Site icon Vistara News

Deepika Padukone | ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

Deepika

ಮುಂಬೈ: ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ (Deepika Padukone) ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಸೋಮವಾರ ರಾತ್ರಿ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಳಲಿಕೆಯಿಂದಾಗಿ (Uneasiness) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವು ರೀತಿಯ ತಪಾಸಣೆ ಮಾಡಿದ ಬಳಿಕ ಯಾವುದೇ ಅಪಾಯವಿಲ್ಲ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಕೆಲ ತಿಂಗಳ ಹಿಂದಷ್ಟೇ ಹೈದರಾಬಾದ್‌ನಲ್ಲಿ ಶೂಟಿಂಗ್‌ ಮಾಡುವಾಗ ಬಳಲಿಕೆ ಹಾಗೂ ಅವರ ಹೃದಯಬಡಿತ ಏಕಾಏಕಿ ಜಾಸ್ತಿಯಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಗಲೂ ಅಪಾಯವಿಲ್ಲ ಎಂದು ವೈದ್ಯರು ದೃಢಪಡಿಸಿದ್ದರು. “ದೀಪಿಕಾ ಪಡುಕೋಣೆ ಅವರ ಆರೋಗ್ಯದಲ್ಲಿ ಯಾವುದೇ ಏರುಪೇರಾಗಿಲ್ಲ. ನಿತ್ಯದ ತಪಾಸಣೆಗೆ ಮಾತ್ರ ಅವರು ಸೋಮವಾರ ಆಸ್ಪತ್ರೆಗೆ ತೆರಳಿದ್ದಾರೆ” ಎಂದು ನಟಿಯ ಆಪ್ತರು ತಿಳಿಸಿದ್ದಾರೆ.

ಇದನ್ನೂ ಓದಿ | ನಟಿ ದೀಪಿಕಾ ಪಡುಕೋಣೆ ಹೃದಯ ಆರೋಗ್ಯ: ಕಳವಳಕ್ಕೆ ಕಾರಣವಿಲ್ಲ

Exit mobile version