Site icon Vistara News

Priyanka Upendra: ಪ್ರಿಯಾಂಕಾ ನಟನೆಯ ‘ಕ್ಯಾಪ್ಚರ್’ ಸಿನಿಮಾ; 60 ಅಡಿ ಎತ್ತರದ ಟೈಟಲ್ ಪೋಸ್ಟರ್ ರಿಲೀಸ್!

Capture movie starring Priyanka

ಬೆಂಗಳೂರು: ಸ್ಯಾಂಡಲ್‌ವುಡ್‌ ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ (Priyanka Upendra) ಮತ್ತೊಂದು ಹಾರರ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಪ್ರಿಯಾಂಕಾ ಅವರ ಹೊಸ ಸಿನಿಮಾಗೆ ʻಕ್ಯಾಪ್ಚರ್ʼ ಎಂದು ಟೈಟಲ್ ಇಡಲಾಗಿದೆ. ಕ್ಯಾಪ್ಚರ್ ತಂಡ ಟೈಟಲ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಅಭಿಮಾನಿಗಳ ಮಧ್ಯೆ ಕ್ಯಾಪ್ಚರ್ ಸಿನಿಮಾದ ಪೋಸ್ಟರ್ ಲಾಂಚ್ ಮಾಡಿದ್ದು ವಿಶೇಷವಾಗಿತ್ತು. ಸ್ಯಾಂಡಲ್‌ವುಡ್‌ನಲ್ಲೇ ಮೊದಲ ಬಾರಿಗೆ ನಾಯಕಿಯೊಬ್ಬರ 60 ಅಡಿಯ ಕಟೌಟ್ ನಿಲ್ಲಿಸುವ ಮೂಲಕ ಬಿಡುಗಡೆ ಮಾಡಿರುವುದು ಖುಷಿಯ ವಿಚಾರವಾದರೆ ಮತ್ತೊಂದು ಕಡೆ ಕನ್ನಡ ಸಿನಿಮಾರಂಗದಲ್ಲಿಯೇ ಇದೊಂದು ವಿನೂತನವಾದ ಪ್ರಯತ್ನವಾಗಿದೆ.

ವಿಶೇಷ ಎಂದರೆ ಈ ಸಿನಿಮಾಗೆ ಮಮ್ಮಿ, ದೇವಕಿ ಸಿನಿಮಾ ಖ್ಯಾತಿಯ ನಿರ್ದೇಶಕ ಲೋಹಿತ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಪ್ರಿಯಾಂಕಾ ಮತ್ತು ಲೋಹಿತ್ ಕಾಂಬಿನೇಷನ್‌ನ 3ನೇ ಸಿನಿಮಾ ಇದಾಗಿದೆ. ಈ ಸಿನಿಮಾಗೆ ರವಿರಾಜ್ ಅವರು ತಮ್ಮ ಶ್ರಿ ದುರ್ಗಾ ಪರಮೇಶ್ವರಿ ಪ್ರೊಡಕ್ಷನ್ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಈ ಬ್ಯಾನರ್‌ನಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾ ಇದಾಗಿದೆ. ಅಂದಹಾಗೆ ರವಿರಾಜ್ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಅವರ ಸಹೋದರ.

ಕ್ಯಾಪ್ಚರ್ ಸಿನಿಮಾದ ಟೈಟಲ್ ಪೋಸ್ಟರ್ ವಿಭಿನ್ನವಾಗಿ ಲಾಂಚ್ ಮಾಡಲಾಯಿತು. ವೀರೇಶ್ ಚಿತ್ರಮಂದಿರದ ಮುಂಭಾಗದಲ್ಲಿ ಪ್ರಿಯಾಂಕಾ ಉಪೇಂದ್ರ ಅವರ 60 ಅಡಿ ಕೌಟೌಟ್ ಪೋಸ್ಟರ್ ನಿಲ್ಲಿಸುವ ಮೂಲಕ ಸಿನಿಮಾದ ಟೈಟಲ್ ಪೋಸ್ಟರ್ ರಿವೀಲ್ ಮಾಡಲಾಯಿತು. ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಪೋಸ್ಟರ್ ಲಾಂಚ್ ಮಾಡಿದರು.

ಇದನ್ನೂ ಓದಿ: Priyanka Upendra Interview: ಸ್ಯಾಂಡಲ್‌ವುಡ್‌ ನಟಿ ಪ್ರಿಯಾಂಕಾ ಉಪೇಂದ್ರ ಸಿಗ್ನೇಚರ್‌ ಸ್ಟೈಲ್‌ ಏನು?

ಕ್ಯಾಪ್ಚರ್ ಬಗ್ಗೆ ಹೇಳುವುದಾದರೆ ಹಾರರ್ ಅಂದಮೇಲೆ ಭಯ, ಕುತೂಹಲ, ಟ್ವಿಸ್ಟ್‌ಗಳು ಇದ್ದೇ ಇರುತ್ತೆ. ಇದೆಲ್ಲದರ ಜತೆಗೆ ಈ ಸಿನಿಮಾ ಒಂದು ವಿಭಿನ್ನ ಅನುಭವ ನೀಡಲಿದೆ. ಯಾಕೆಂದರೆ ಸಂಪೂರ್ಣ ಸಿನಿಮಾ ಸಿಸಿ ಟಿವಿ ಕಾನ್ಸೆಪ್ಟ್‌ನಲ್ಲಿ ಚಿತ್ರೀಕರಣ ಮಾಡಲಾಗಿದೆ. ವಿಶ್ವದಲ್ಲಿಯೇ ಮೊದಲ ಬಾರಿಗೆ ಈ ರೀತಿಯ ಪ್ರಯತ್ನ ಮಾಡಲಾಗಿದೆ.

ಚಿತ್ರಕ್ಕೆ ಎಸ್ ಪಾಂಡಿಕುಮಾರ್ ಕ್ಯಾಮೆರಾ ವರ್ಕ್ ಮಾಡಿದ್ದು ರವಿಚಂದ್ರನ್ ಅವರ ಸಂಕಲನವಿದೆ. ಸಿನಿಮಾ ಮುಂದಿನ ತಿಂಗಳು ನವೆಂಬರ್‌ನಲ್ಲಿ ತೆರೆಗೆ ಬರಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

Exit mobile version