Site icon Vistara News

Dheekshith Shetty: ʻಸಖಿಯೆʼ ಎಂದ ದೀಕ್ಷಿತ್ ಶೆಟ್ಟಿ; ʻಬ್ಲಿಂಕ್ʼ ಅಂಗಳದಿಂದ ಹೊಸ ಹಾಡು!

DHEEKSHITH SHETTY Sakhi from the film Blink

ಬೆಂಗಳೂರು: ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಬ್ಲಿಂಕ್ ಸಿನಿಮಾದ ಎರಡನೇ ಹಾಡು ರಿಲೀಸ್ ಆಗಿದೆ. ಈ ಹಿಂದೆ ಬಿಡುಗಡೆಯಾಗಿದ್ದ `ಆಗಂತುಕ’ ಹಾಡಿಗೆ ನೋಡುಗರಿಂದ ಒಳ್ಳೆ ಪ್ರತಿಕ್ರಿಯೆ ಬಂದಿತ್ತು. ಬ್ಲಿಂಕ್ (Sakhi Lyrical) ಅಂಗಳದಿಂದ ಸಖಿಯೆ (Dheekshith Shetty) ಎಂಬ ಮೆಲೋಡಿ ಹಾಡು ಅನಾವರಣಗೊಂಡಿದೆ. ಪ್ರಮೋದ್ ಮರವಂತೆ ಸಾಹಿತ್ಯದ ಗೀತೆಗೆ ಸಿದ್ದಾರ್ಥ್ ಬೆಳ್ಮಣ್ಣು ಧ್ವನಿಯಾಗಿದ್ದು, ಪ್ರಸನ್ನ ಕುಮಾರ್ ಸಂಗೀತ ಇದೆ. ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್‌ನಲ್ಲಿ ಹಾಡು ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ನಿರ್ದೇಶಕ ಶ್ರೀನಿಧಿ ಬೆಂಗಳೂರು ಮಾತನಾಡಿ, ʻʻರಂಗಭೂಮಿ ಜತೆ ಜತೆಯಲಿ ಸಿನಿಮಾ ಮಾಡಬೇಕೆಂಬ ಕನಸು ಇತ್ತು. ಕೋವಿಡ್ ಸಮಯದಲ್ಲಿ ಒಂದಿಷ್ಟು ಸಿನಿಮಾ ನೋಡ್ತಾ ನಾವು ಯಾಕೆ ಈ ರೀತಿ ಸಿನಿಮಾಗಳನ್ನು ಕನ್ನಡದಲ್ಲಿ ಮಾಡಬಾರದೆಂಬ ಯೋಚನೆ ಬಂತು. ಸ್ನೇಹಿತರು ಮತ್ತು ರಂಗಭೂಮಿ ಗೆಳೆಯರಿಂದ ಈ ಸಿನಿಮಾ ತಯಾರಾಗಿದೆ. ಸಿನಿಮಾ ಮಾಡಬೇಕೆಂಬ ಆಲೋಚನೆ ನಮ್ಮದು. ಸಿನಿಮಾ ಆಗಿದ್ದೆಲ್ಲಾ ಪ್ರಕೃತಿ ನಮಗೆ ಮಾಡಿದ ಬೆಂಬಲ ಮಾಡಿದೆʼʼ ಎಂದರು.

ನಾಯಕ ದೀಕ್ಷಿತ್ ಮಾತನಾಡಿ, ʻʻಬ್ಲಿಂಕ್ ಸಿನಿಮಾ ಯಾವುದೇ ಪರ್ಟಿಕ್ಯೂಲರ್ ಜಾನರ್‌ಗೆ ಬೀಳಲ್ಲ. ಸೈನ್ಸ್ ಫಿಕ್ಷನ್ ಸಣ್ಣ ಎಳೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಮನುಷ್ಯತ್ವ, ಮನುಷ್ಯ ಪ್ರೀತಿ ಅನ್ನೋವುದನ್ನು ಸಿನಿಮಾ ತೋರಿಸಿಕೊಡುತ್ತದೆ. ಸೈನ್ಸ್ ಫಿಕ್ಷನ್ ಎಂದರೆ ಒಂದು ಲ್ಯಾಬ್ ಅಥವಾ ಬೇರೆ ಪ್ರಪಂಚದಲ್ಲಿ ನಡೆಯುವ ಕಥೆಯಾಗಿರುತ್ತದೆ. . ನಮ್ಮಂತಹ ಮಧ್ಯಮ ವರ್ಗದ ನಡುವೆ ಸೈನ್ಸ್ ಫಿಕ್ಷನ್ ಆದರೆ ಏನೆಲ್ಲ ಕಳವಳ ಆಗಬಹುದು.. ಏನೆಲ್ಲಾ ಸನ್ನಿವೇಶ ಎದುರಿಸಬಹುದು ಎನ್ನುವುದು ಈ ಸಿನಿಮಾದ ಮುಖ್ಯಕಥೆʼʼ ಎಂದರು.

ಇದನ್ನೂ ಓದಿ: Chaitra J Achar: ಹುಟ್ಟು ಹಬ್ಬದ ಸಂಭ್ರಮದಲ್ಲಿ ‘ಬ್ಲಿಂಕ್’ ನಟಿ ಚೈತ್ರಾ ಜೆ ಆಚಾರ್: ದೇವಕಿ ಅರಸ್ ಪಾತ್ರದ ಝಲಕ್ ರಿಲೀಸ್

ನಾಯಕಿ ಮಂದಾರ ಸ್ವಪ್ನ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ʻʻಕನ್ನಡದಲ್ಲಿ ಲೂಸಿಯಾ, ಬೆಲ್ ಬಾಟಂ, ರಂಗಿತರಂಗ ಸಿನಿಮಾಗಳು ಹೇಗೆ ಕ್ರಾಂತಿ ಮಾಡಿದವೋ. ಹಾಗೆಯೇ ಈ ಚಿತ್ರವೂ ಮೈಲುಗಲ್ಲಾಗಲಿದೆ ಎಂಬ ಭರವಸೆ ಇದೆʼʼ ಎಂದರು.

ಜನನಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಮೂಡಿ ಬರುತ್ತಿರುವ ಬ್ಲಿಂಕ್ ಕನ್ನಡದಲ್ಲಿ ಒಂದು ಹೊಸ ಶೈಲಿಯ ಸಿನಿಮಾ. ವಿನೂತನ ಚಿತ್ರಕಥೆಯ ಈ ಚಿತ್ರ ಕನ್ನಡದ ಮಟ್ಟಿಗೆ ಹೊಸ ಪ್ರಯೋಗ. ಬ್ಲಿಂಕ್ ಸಿನಿಮಾಗೆ ರವಿಚಂದ್ರ ಎ ಜೆ ಬಂಡವಾಳ ಹೂಡಿದ್ದು, ಶ್ರೀನಿಧಿ ಬೆಂಗಳೂರು ಆಕ್ಷನ್ ಕಟ್ ಹೇಳಿದ್ದಾರೆ. ಇದು ಇವರ ಚೊಚ್ಚಲ ಹೆಜ್ಜೆ. ಮಿಡಲ್ ಕ್ಲಾಸ್ ಹುಡುಗನ ಜೀವನದಲ್ಲಿ ನಡೆಯುವ ಘಟನೆಗಳು ಹೇಗೆ ಆವನ ಸುತ್ತ- ಮುತ್ತಲಿನ ವಾತಾವರಣ ಬದಲಿಸುತ್ತದೆ ಎಂಬುದು ಈ ಕಥೆಯ ಸಾರಾಂಶ.

ನಾಯಕ ನಟರಾಗಿ ದಿಯಾ ಹಾಗೂ ದಸರಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅಭಿನಯಿಸಿದ್ದಾರೆ. ನಾಯಕಿಯಾರಾಗಿ ಮಂದಾರ ಬಟ್ಟಲಹಳ್ಳಿ ಹಾಗೂ ಚೈತ್ರ ಜೆ ಆಚಾರ್ ನಟಿಸುತ್ತಿದ್ದು, ವಜ್ರಧೀರ್ ಜೈನ್ , ಗೋಪಾಲ ಕೃಷ್ಣದೇಶಪಾಂಡೆ , ಕಿರಣ್ ನಾಯ್ಕ್ ಮತ್ತು ಹಲವಾರು ಕಲಾವಿದರ ತಾರಗಣವಿದೆ. ಅವಿನಾಶ ಶಾಸ್ತ್ರಿ ಛಾಯಾಗ್ರಹಣ ಮತ್ತು ಸಂಜೀವ್ ಜಾಗಿರ್ದಾರ್ ಸಂಕಲನವಿದೆ.

Exit mobile version