ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಗಾಯಕ, ರ್ಯಾಪರ್ ಚಂದನ್ ಶೆಟ್ಟಿ (Chandan Shetty) ಹಲವು ಸಿನಿಮಾಗಳಲ್ಲಿ ಹಾಡು ಮತ್ತು ನಟನೆಯಲ್ಲಿ ಬ್ಯುಸಿಯಾಗಿದ್ದಾರೆ. ಬಿಗ್ ಬಾಸ್ ಮನೆಗೆ ಹೋಗಿ ವಿನ್ನರ್ ಕೂಡ ಆಗಿದ್ದಾರೆ. ಹಲವು ಸಿನಿಮಾಗಳಿಗೆ ಸಂಗೀತ ನೀಡುತ್ತಿರುವ ಅವರು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಇದೀಗ ಬಹು ದಿನಗಳ ಕನಸು ನನಸಾಯಿತು ಎಂದು ಇನ್ಸ್ಟಾ ಪೋಸ್ಟ್ನಲ್ಲಿ ಹೇಳಿಕೊಂಡಿದ್ದಾರೆ.
ʻʻನ್ಯೂಯಾರ್ಕ್ ಟೈಮ್ಸ್ ಸ್ಕ್ವೇರ್ನಲ್ಲಿ ಪ್ರದರ್ಶನ ನೀಡುವುದು ನನ್ನ ಕನಸಾಗಿತ್ತು, ಇದೀಗ ನನ್ನ ಕನಸು ನನಸಾಗಿದೆʼʼ ಎಂದು ಇನ್ಸ್ಟಾದಲ್ಲಿ ವಿಡಿಯೊ ಹಂಚಿಕೊಂಡಿದ್ದಾರೆ ಚಂದನ್.
ಚಂದನ್ ಶೆಟ್ಟಿ ಇನ್ಸ್ಟಾ ಪೋಸ್ಟ್
ಈ ಹಿಂದೆ ಅಷ್ಟೇ ಚಂದನ್ ಅವರು ಮದುವೆಯ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದರು. ಪತ್ನಿ ನಿವೇದಿತಾ ಗೌಡ ಪೋಸ್ಟ್ ಹಂಚಿಕೊಂಡು ʻʻವಿವಾಹ ವಾರ್ಷಿಕೋತ್ಸವದ ಶುಭಾಶಯಗಳು. ನಿಮ್ಮನ್ನು ತುಂಬಾ ಪ್ರೀತಿಸುತ್ತೇನೆ. ಯಾವಾಗಲೂ ನನ್ನನ್ನು ಪ್ರೀತಿಸುತ್ತಿರಿʼʼ ಎಂದು ಚಂದನ್ ಅವರಿಗೆ ವಿಶ್ ಮಾಡಿದ್ದಾರೆ. ಚಂದನ್ ಶೆಟ್ಟಿ ಪ್ರಪೋಸ್ ಮಾಡಿದ್ದ ಸಹ ಕಾಂಟ್ರವರ್ಸಿ ಆಗಿತ್ತು. 2019ರಲ್ಲಿ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್ ರೊಮ್ಯಾಂಟಿಕ್ ಸಾಂಗ್ ಹಾಡಿದ ನಂತರ ಮಂಡಿಯೂರಿ ಪ್ರಪೋಸ್ ಮಾಡಿದ್ದರು. ಇದು ಭಾರೀ ವಿವಾದಕ್ಕೆ ಒಳಗಾಗಿತ್ತು.