Site icon Vistara News

Kannada New Movie: ‘ಚಿಕ್ಕಿಯ ಮೂಗುತಿ’ ಟೀಸರ್ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್, ಸಿನಿಮಾಗೆ ಹೆಣ್ಣು ಮಕ್ಕಳೇ ಶಕ್ತಿ!

CHIKKIYA MUGUTI Movie

ಬೆಂಗಳೂರು: ಲವ್ ಸ್ಟೋರಿ, ಕ್ರೈಮ್, ಹಾರರ್ ಸಿನಿಮಾಗಳ (Kannada New Movie) ನಡುವೆ ಆಗಾಗ ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ, ವಿನೂತನ ಕಾನ್ಸೆಪ್ಟ್‌ನ ಚಿತ್ರಗಳು ಸಹ ಸದ್ದು ಮಾಡುತ್ತಿರುತ್ತವೆ. ಇದೀಗ ಮತ್ತೊಂದು ಹೊಸ ಬಗೆಯ ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ. ಅದೇ ʻಚಿಕ್ಕಿಯ ಮೂಗುತಿʼ. ದೇವಿಕಾ ಜನಿತ್ರಿ ನಿರ್ದೇಶನದ ಚಿಕ್ಕಿಯ ಮೂಗುತಿ ಸಿನಿಮಾ ಸದ್ಯ ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಟೀಸರ್ ಬಿಡುಗಡೆ ಮಾಡುವ ಮೂಲಕ ನವ ನಿರ್ದೇಶಕಿಗೆ ಸಾಥ್ ಕೊಟ್ಟಿದ್ದಾರೆ ಅಶ್ವಿನಿ ಪುನೀತ್ ರಾಜ್ ಕುಮಾರ್. ಅಪ್ಪು ಹಾಗೂ ಅಶ್ವಿನಿಯವರ ಆತ್ಮೀಯರು ಆಗಿರುವ ದೇವಿಕಾ ಜನಿತ್ರಿ ನಿರ್ದೇಶದ ಮೊದಲ ಸಿನಿಮಾ ಇದಾಗಿದೆ. ಚಿಕ್ಕಿಯ ಮೂಗುತಿ (CHIKKIYA MUGUTI Movie) ಕಾದಂಬರಿ ಆಧಾರಿತ ಸಿನಿಮಾವಾಗಿದ್ದು ವಿಶೇಷ ಎಂದರೆ ದೇವಿಕಾ ಜನಿತ್ರಿ ಅವರೇ ಬರೆದಿದ್ದ ಕಾದಂಬರಿಯೇ ಈಗ ಚಿತ್ರವಾಗಿ ಮೂಡಿ ಬರುತ್ತಿದೆ. ಇನ್ನು ನಿರ್ದೇಶನದ ಜತೆಗೆ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಅಂದಹಾಗೆ ‘ಚಿಕ್ಕಿಯ ಮೂಗುತಿ’ ಹೆಸರೇ ಹೇಳುವ ಹಾಗೆ ಇದೊಂದು ಮಹಿಳಾ ಪ್ರಧಾನ ಸಿನಿಮಾ. ಹೆಣ್ಣು ಮಕ್ಕಳ ಹೋರಾಟ, ಶೋಷಣೆ ಬಗ್ಗೆ ಇರುವ ಚಿತ್ರ ಇದಾಗಿದೆ. ಹಿರಿಯ ನಟಿ ತಾರಾ ಅನುರಾಧಾ, ಶ್ವೇತಾ ಶ್ವೀವಾತ್ಸವ್, ಭವಾನಿ ಪ್ರಕಾಶ್, ಅವಿನಾಶ್, ತಬಲ ನಾಣಿ, ರಂಗಾಯಣ ರಘು, ಭರತ್ ಬೋಪಣ್ಣ ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ. ವಿಶೇಷ ಎಂದರೆ ಈ ಸಿನಿಮಾಗೆ ಹೆಣ್ಣು ಮಕ್ಕಳೇ ಶಕ್ತಿ ಎಂದರೆ ತಪ್ಪಾಗಲ್ಲ. ಯಾಕೆಂದರೆ ನಿರ್ದೇಶಕಿ ಸೇರಿದಂತೆ ಬಹುತೇಕರು ಹೆಣ್ಣು ಮಕ್ಕಳೇ ಸೇರಿಕೊಂಡು ಮಾಡಿರುವ ಸಿನಿಮಾ ಇದಾಗಿದೆ.

ಟೀಸರ್ ರಿಲೀಸ್ ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ತಾರಾ,ʻʻ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದಂತೆ ಈ ಸಿನಿಮಾದಲ್ಲೂ ಮಹಿಳೆಯರಿಗೂ ಮೀಸಲಾತಿ ಇದೆ. ಎಲ್ಲರೂ ಹೆಣ್ಣು ಮಕ್ಕಳೆ ಸೇರಿಕೊಂಡು ಮಾಡಿರುವ ಸಿನಿಮಾ, ಅದ್ಭತವಾಗಿ ಸಿನಿಮಾ ಮೂಡಿಬಂದಿದೆ. ದೇವಿಕಾ ಅವರ ಮೊದಲು ಸಿನಿಮಾ ಅಂತ ಅನಿಸುವುದೇ ಇಲ್ಲ, ಉತ್ತಮವಾಗಿ ಮೂಡಿಬಂದಿದೆ’ ಎಂದು ಹೇಳಿದರು. ಇನ್ನು ನಟಿ ಶ್ವೇತಾ ಮಾತನಾಡಿ ʻʻಮಗುವಿಗೆ ಜನ್ಮ ನೀಡಿದ ಬಳಿಕ ನಟನೆ ಮಾಡಿದ ಮೊದಲ ಸಿನಿಮಾʼʼ ಎಂದು ಹೇಳಿದರು. ಭವಾನಿ ಪ್ರಕಾಶ್ ಕೂಡ ಪಾತ್ರದ ಬಗ್ಗೆ ಸಂತಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Kannada New Movie: ಬೆಳಗಾವಿಗೆ ಬರ್ತಿದೆ ʻಇನಾಮ್ದಾರʼ; ಬಿಗ್‌ ಅಪ್‌ಡೇಟ್‌ ಹಂಚಿಕೊಂಡ ಚಿತ್ರತಂಡ!

ನಿರ್ದೇಶಕಿ ದೇವಿಕಾ ಜನಿತ್ರಿ ಅವರು ಈ ಮೊದಲು ಕಾಸ್ಟ್ಯೂಮ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದರು. ಅನೇಕ 40ಕ್ಕೂ ಅಧಿಕ ಕಾದಂಬರಿಗಳನ್ನು ಬರೆದಿದ್ದಾರೆ. ಇದೀಗ ಅವರ ಒಂದು ಕಾದಂಬರಿ ಚಿಕ್ಕಿಯ ಮೂಗುತಿ ಸಿನಿಮಾವಾಗಿ ತೆರೆ ಮೇಲೆ ಬರಲು ಸಜ್ಜಾಗಿದೆ. ಸದ್ಯ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿಕ್ಕಿಯ ಮೂಗುತಿ ಈ ವರ್ಷದ ಕೊನೆಯಲ್ಲಿ ಅಥವಾ ಮುಂದಿನ ವರ್ಷ ತೆರೆಗೆ ಬರುವ ಸಾಧ್ಯತೆ ಇದೆ. ಸಿನಿಮಾದ ಟೀಸರ್ ಇದೇ ತಿಂಗಳು 20ಕ್ಕೆ ಪಿಆರ್‌ಕೆ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಲಿದೆ.

ಚಿಕ್ಕಿಯ ಮೂಗುತಿ ಚಿತ್ರ ಜನಿತ್ರಿ ಪ್ರೋಡಕ್ಷನ್ ನಿರ್ಮಾಣವಾಗಿದೆ, ಚಿತ್ರಕ್ಕೆ ಪೂರ್ಣ ಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಮಾಡಿದ್ದು ವೆಂಕಟೇಶ್ ಆರ್ ಕ್ಯಾಮೆರಾ ವರ್ಕ್ ಜತೆಗೆ ಎಡಿಟಿಂಗ್ ಕೂಡ ಮಾಡಿದ್ದಾರೆ.

Exit mobile version