ಬೆಂಗಳೂರು: ಬಿಗ್ ಬಾಸ್ʼನಿಂದ ಹೆಚ್ಚು ಜನಪ್ರಿಯರಾಗಿರುವ ಆ್ಯಂಕರ್ ಚೈತ್ರಾ ವಾಸುದೇವನ್ (Chaitra Vasudevan) ಅವರು ತಮ್ಮ ದಾಂಪತ್ಯಕ್ಕೆ ವಿಚ್ಛೇದನ ನೀಡಿರುವುದು ಗೊತ್ತೇ ಈದೆ. ಚೈತ್ರಾ ಅನೌನ್ಸ್ ಮಾಡಿದ ಬಳಿಕ ಈ ಬಗ್ಗೆ ಸಾಕಷ್ಟು ಚರ್ಚೆಗಳು ಸೋಷಿಯಲ್ ಮೀಡಿಯಾದಲ್ಲಿ ನಡೆಯಿತು. ಈ ಬಗ್ಗೆ ಚೈತ್ರಾ ಅವರೇ ಮಾಧ್ಯಮವೊಂದಕ್ಕೆ ಸ್ಪಷ್ಟನೆ ನೀಡಿದ್ದಾರೆ.
ಬಿಗ್ ಬಾಸ್ ಚೈತ್ರಾ (bigg boss kannada) ಅವರು ತಮ್ಮ ಡಿವೋರ್ಸ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ʻʻನನ್ನ ಮತ್ತು ನನ್ನ ಪತಿ ಮಧ್ಯೆ ಅಹಂಕಾರದ ಸಮಸ್ಯೆಯಿಂದ ಬೇರೆಯಾಗಿದ್ದೇವೆ ಎಂದು ಅಂದುಕೊಂಡಿದ್ದಾರೆ. ಆದರೆ ಅದು ಸುಳ್ಳು ಈ ವಿಚಾರವಾಗಿ ನಾವು ಬೇರೆಯಾಗಿದಲ್ಲ. ನಾವಿಬ್ಬರೂ 2017ರಲ್ಲಿ ಮದುವೆಯಾದೆವು, ಕಳೆದ 5 ವರ್ಷಗಳಿಂದ ನಮ್ಮ ನಡುವಿನ ಸಮಸ್ಯೆಯನ್ನ ಸರಿಪಡಿಸಿಕೊಳ್ಳಲು ಪ್ರಯತ್ನಪಟ್ಟಿದ್ದೇವು. ಆದರೆ ಅದು ಸಾಧ್ಯವಾಗದ ಕಾರಣ ಯೋಚಿಸಿ, ಇಬ್ಬರ ಸಮ್ಮತಿಯ ಮೇರೆಗೆ ಕೆಲವು ತಿಂಗಳುಗಳ ಹಿಂದೆ ಬೇರೆ ಆಗಿದ್ದೇವೆʼʼ ಎಂದು ನಟಿ ಮಾತನಾಡಿದ್ದಾರೆ.
ಈವೆಂಟ್‌ವೊಂದರಲ್ಲಿ ಚೈತ್ರಾ ಅವರನ್ನ ನೋಡಿ ಉದ್ಯಮಿ ಸತ್ಯ ನಾಯ್ಡು (Sathya Naidu) ಅವರು ಇಷ್ಟಪಟ್ಟು ಹಿರಿಯರನ್ನ ಒಪ್ಪಿಸಿ, 2017ರಲ್ಲಿ ಮದುವೆಯಾದರು. ಕುಂದಾಪುರದ ಹುಡುಗಿ ಚೈತ್ರಾ ಜತೆ ಸತ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಿನಿಮಾ ಕಾರ್ಯಕ್ರಮದ ನಿರೂಪಣೆ, ಬಿಗ್ ಬಾಸ್ ಮನೆಗೆ ಕಾಲಿಟ್ಟ ಚೈತ್ರಾ ಅಭಿಮಾನಿಗಳ ಗಮನ ಸೆಳೆದರು.
ಇದನ್ನೂ ಓದಿ: Chaitra Vasudevan: ಡೈವೋರ್ಸ್ ಹಿಂದೆಯೇ ʼನಿಂದಿಸಬೇಡಿʼ ಎಂದು ಪೋಸ್ಟ್ ಮಾಡಿದ ಆ್ಯಂಕರ್ ಚೈತ್ರಾ ವಾಸುದೇವನ್
ಡಿವೋರ್ಸ್ ಪೋಸ್ಟ್ ಹಂಚಿಕೊಂಡಿದ್ದ ಚೈತ್ರಾ
‘ಎಲ್ಲರಿಗೂ ನಮಸ್ಕಾರ. ಹಲವಾರು ತಿಂಗಳುಗಳಿಂದ ಸಾಕಷ್ಟು ಯೋಚಿಸಿದ ನಂತರ ನಾನು ನನ್ನ ವಿಚ್ಛೇದನದ ಬಗ್ಗೆ ನಿಮಗೆ ಹೇಳಲು ಧೈರ್ಯವನ್ನು ತೆಗೆದುಕೊಂಡಿದ್ದೇನೆ. ಸತ್ಯ ಮತ್ತು ನಾನು ಬೇರೆಯಾಗಿದ್ದೇವೆ. ನಿಂದನೆ /ದ್ವೇಷ ಬೇಡ ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ. ನನ್ನ ಈ ಸ್ಥಿತಿಯಿಂದ ಹೊರಬರಲು ಕಷ್ಟ ಪಡುತ್ತಿದ್ದೇನೆ. ಕೆಲಸ ಮಾತ್ರ ಜೀವನದಲ್ಲಿ ಮುನ್ನಡೆಯಲು ಸಹಾಯ ಮಾಡುತ್ತದೆ. ನಾನು ಈವೆಂಟ್ ಮತ್ತು ಟಿವಿ ಉದ್ಯಮದಲ್ಲಿ 10 ವರ್ಷಗಳಿಂದ ಕೆಲಸ ಮಾಡಿದ್ದೇನೆ. ನನ್ನ ಸೇವೆಯನ್ನು ಇನ್ನು ಮುಂದೆಯೂ ಮುಂದುವರಿಸಲು ಬಯಸುತ್ತೇನೆ ಮತ್ತು ನಿಮ್ಮಿಂದ ಹೆಚ್ಚಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ಎದುರು ನೋಡುತ್ತಿದ್ದೇನೆ’ ಎಂದು ಚೈತ್ರಾ ಬರೆದುಕೊಂಡಿದ್ದರು.
ಆ್ಯಂಕರ್ ಆಗಿದ್ದ ಚೈತ್ರಾ ‘ಬಿಗ್ ಬಾಸ್ (big boss) ಕನ್ನಡ ಸೀಸನ್ 7’ರ ಸ್ಪರ್ಧಿಯಾಗಿದ್ದರು. ಚೈತ್ರಾ ವಾಸುದೇವನ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಚೈತ್ರಾ ತಮ್ಮದೇ ಆದ ಈವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿದ್ದಾರೆ. ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಚೈತ್ರಾ ಅವರು ರೇಂಜ್ ರೋವರ್ ಕಂಪೆನಿಯ Evoque ಮಾಡೆಲ್ ಎಸ್ಯುವಿ ಅನ್ನು ಖರೀದಿ ಮಾಡಿದ್ದರು. ಈ ಕಾರಿನ ಆನ್ ರೋಡ್ ಬೆಲೆ 89 ಲಕ್ಷ ರೂಪಾಯಿ ಇದೆ.