Site icon Vistara News

Kannada New Movie: ಸಿಂಪಲ್ ಸುನಿ-ವಿನಯ್ ರಾಜ್‌ಕುಮಾರ್‌ ಕಾಂಬಿನೇಶನ್‌ ಚಿತ್ರಕ್ಕೆ ಧಾರವಾಡದ ಸ್ವತಿಷ್ಠ ಕೃಷ್ಣನ್ ನಾಯಕಿ

Dharwad's Swatishtha Krishnan is the female lead for Simple Suni-Vinay Rajkumar combination.

ಬೆಂಗಳೂರು : ನಿರ್ದೇಶಕ ಸಿಂಪಲ್ ಸುನಿ, ವಿನಯ್ ರಾಜ್ ಕುಮಾರ್ ಕಾಂಬಿನೇಶನ್‌ನಲ್ಲಿ ಮೂಡಿ ಬರುತ್ತಿರುವ ನೂತನ ಚಿತ್ರಕ್ಕೆ (Kannada New Movie) ನಾಯಕಿ ಆಯ್ಕೆ ಆಗಿದ್ದಾರೆ. ಮ್ಯೂಸಿಕಲ್ ಲವ್ ಸ್ಟೋರಿ ಸಬ್ಜೆಕ್ಟ್ ಒಳಗೊಂಡ ‘ಒಂದು ಸರಳ ಪ್ರೇಮಕಥೆ’ ಚಿತ್ರದ ಮೂಲಕ ‘ವಿಕ್ರಮ್’ ಚಿತ್ರದಲ್ಲಿ ನಟಿಸಿರುವ ಸ್ವತಿಷ್ಠ ಕೃಷ್ಣನ್ (swathishta krishnan) ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ.

ವಿನಯ್ ರಾಜ್ ಕುಮಾರ್ (vinay rajkumar), ಸಿಂಪಲ್ ಸುನಿ (simple suni) ಕಾಂಬಿನೇಶನ್‌ನಲ್ಲಿ ‘ಒಂದು ಸರಳ ಪ್ರೇಮಕಥೆ’ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಧಾರವಾಡ ಮೂಲದ ಕನ್ನಡತಿ ನಟಿ ಸ್ವತಿಷ್ಠ ಕೃಷ್ಣನ್ ಅವರನ್ನು ಕನ್ನಡ ಚಿತ್ರರಂಗಕ್ಕೆ ಕರೆ ತಂದಿದ್ದಾರೆ ಸಿಂಪಲ್ ಸುನಿ . ತಮಿಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಸ್ವತಿಷ್ಠ ಕೃಷ್ಣನ್ ಅವರು ಕಮಲ್ ಹಾಸನ್ ನಟನೆಯ ‘ವಿಕ್ರಮ್’ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿಕೊಂಡಿದ್ದಾರೆ. ವಿನಯ್ ರಾಜ್ ಕುಮಾರ್ ಅವರಿಗೆ ನಾಯಕಿಯಾಗುವ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

ಇದನ್ನೂ ಓದಿ: Ashika Ranganath | ಗತವೈಭವದಲ್ಲಿ ದೇವಕನ್ಯೆಯಾಗಿ ಆಶಿಕಾ: ಜನುಮದಿನದ ಮೊದಲೇ ಭರ್ಜರಿ ಗಿಫ್ಟ್‌ ಕೊಟ್ಟ ಸುನಿ

ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಸಿಂಪಲ್ ಸುನಿ ʻʻನನಗೆ ಕನ್ನಡದ ಹುಡುಗಿಯೇ ನಾಯಕಿಯಾಗಿ ಬೇಕಿತ್ತು. ನನ್ನ ಎಲ್ಲ ಸಿನಿಮಾಗಳಲ್ಲೂ ಅದು ಮೊದಲ ಆದ್ಯತೆಯಾಗಿರುತ್ತದೆ. ವಿಕ್ರಮ್ ಸಿನಿಮಾದಲ್ಲಿ ಸ್ವತಿಷ್ಠ ಪಾತ್ರ ನೋಡಿ ಇಷ್ಟವಾಗಿತ್ತು. ಸ್ವತಿಷ್ಠ ಮೂಲತಃ ಉತ್ತರ ಕರ್ನಾಟಕದವರು. ನಮ್ಮ ಸಿನಿಮಾ ಪಾತ್ರಕ್ಕೆ ಅವರು ಸೂಕ್ತ ಎನಿಸಿತು. ಅವರು ಕೂಡ ಕಥೆ ಕೇಳಿ ಇಷ್ಟ ಪಟ್ಟು ನಮ್ಮ ಚಿತ್ರತಂಡ ಸೇರಿಕೊಂಡಿದ್ದಾರೆʼʼ ಎಂದು ಹೇಳಿದರು.

ಇದನ್ನೂ ಓದಿ: Kannada New Movie | ಅಪ್ಪು ಹುಟ್ಟಿದ ಹಬ್ಬದಂದೇ ತೆರೆಗೆ ಬರಲಿದೆ ರಿಯಲ್‌ ಸ್ಟಾರ್‌ ನಟನೆಯ ಕಬ್ಜ

ಚಿತ್ರಕ್ಕೆ ಪ್ರಸನ್ನ ಕಥೆ ಬರೆದಿದ್ದು, ಚಿತ್ರಕಥೆ, ಸಂಭಾಷಣೆ ಬರೆದು ಸಿಂಪಲ್ ಸುನಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿರುವ ಸಿಂಪಲ್ ಸುನಿ ಸದ್ಯದಲ್ಲೇ ಸಿನಿಮಾ ತಾರಾಬಳಗ ಎಲ್ಲದರ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಚಿತ್ರಕ್ಕೆ ಮೈಸೂರು ರಮೇಶ್ ಬಂಡವಾಳ ಹೂಡುತ್ತಿದ್ದು, ವೀರ್ ಸಮರ್ಥ್ ಸಂಗೀತ ನಿರ್ದೇಶನ, ಸಭಾ ಛಾಯಾಗ್ರಾಹಣ ಚಿತ್ರಕ್ಕಿದೆ.

Exit mobile version