Site icon Vistara News

Chandanavana Film Critics Academy 2023: ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ: ಅತಿ ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡ ಕಾಂತಾರ, ಕೆಜಿಎಫ್‌-2

Chandanavana Film Critics Academy 2023

ಬೆಂಗಳೂರು: 4ನೇ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ ಪ್ರಶಸ್ತಿ (Chandanavana Film Critics Academy 2023) ಪ್ರದಾನ ಸಮಾರಂಭವು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ನಲ್ಲಿ ಮಾರ್ಚ್‌ 5ರಂದು ಡೆಯಿತು. 2022ನೇ ಸಾಲಿನಲ್ಲಿ ಬಿಡುಗಡೆಯಾದ ಸಿನಿಮಾಗಳಿಗೆ ನೀಡಲಾದ ಪ್ರಶಸ್ತಿಯಲ್ಲಿ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ’ ಹಾಗೂ ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ 2’ ಚಿತ್ರಗಳು ಅತೀ ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡಿವೆ.

ಅತ್ಯುತ್ತಮ ನಟ ಪ್ರಶಸ್ತಿಯನ್ನು ಕಾಂತಾರ ಸಿನಿಮಾದ ನಟನೆಗಾಗಿ ರಿಷಬ್ ಶೆಟ್ಟಿ ಪಾಲಾಗಿದ್ದರೆ, ಅತ್ಯುತ್ತಮ ಚಿತ್ರ ಪ್ರಶಸ್ತಿ ಕೂಡ ‘ಕಾಂತರ’ದ ಕೈ ಸೇರಿದೆ. ಅತ್ಯುತ್ತಮ ಸಂಗೀತ ಕಾಂತಾರ ಚಿತ್ರಕ್ಕಾಗಿ ಅಜನೀಶ್ ಲೋಕನಾಥ್ ಪಡೆದುಕೊಂಡರೆ, ಅತ್ಯುತ್ತಮ ಸ್ಟಂಟ್ ಪ್ರಶಸ್ತಿಯು ಕಾಂತಾರ ಸಿನಿಮಾದ ವಿಕ್ರಮ್ ಮೋರ್ ಅವರಿಗೆ ಸಂದಿದೆ.
ಯಶ್ ಹಾಗೂ ಪ್ರಶಾಂತ್ ನೀಲ್ ಕಾಂಬಿನೇಷನ್‌ನ ಈ ಚಿತ್ರಕ್ಕೆ ಒಟ್ಟು ಮೂರು ಪ್ರಶಸ್ತಿಗಳು ಸಂದಿದ್ದು, ಸಿನಿಮಾಟೋಗ್ರಫಿಗಾಗಿ ಭುವನ್ ಗೌಡ, ಅತ್ಯುತ್ತಮ ಸಂಕಲನಕ್ಕಾಗಿ ಪ್ರಜ್ವಲ್ ಕುಲಕರ್ಣಿ ಹಾಗೂ ಅತ್ಯುತ್ತಮ ವಿಎಫ್ ಎಕ್ಸ್ ಹಾಗಿ ಉದಯ ರವಿ ಹೆಗಡೆ ಪಡೆದುಕೊಂಡಿದ್ದಾರೆ. ಅತ್ಯುತ್ತಮ ನಟಿ ಪ್ರಶಸ್ತಿಯು ಗಾಳಿಪಟ-2 ಚಿತ್ರಕ್ಕಾಗಿ ಶರ್ಮಿಳಾ ಮಾಂಡ್ರೆಗೆ ದೊರೆತರೆ, ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು 777 ಚಾರ್ಲಿ ಚಿತ್ರಕ್ಕಾಗಿ ಕಿರಣ್ ರಾಜ್ ಕೆ ಪಡೆದಿದ್ದಾರೆ.

ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಫೋಟೊಗಳು

ಐದು ವಿಶೇಷ ಪ್ರಶಸ್ತಿಗಳು

ಈ ಬಾರಿ ಐದು ವಿಶೇಷ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಯಿತು. ಪುನೀತ್ ರಾಜ್‌ಕುಮಾರ್‌ ಹೆಸರಿನಲ್ಲಿ ಅತ್ಯುತ್ತಮ ನಿರ್ಮಾಪಕ (ಡೆಬ್ಯು), ಸಂಚಾರಿ ವಿಜಯ್ ಹೆಸರಿನಲ್ಲಿ ಅತ್ಯುತ್ತಮ ನಟ (ಡೆಬ್ಯು), ತ್ರಿಪುರಾಂಭ ಹೆಸರಿನಲ್ಲಿ ಅತ್ಯುತ್ತಮ ನಟಿ (ಡೆಬ್ಯು), ಶಂಕರನಾಗ್ ಹೆಸರಿನಲ್ಲಿ ಅತ್ಯುತ್ತಮ ನಿರ್ದೇಶಕ (ಡೆಬ್ಯು) ಹಾಗೂ ಚಿ.ಉದಯ ಶಂಕರ್ ಹೆಸರಿನಲ್ಲಿ ಅತ್ಯುತ್ತಮ ಬರಹಗಾರ (ಡೆಬ್ಯು) ಪ್ರಶಸ್ತಿಯನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಮೋಹಕ ತಾರೆ ರಮ್ಯಾ, ನಟಿ ಕಾರುಣ್ಯ ರಾಮ್, ನಿರ್ದೇಶಕ ಬಿ.ಸುರೇಶ್, ರಾಜೇಂದ್ರ ಸಿಂಗ್ ಬಾಬು, ನಾಗತಿಹಳ್ಳಿ ಚಂದ್ರಶೇಖರ್, ಸ್ಮೈಲ್ ಶ್ರೀನು, ಬಿ.ಎಸ್.ಲಿಂಗದೇವರು, ಫಿಲ್ಮ್ ಚೇಂಬರ್ ಅಧ್ಯಕ್ಷ ಭಾ.ಮಾ.ಹರೀಶ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ ವಿಜೇತರು

Exit mobile version