Site icon Vistara News

Chandan Shetty:‌ ಚಂದನ್ ಶೆಟ್ಟಿ ಹೊಸ ಸಿನಿಮಾದಿಂದ ಬಿಗ್‌ ಅಪ್‌ಡೇಟ್‌!

Chandan Shetty with New Film team

ಬೆಂಗಳೂರು: ರ‍್ಯಾಪರ್‌ ಚಂದನ್ ಶೆಟ್ಟಿ (Chandan Shetty) ತಮ್ಮ ವೃತ್ತಿಯಲ್ಲಿ ಬಹು ಬೇಡಿಕೆಯಲ್ಲಿರುವ ನಟನೂ ಹೌದು. ನಾಯಕ ನಟನಾಗಿ ನಟಿಸಿರುವ ಒಂದೆರಡು ಸಿನಿಮಾಗಳು ಅಂತಿಮ ಘಟ್ಟದಲ್ಲಿರುವಾಗಲೇ ಚಂದನ್ ಮತ್ತೊಂದು ಸಿನಿಮಾಗೆ ಸಹಿ ಮಾಡಿದ್ದಾರೆ. ಯುವ ನಿರ್ದೇಶಕ ಅರುಣ್ ಅಮುಕ್ತ ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಚಿತ್ರದ ಟೈಟಲ್ ಇದೇ ಆಗಸ್ಟ್‌ 25 ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಅನಾವರಣಗೊಳ್ಳಲಿದೆ.

ಆಗಸ್ಟ್‌ 18ರಂದು ಚಿತ್ರತಂಡ ಟೈಟಲ್ ಪ್ರೋಮೊ ಬಿಡುಗಡೆಗೊಳಿಸಿದೆ. ಈ ಪ್ರೋಮೊಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆಗಳೂ ಸಿಕ್ಕಿವೆ. ಈ ಮೂಲಕವೇ ಸದರಿ ಚಿತ್ರದ ಶೀರ್ಷಿಕೆ ಏನಿರಬಹುದೆಂಬ ಕುತೂಹಲವೂ ಮೂಡಿಕೊಂಡಿದೆ. ಒಂದು ಪ್ರತಿಭಾನ್ವಿತ ಯುವ ತಂಡ, ಒಂದೊಳ್ಳೆ ಕಥೆಯ ಮೂಲಕ ಈ ಸಿನಿಮಾದೊಂದಿಗೆ ಚಂದನ್ ಪ್ರೇಕ್ಷಕರ ಮುಂದೆ ಬರುವ ಲಕ್ಷಣಗಳೂ ದಟ್ಟವಾಗಿವೆ. ಒಟ್ಟಾರೆ ಸಿನಿಮಾ ಹೇಗಿರಬಹುದೆಂಬ ಸಣ್ಣ ಸೂಚನೆ ಈ ಟೈಟಲ್ ಜತೆಗೆ ಅನಾವರಣಗೊಳ್ಳುವ ನಿರೀಕ್ಷೆಗಳಿವೆ.

ಅರುಣ್ ಅಮುಕ್ತ ಮೂಲತಃ ಆ್ಯಡ್ ಫಿಲಂ ಮೇಕರ್ ಆಗಿದ್ದಾರೆ. ಚಿತ್ರರಂಗದಲ್ಲಿ ಹತ್ತಾರು ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದಾರೆ. ಅಷ್ಟೆಲ್ಲ ಅನುಭವಗಳನ್ನು ಒಗ್ಗೂಡಿಸಿಕೊಂಡು ಒಂದೊಳ್ಳೆ ಕಥೆಯೊಂದಿಗೆ ಈ ಚಿತ್ರವನ್ನು ನಿರ್ದೇಶನ ಮಾಡಲು ಮುಂದಾಗಿದ್ದಾರಂತೆ. ಸದ್ಯದ ಮಟ್ಟಿಗೆ ಇದೊಂದು ಟೀನೇಜ್ ಡ್ರಾಮಾ ಆಗಿರಲಿದೆ ಎಂಬ ಸುಳಿವು ಚಿತ್ರತಂಡದ ಕಡೆಯಿಂದ ಸಿಕ್ಕಿದೆ.

ಇದನ್ನೂ ಓದಿ: Chandan Shetty: ಬಹು ದಿನಗಳ ಕನಸು ನನಸಾಯಿತು! ಚಂದನ್‌ ಶೆಟ್ಟಿ ಹೀಗೆ ಹೇಳಿದ್ದೇಕೆ?

ಈ ಚಿತ್ರದ ತಾರಾಗಣದಲ್ಲಿ ಚಂದನ್ ಶೆಟ್ಟಿ ಜತೆಗೆ ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಮತ್ ಸಂಬರ್ಗಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ತಾಂತ್ರಿಕ ವರ್ಗವೂ ಸೇರಿದಂತೆ, ಬಹುಮುಖ್ಯವಾದ ಇನ್ನೊಂದಷ್ಟು ವಿಚಾರಗಳನ್ನು ಹಂತ ಹಂತವಾಗಿ ಪ್ರೇಕ್ಷಕರ ಮುಂದಿಡಲು ಚಿತ್ರತಂಡ ತೀರ್ಮಾನಿಸಿದೆ.

Exit mobile version