರಿ.