ಮುಂಬಯಿ: ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ (Physical Abuse) ಪ್ರಕರಣ, ಅನೇಕ ಬಾಲಿವುಡ್ ಸೆಲೆಬ್ರಿಟಿಗಳು (Bollywood celebrity) ಕೂಡ ತಮಗಾದ ಲೈಂಗಿಕ ಕಿರುಕುಳ, ಯಾತನೆ, ನೋವುಗಳ ಬಗ್ಗೆ ಮಾತನಾಡುವಂತೆ ಮಾಡಿದೆ. ಅದೇ ಸರಣಿಯಲ್ಲಿ ನಟಿ ಸೆಲಿನಾ ಜೇಟ್ಲಿ (Celina Jaitley) ತಮ್ಮ ಜೀವನದಲ್ಲಿ ನಡೆದ ಆಘಾತಕಾರಿ ಘಟನೆಯೊಂದನ್ನು ಇದೀಗ ಬಿಚ್ಚಿಟ್ಟಿದ್ದಾರೆ.
ಬಾಲ್ಯದಲ್ಲಿ ತಮಗಾದ ಕೆಟ್ಟ ಅನುಭವವನ್ನು ಜೇಟ್ಲಿ ತೆರೆದಿಟ್ಟಿದ್ದಾರೆ. ತಮ್ಮ ಆರನೇ ತರಗತಿ ಫೋಟೋ ಒಂದನ್ನು ಪೋಸ್ಟ್ ಮಾಡಿದ ಸೆಲಿನಾ, ಇಂಥ ಪ್ರಕರಣಗಳಲ್ಲಿ ಯಾವಾಗಲೂ ಬಲಿಪಶುವನ್ನೇ ತಪ್ಪು ಮಾಡಿದವಳು ಎಂದು ಹೇಳಲಾಗುತ್ತದೆ. ಈ ಫೋಟೋ ನಾನು ಆರನೇ ತರಗತಿಯಲ್ಲಿದ್ದಾಗಿನದು. ಹತ್ತಿರದ ಕಾಲೇಜಿನ ಹುಡುಗನೊಬ್ಬ ನಾನು ಶಾಲೆಯಿಂದ ಹೊರಬರುವುದನ್ನು ಕಾಯುತ್ತಿದ್ದ. ಅವನು ಪ್ರತಿದಿನ ನನ್ನ ಶಾಲೆಯ ರಿಕ್ಷಾವನ್ನು ಹಿಂಬಾಲಿಸಿ ಮನೆಯವರೆಗೆ ಬರುತ್ತಿದ್ದ. ಕೆಲವು ದಿನಗಳ ನಂತರ, ನನ್ನ ಗಮನವನ್ನು ಸೆಳೆಯಲು, ಅವನು ರಸ್ತೆಯ ಮಧ್ಯದಲ್ಲಿ ನನ್ನ ಮೇಲೆ ಕಲ್ಲು ಎಸೆಯಲು ಪ್ರಾರಂಭಿಸಿದ್ದ. ಅಲ್ಲಿದ್ದವರು ಯಾರೂ ಆತನ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದಿದ್ದಾರೆ.
ಇದರ ಮಧ್ಯೆ ನನ್ನ ಟೀಚರ್ ನನ್ನ ಮೇಲೆಯೇ ಆರೋಪ ಮಾಡಿದ್ರು. ನಾನು ಬಿಗಿಯಾದ ಬಟ್ಟೆ ಧರಿಸುತ್ತೇನೆ, ಕೂದಲಿಗೆ ಎಣ್ಣೆ ಹಚ್ಚಿ, ಕೂದಲು ಕಟ್ಟೋದಿಲ್ಲ. ಹಾಗಾಗಿ ಹುಡುಗ ನನ್ನ ಹಿಂದೆ ಬಿದ್ದಿದ್ದಾನೆ ಎಂದು ಟೀಚರ್ಸ್ ನನಗೆ ಹೇಳುತ್ತಿದ್ದರು. ಶಿಕ್ಷಕರ ಈ ಮಾತಿನ ನಂತರ ನಾನು ತುಂಬಾ ದಿನ ನನ್ನನ್ನೇ ದೂಷಿಸಿಕೊಳ್ಳುತ್ತಿದ್ದೆ. ಒಂದು ದಿನ ಬೆಳಿಗ್ಗೆ ಶಾಲೆಗೆ ಹೋಗಲು ರಿಕ್ಷಾಕ್ಕೆ ಕಾಯುತ್ತಿದ್ದಾಗ ವ್ಯಕ್ತಿಯೊಬ್ಬ ತನ್ನ ಖಾಸಗಿ ಅಂಗ ತೋರಿಸಿದ. ತೀವ್ರ ಮುಜುಗರವಾಯಿತು. ಆದರೆ ಟೀಚರ್ ಮಾತನ್ನು ನೆನೆದುಕೊಂಡು ಆಗ್ಲೂ ನಾನು ನನ್ನನ್ನು ದೂಷಿಸಿಕೊಂಡಿದ್ದೆ ಎಂದು ಸೆಲಿನಾ ಹೇಳಿದ್ದಾರೆ.
ನಾನು 11ನೇ ತರಗತಿಯಲ್ಲಿದ್ದಾಗ, ಹುಡುಗರು ನನ್ನ ಸ್ಕೂಟಿ ಬ್ರೇಕ್ ಕಟ್ ಮಾಡಿದ್ದರು. ಅವರು ಅಶ್ಲೀಲವಾಗಿ ನಿಂದಿಸಿದ್ದರು. ನೀನು ಜೀನ್ಸ್ ಧರಿಸಿ, ಮಾಡರ್ನ್ ಆಗಿ ಕಾಣುವ ಕಾರಣ ಯುವಕರು ನಿನ್ನನ್ನು ತಪ್ಪು ತಿಳಿದಿದ್ದಾರೆಂದು ಶಿಕ್ಷಕಿ ಆಗ್ಲೂ ಹೇಳಿದ್ದರಂತೆ. ಇದ್ರಿಂದ ನಾನು ತುಂಬಾ ನೋವು ತಿಂದಿದ್ದೆ ಎಂದು ಸೆಲಿನಾ ಸುದೀರ್ಘ ಪೋಸ್ಟ್ ಹಾಕಿದ್ದಾರೆ.
ʼಯುವತಿಯರು ಕಾಮಾಸಕ್ತಿ ನಿಯಂತ್ರಿಸಿಕೊಳ್ಳಿʼ ಎಂದ ನ್ಯಾಯಾಧೀಶರ ಸಲಹೆಗೆ ಕನಲಿದ ಸುಪ್ರೀಂ ಕೋರ್ಟ್!
ನವದೆಹಲಿ: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಆರೋಪಿಯೊಬ್ಬನನ್ನು ಖುಲಾಸೆಗೊಳಿಸಿದ ಕಲ್ಕತ್ತಾ ಹೈಕೋರ್ಟ್‌ನ (Kolkata high court) ಆದೇಶವನ್ನು ಸುಪ್ರೀಂ ಕೋರ್ಟ್ (Supreme Court) ಇಂದು ರದ್ದುಗೊಳಿಸಿದೆ. ಇದೇ ಪ್ರಕರಣದಲ್ಲಿ. “ಹದಿಹರೆಯದ ಹುಡುಗಿಯರು ಲೈಂಗಿಕ ಪ್ರಚೋದನೆಗಳನ್ನು ನಿಯಂತ್ರಿಸಿಕೊಳ್ಳಬೇಕು” ಎಂದು ನ್ಯಾಯಾಧೀಶರು ನೀಡಿದ ʼಸಲಹೆʼಯ ಬಗ್ಗೆ ಕಟುವಾಗಿ ಆಕ್ಷೇಪ ವ್ಯಕ್ತಪಡಿಸಿದೆ.
ನ್ಯಾಯಾಧೀಶರಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರು ಇದ್ದ ನ್ಯಾಯಪೀಠ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣಗಳನ್ನು ವ್ಯವಹರಿಸುವ ಕುರಿತು ನ್ಯಾಯಾಂಗ ಅಧಿಕಾರಿಗಳಿಗೆ ಹಲವಾರು ನಿರ್ದೇಶನಗಳನ್ನು ನೀಡಿದೆ ಎಂದು ಹೇಳಿದರು. ಪೀಠದ ಪರವಾಗಿ ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಓಕಾ, ನ್ಯಾಯಾಲಯಗಳು ತೀರ್ಪುಗಳನ್ನು ಹೇಗೆ ಬರೆಯಬೇಕು ಎಂಬುದರ ಬಗ್ಗೆಯೂ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಹೇಳಿದರು.
ಕಳೆದ ವರ್ಷ ಡಿಸೆಂಬರ್ 8ರಂದು ಸುಪ್ರೀಂ ಕೋರ್ಟ್ ಈ ತೀರ್ಪನ್ನು ಟೀಕಿಸಿತ್ತು. ಕೋಲ್ಕತ್ತಾ ಉಚ್ಚ ನ್ಯಾಯಾಲಯದ ಕೆಲವು ಅವಲೋಕನಗಳನ್ನು “ಅತ್ಯಂತ ಆಕ್ಷೇಪಾರ್ಹ ಮತ್ತು ಸಂಪೂರ್ಣವಾಗಿ ಅನಗತ್ಯ” ಎಂದು ಬಣ್ಣಿಸಿತ್ತು. ಹೈಕೋರ್ಟ್‌ನ ವಿಭಾಗೀಯ ಪೀಠವು ಮಾಡಿದ ಕೆಲವು ಅವಲೋಕನಗಳನ್ನು ಗಮನಕ್ಕೆ ತೆಗೆದುಕೊಂಡ ಪೀಠ, ತೀರ್ಪುಗಳನ್ನು ಬರೆಯುವಾಗ ನ್ಯಾಯಾಧೀಶರು “ಬೋಧನೆ” ಮಾಡಬಾರದು ಎಂದು ಹೇಳಿತು.
ಇದನ್ನೂ ಓದಿ: PM Narendra Modi : ಆಗಸ್ಟ್ 23ರಂದು ಉಕ್ರೇನ್ ಪ್ರವಾಸಕ್ಕೆ ತೆರಳಲಿದ್ದಾರೆ ಪ್ರಧಾನಿ ಮೋದಿ