Site icon Vistara News

Daredevil Mustafa: ʻಡೇರ್‌ಡೆವಿಲ್ ಮುಸ್ತಫಾʼ ಸಿನಿಮಾ ವೀಕ್ಷಣೆಗೆ ಕೇವಲ ಒಂದು ರೂಪಾಯಿ: ಡಾಲಿ ಪೋಸ್ಟ್‌ ವೈರಲ್‌!

Daredevil Mustafa Premiere Show Ticket Only One Rupee

ಬೆಂಗಳೂರು: ಪೂರ್ಣಚಂದ್ರ ತೇಜಸ್ವಿ ಅವರ ಕಥೆಗಳನ್ನು ಓದುಗರೇ ಹಣ ಹಾಕಿ ಸಿನಿಮಾ ಮಾಡಿದ ʻಡೇರ್‌ಡೆವಿಲ್ ಮುಸ್ತಫಾʼ (Daredevil Mustafa) ಮೇ 19ರಂದು ಬಿಡುಗಡೆಯಾಗುತ್ತಿದೆ. ಮೇ 18ರಂದು ಪ್ರೀಮಿಯರ್‌ ಶೋ ಆರಂಭವಾಗಲಿದೆ. ‘ಡೇರ್‌ಡೆವಿಲ್ ಮುಸ್ತಾಫಾ’ ಚಿತ್ರದ ಪ್ರೀಮಿಯರ್ ಶೋ ಟಿಕೆಟ್ ಬೆಲೆ ಕೇವಲ ಒಂದು ರೂಪಾಯಿ ಎಂದು ಚಿತ್ರತಂಡ ಘೋಷಿಸಿದೆ.

‘ಡೇರ್‌ಡೆವಿಲ್ ಮುಸ್ತಾಫಾ’ ಪ್ರೀಮಿಯರ್ ಶೋ ಟಿಕೆಟ್ ಕೇವಲ ಒಂದು ರೂಪಾಯಿಗೆ ಎಂದು ಧನಂಜಯ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಬೆಂಗಳೂರು ಒರಾಯನ್ ಮಾಲ್, ಮೈಸೂರು ಡಿಸಿಆರ್‌ ಹಾಗೂ ಶಿವಮೊಗ್ಗದ ಭಾರತ್ ಸಿನಿಮಾಸ್‌ನಲ್ಲಿ ಮೇ 18ರಂದು ಪ್ರೀಮಿಯರ್ ಶೋಗಳನ್ನು ಏರ್ಪಡಿಸಲಾಗಿದೆ. ಶಿವಮೊಗ್ಗದ ಭಾರತಿ ಸಿನಿಮಾಸ್‌ನಲ್ಲಿ ಈಗಾಗಲೇ ಪ್ರೀಮಿಯರ್ ಶೋ ಟಿಕೆಟ್ ಸೋಲ್ಡ್‌ಔಟ್ ಆಗಿದೆ. ಬೆಂಗಳೂರು, ಮೈಸೂರಿನಲ್ಲಿ ಬುಕ್ಕಿಂಗ್ ಆರಂಭ ಆಗಬೇಕಿದೆ.

ಡಾಲಿ ಧನಂಜಯ್‌ ಟ್ವೀಟ್‌

ಪೂರ್ಣಚಂದ್ರ ತೇಜಸ್ವಿ ಅಭಿಮಾನಿಗಳಿಂದಲೇ ತಯಾರಾಗಿರುವ ಸಿನಿಮಾಗೆ ನಟರಾಕ್ಷಸ ಡಾಲಿ ಧನಂಜಯ್ ಬೆಂಬಲವಾಗಿ ನಿಂತಿದ್ದಾರೆ. ಧನಂಜಯ್ ಈ ಚಿತ್ರವನ್ನು ಪ್ರಸ್ತುತ ಪಡಿಸುತ್ತಿದ್ದು, ಕೆ ಆರ್ ಜಿ ಸ್ಟುಡಿಯೊಸ್ ರಾಜ್ಯದೆಲ್ಲೆಡೆ ವಿತರಿಸುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ಈಗಾಗಲೇ ವಿಭಿನ್ನವಾಗಿ ಪ್ರಚಾರ ನಡೆಸುತ್ತಿರುವ ಚಿತ್ರತಂಡ ಮೇ 19ಕ್ಕೆ ರಾಜ್ಯಾದ್ಯಂತ ಸಿನಿಮಾ ಬಿಡುಗಡೆ ಮಾಡಲು ಸಜ್ಜಾಗಿದೆ. ಡೇರ್ ಡೆವಿಲ್ ಮುಸ್ತಫಾ ಸಿನಿಮಾಗೆ ಶಶಾಂಕ್ ಸೋಗಾಲ್ ಸಾರಥಿ. ಅವರೇ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ʻಫಟಿಂಗʼ ಎಂಬ ಕಿರುಚಿತ್ರ ನಿರ್ದೇಶಿಸಿದ್ದ ಶಶಾಂಕ್ ಸೋಗಾಲ್ ಈ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ.

ಇದನ್ನೂ ಓದಿ: Daredevil Mustafa: ಮಜವಾಗಿದೆ `ಡೇರ್‌ಡೆವಿಲ್ ಮುಸ್ತಫಾʼ ಟ್ರೈಲರ್‌: ಡಾಕ್ಟರ್‌ ಬ್ರೋ ಸಾಥ್‌!

ಆರಂಭದಲ್ಲಿ ನಾನಾ ಬಗೆಯಲ್ಲಿ ಸಿನಿರಸಿಕರನ್ನು ಗಮನಸೆಳೆಯುತ್ತಿರುವ `ಡೇರ್‌ಡೆವಿಲ್ ಮುಸ್ತಫಾ’ ಸಿನಿಮಾದ ʻʻ’ನಿನ್ನಂಥೋರ್ ಯಾರೂ ಇಲ್ವಲ್ಲೋ ಲೋಕದಾ ಮ್ಯಾಲೆ’ʼʼ ಎಂಬ ಹಾಡು ಸೂಪರ್ ಹಿಟ್ ಲಿಸ್ಟ್ ಸೇರಿದೆ. ಅಣ್ಣಾವ್ರ ಆನಿಮೇಷನ್ ಮೂಲಕ ಗಮನಸೆಳೆದಿರುವ ಈ ಗಾನಲಹರಿಗೆ ವಾಸುಕಿ ವೈಭವ್ ಹಾಗೂ ಸಿದ್ದಾರ್ಥ್ ಬೆಳ್ಮಣ್ಣು ಧ್ವನಿಯಾಗಿದ್ದಾರೆ. ವಿಭಿನ್ನವಾಗಿ ಮೂಡಿಬಂದಿರುವ ʻನಿನ್ನಂಥೋರ್ ಯಾರೂ ಇಲ್ವಲ್ಲೋʼ ಹಾಡು ಸಿನಿಮಾದಲ್ಲಿ ಹೇಗಿರಲಿದೆ ಎಂಬ ನಿರೀಕ್ಷೆ ಹೆಚ್ಚಿಸಿದೆ.

ರಾಹುಲ್‌ ರಾಯ್‌ ಛಾಯಾಗ್ರಹಣ, ನವನೀತ್‌ ಶ್ಯಾಮ್‌ ಸಂಗೀತವಿದೆ. ಶಿಶಿರ್‌ ಬೈಕಾಡಿ, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್‌. ಉಮೇಶ್‌, ಮಂಡ್ಯ ರಮೇಶ್‌, ಮೈಸೂರ್‌ ಆನಂದ್‌, ಸುಂದರ್‌ ವೀಣಾ, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು ಸೇರಿ ಅನೇಕ ಕಲಾವಿದರು ಈ ಸಿನಿಮಾದ ಭಾಗವಾಗಿದ್ದಾರೆ.

Exit mobile version