ಬೆಂಗಳೂರು : ದೀಪಿಕಾ ಪಡುಕೋಣೆ (Deepika Padukone) ಹಾಗೂ ಶಾರುಖ್ ಖಾನ್ ಕಾಂಬಿನೇಶನ್‌ನ ‘ಪಠಾಣ್’ ಸಿನಿಮಾದ ʻಬೇಷರಮ್ ರಂಗ್’ ಹಾಡಿನಲ್ಲಿ ದೀಪಿಕಾ ಕೇಸರಿ ಬಟ್ಟೆ ತೊಟ್ಟು ಕುಣಿದಿದ್ದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸಿನಿಮಾ ಬಾಯ್ಕಾಟ್ ಮಾಡಬೇಕು ಎಂಬ ಅಭಿಯಾನ ಶುರುವಾಗಿದೆ. ಇದರ ಬೆನ್ನಲ್ಲೇ ಕೆಲವರು ಅಕ್ಷಯ್ ಕುಮಾರ್ ನಟನೆಯ ಸಿನಿಮಾವೊಂದನ್ನು ಈ ಪ್ರಕರಣದಲ್ಲಿ ಎಳೆತಂದಿದ್ದಾರೆ.
ಅಕ್ಷಯ್ ಕುಮಾರ್ ಮತ್ತು ಕತ್ರೀನಾ ಕಾಂಬಿನೇಶನ್‌ನ ‘ದೆ ದನಾ ದನ್’ ಸಿನಿಮಾದಲ್ಲೂ ಕತ್ರೀನಾ ಕೇಸರಿ ಬಣ್ಣದ ಬಟ್ಟೆ ತೊಟ್ಟು ಸೆಕ್ಸಿಯಾಗಿ ಡಾನ್ಸ್ ಮಾಡಿದ್ದಾರೆ. ಆಗ ಮೌನ ವಹಿಸಿದವರು ಈಗೇಕೆ ಕೂಗಾಡುತ್ತಿದ್ದಾರೆ ಎಂದು ಹಲವರು ಕಮೆಂಟ್ ಮಾಡಿದ್ದಾರೆ.
ಪಠಾಣ್ ಸಿನಿಮಾದ ʻಬೇಷರಮ್ ರಂಗ್’ ಹಾಡಿನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ವಿವಾದ ತಾರಕಕ್ಕೇರಿದೆ. ಇದು ಬೇಕು ಎಂತಲೇ ಮಾಡಿದ ಹುನ್ನಾರ ಎಂದು ಹಿಂದುಪರ ಸಂಘಟನೆಗಳು ಆರೋಪಿಸುತ್ತಿವೆ.
ಇದನ್ನೂ ಓದಿ | Shahrukh Khan | ಶುರುವಾಯ್ತು ಬಾಯ್ಕಾಟ್ ಅಭಿಯಾನ: ʻಪಠಾಣ್ʼ ಸಿನಿಮಾ ವಿರುದ್ಧ ನೆಟ್ಟಿಗರ ಆಕ್ರೋಶ, ಏನಿದು ವಿವಾದ?
ಏನಿದು ‘ಬೇಷರಮ್ ರಂಗ್’?
‘ಬೇಷರಮ್ ರಂಗ್’ ಅಂದರೆ ಕನ್ನಡದಲ್ಲಿ ನಾಚಿಕೆ ಇಲ್ಲದ ಬಣ್ಣ ಎಂದಾಗುತ್ತದೆ. ಕೇಸರಿ ಬಣ್ಣಕ್ಕೆ ನಾಚಿಕೆ ಇಲ್ಲದ ಬಣ್ಣ ಎಂದು ಜರಿದಿದ್ದಾರೆ ಎಂದು ಹೋಲಿಕೆ ಮಾಡಿಕೊಂಡು ಹಲವರು ಗರಂ ಆಗಿದ್ದಾರೆ. ಬೇಕು ಎಂತಲೇ ಈ ರೀತಿ ಕೇಸರಿ ಬಣ್ಣಕ್ಕೆ ಅವಮಾನ ಮಾಡಲಾಗಿದೆ ಎಂದು ಕಾಮೆಂಟ್ ಕೂಡ ಮಾಡುತ್ತಿದ್ದಾರೆ. ಜನವರಿ 25, 2023ಕ್ಕೆ ಚಿತ್ರ ಬಿಡುಗಡೆಗೊಳ್ಳುತ್ತಿದೆ. ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ರಿಲೀಸ್ ಆಗುತ್ತಿರುವುದಾಗಿ ಚಿತ್ರ ತಂಡ ಹಂಚಿಕೊಂಡಿದೆ.
ಇದನ್ನೂ ಓದಿ | Deepika Padukone | ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲುಅ