ಬೆಂಗಳೂರು : ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ‘ಪಠಾಣ್’ ಚಿತ್ರದ (Pathaan Film) ‘ಬೇಷರಮ್ ರಂಗ್’ ಹಾಡು ಮತ್ತು ಇತರ ಅಶ್ಲೀಲ ಕಂಟೆಂಟ್‌ಗಳನ್ನು ಸಾಮಾಜಿಕ ಮಾಧ್ಯಮದಿಂದ ತೆಗೆದುಹಾಕುವಂತೆ ಸಲಹೆ ನೀಡಿದೆ. ಬಾಲಾಪರಾಧಿ ನ್ಯಾಯ ಕಾಯಿದೆ 2015ರ ಪ್ರಕಾರ ‘ಹದಿಹರೆಯದವರ ಮನಸ್ಸಿನ ಮೇಲೆ ಹಾನಿಕಾರಕ ಪರಿಣಾಮ’ ಬೀರಲಿದೆ ಎಂದು ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದೆ.
‘ಬೇಷರಮ್ ರಂಗ್’ ಹಾಡು ಸೇರಿದಂತೆ ಸಿನಿಮಾಗೆ ಸಂಬಂಧಪಟ್ಟಂತಹ ಅನೇಕ ಅಶ್ಲೀಲ ಕಂಟೆಂಟ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದೆ. ಐಎಎನ್‌ಎಸ್ ಪ್ರಕಾರ, ಡಿಜಿಪಿಗೆ ಕಳುಹಿಸಲಾದ ಪತ್ರದಲ್ಲಿ ಬಹ್ರೈಚ್ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಶ್ರೀವಾಸ್ತವ ಮತ್ತು ದೀಪಮಾಲಾ ಪ್ರಧಾನ್, ಅರ್ಚನಾ ಪಾಂಡೆ ಮತ್ತು ನವನೀತ್ ಮಿಶ್ರಾ ಅವರನ್ನೊಳಗೊಂಡ ನಾಲ್ವರು ಸದಸ್ಯರ ಪೀಠವು, ʻʻಉತ್ತರ ಪ್ರದೇಶದಿಂದ ಹದಿಹರೆಯದವರಿಗೆ ಸ್ಮಾರ್ಟ್ ಮೊಬೈಲ್ ಫೋನ್‌ಗಳನ್ನು ಅವರ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ಕಾರ ನೀಡಿದೆ. ಇದರಿಂದಾಗಿ ಈ ತರಹದ ಕಂಟೆಂಟ್‌ಗಳು ಮಕ್ಕಳಿಗೆ ಸುಲಭವಾಗಿ ತಲುಪುತ್ತವೆ. ಅವರು ಅದನ್ನು ವೀಕ್ಷಿಸುತ್ತಾರೆ. ಅವರ ಹಿತದೃಷ್ಟಿಯಿಂದ ಸೋಷಿಯಲ್ ಮೀಡಿಯಾದಲ್ಲಿ ಈ ಹಾಡು ಮತ್ತು ಕಂಟೆಂಟ್‌ಗಳನ್ನು ತೆಗೆದುಹಾಕುವುದು ಅಗತ್ಯʼʼ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ | Pathaan Film | ʻಪಠಾಣ್ʼ ಸಿನಿಮಾದ ಹಾಡುಗಳಲ್ಲಿ ಬದಲಾವಣೆಗೆ ಸೆನ್ಸಾರ್ ಮಂಡಳಿ ಆದೇಶ
ಹಾಡುಗಳಲ್ಲಿ ಬದಲಾವಣೆಗೆ ಸೆನ್ಸಾರ್ ಮಂಡಳಿ ಆದೇಶ
ಶಾರುಖ್-ದೀಪಿಕಾ ಪಡುಕೋಣೆ ಒಟ್ಟಿಗೆ ನಟಿಸಿರುವ ಪಠಾಣ್ ಸಿನಿಮಾ (Pathaan Film) CBFCಗೆ ಸೆನ್ಸಾರ್‌ಶಿಪ್‌ಗಾಗಿ ಕಳುಹಿಸಲಾಗಿದೆ. ಸೆನ್ಸಾರ್ ಮಂಡಳಿ, ಚಿತ್ರವನ್ನು ಪರಿಶೀಲಿಸಿದ ನಂತರ, ಹಾಡುಗಳನ್ನು ಒಳಗೊಂಡಂತೆ ಚಿತ್ರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಚಿತ್ರತಂಡಕ್ಕೆ ಆದೇಶ ನೀಡಿದೆ. ಮತ್ತೊಮ್ಮೆ ಪರಿಶೀಲಿಸಿದ ನಂತರ ಪರಿಷ್ಕೃತ ಆವೃತ್ತಿಯನ್ನು ಸಲ್ಲಿಸುವಂತೆ ತಿಳಿಸಿದೆ ಎಂದು ವರದಿಯಾಗಿದೆ.
ʻಬೇಷರಮ್ ರಂಗ್’ ವಿವಾದ
ಪಠಾಣ್ ಸಿನಿಮಾದ ʻಬೇಷರಮ್ ರಂಗ್’ ಹಾಡಿನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ವಿವಾದ ತಾರಕಕ್ಕೇರಿತ್ತು. ಇದು ಅವಮಾನಿಸಲೆಂದೇ ಮಾಡಿದ ಕೃತ್ಯ ಎಂದು ಹಿಂದುಪರ ಸಂಘಟನೆಗಳು ಆರೋಪಿಸಿದ್ದವು. ‘ಬೇಷರಮ್ ರಂಗ್’ ಅಂದರೆ ಕನ್ನಡದಲ್ಲಿ ನಾಚಿಕೆ ಇಲ್ಲದ ಬಣ್ಣ ಎಂದಾಗುತ್ತದೆ. ಕೇಸರಿ ಬಣ್ಣಕ್ಕೆ ನಾಚಿಕೆ ಇಲ್ಲದ ಬಣ್ಣ ಎಂದು ಜರೆದಿದ್ದಾರೆ ಎಂದು ಹೋಲಿಕೆ ಮಾಡಿಕೊಂಡು ಹಲವರು ಗರಂ ಆಗಿದ್ದರು. ಬೇಕು ಎಂತಲೇ ಈ ರೀತಿ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂದು ಕಮೆಂಟ್ ಕೂಡ ಮಾಡಿದ್ದರು. ಜನವರಿ 25, 2023ಕ್ಕೆ ಚಿತ್ರ ಬಿಡುಗಡೆಗೊಳ್ಳುತ್ತಿದೆ. ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ರಿಲೀಸ್ ಆಗುತ್ತಿರುವುದಾಗಿ ಚಿತ್ರ ತಂಡ ಹಂಚಿಕೊಂಡಿದೆ.
ಇದನ್ನೂ ಓದಿ | Pathaan Film | ಜರ್ಮನಿಯಲ್ಲಿ ಪಠಾಣ್ ಸಿನಿಮಾಗೆ ಸಖತ್ ರೆಸ್ಪಾನ್ಸ್: ಬಹುತೇಕ ನಗರಗಳಲ್ಲಿ ಟಿಕೆಟ್‌ಗಳು ಸೋಲ್ಡ್ ಔಟ್!