Site icon Vistara News

Kannada New Movie: ಯುವನಟ ಅನೂಪ್ ರೇವಣ್ಣ ಜನುಮದಿನದಂದು ‘ಹೈಡ್ ಆ್ಯಂಡ್ ಸೀಕ್’ ಪೋಸ್ಟರ್ ಲಾಂಚ್

Dhanya Ramkumar

ಬೆಂಗಳೂರು: ʻಲಕ್ಷ್ಮಣʼ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಯುವನಟ ಅನೂಪ್ ರೇವಣ್ಣ ಜನುಮದಿನದ ಸಂಭ್ರಮದಲ್ಲಿದ್ದಾರೆ. ‘ಹೈಡ್ ಆ್ಯಂಡ್ ಸೀಕ್’ ಸಿನಿಮಾ ಮೂಲಕ ಪ್ರೇಕ್ಷಕರೆದುರು ಬರಲು ಸಜ್ಜಾಗಿದ್ದಾರೆ ಅನೂಪ್ ರೇವಣ್ಣ. ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಅನೂಪ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಈ ಸಂತಸದ ದಿನದಂದೇ ‘ಹೈಡ್ ಆ್ಯಂಡ್ ಸೀಕ್’ ಚಿತ್ರತಂಡ ಸಿನಿಮಾದ ಪೋಸ್ಟರ್ ಲಾಂಚ್ ಮಾಡಿ ಚಿತ್ರದ ನಾಯಕ ನಟನಿಗೆ ಶುಭಕೋರಿದೆ. ನಾಯಕಿಯಾಗಿ ಧನ್ಯಾ ರಾಮ್ ಕುಮಾರ್ (Dhanya Ramkumar) ನಟಿಸಿದ್ದಾರೆ.

ಪುನೀತ್ ನಾಗರಾಜು ನಿರ್ದೇಶನದಲ್ಲಿ ಮೂಡಿ ಬರುತ್ತಿದೆ ಈ ಸಿನಿಮಾ. ನಾಯಕಿಯಾಗಿ ಧನ್ಯಾ ರಾಮ್ ಕುಮಾರ್ ನಟಿಸಿದ್ದಾರೆ. ಹುಟ್ಟುಹಬ್ಬದ ದಿನವೇ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಚಿತ್ರದಲ್ಲಿ ಸ್ಪೆಶಲ್ ರೋಲ್ ನಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಸೀಕ್ರೆಟ್ ರಿವೀಲ್ ಮಾಡಿದ್ದಾರೆ. ‘ಕಬ್ಜ’ ಹಾಗೂ ‘ಹೈಡ್ ಆ್ಯಂಡ್ ಸೀಕ್’ ಎರಡೂ ಚಿತ್ರಗಳು ಸ್ಪೆಶಲ್ ಸಿನಿಮಾಗಳಾಗುತ್ತವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ ಅನೂಪ್.

ಇದನ್ನೂ ಓದಿ: Star Fashion : ಸ್ಯಾಂಡಲ್‌ವುಡ್‌ನಲ್ಲಿ ಪ್ಯಾಂಟ್‌ಸೂಟ್‌ ಟ್ರೆಂಡ್‌ ಹುಟ್ಟುಹಾಕಿದ ನಟಿ ಹರ್ಷಿಕಾ ಪೂಣಚ್ಚ

‘ಹೈಡ್ ಆ್ಯಂಡ್ ಸೀಕ್ʼ ಸಿನಿಮಾ ಚಿತ್ರೀಕರಣ ಕಂಪ್ಲೀಟ್ ಆಗಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ. ಪುನೀತ್ ನಾಗರಾಜು, ವಸಂತ್ ರಾವ್ ಎಂ.ಕುಲ್ಕರ್ಣಿ ನಿರ್ಮಾಣದಲ್ಲಿ ಈ ಚಿತ್ರ ಮೂಡಿ ಬರುತ್ತಿದೆ.

Exit mobile version