Dheekshith Shetty: ʻಕೆಟಿಎಂʼ ಟ್ರೈಲರ್ ರಿಲೀಸ್; ರಿಷಬ್, ರಶ್ಮಿಕಾ ಬೆಂಬಲ - Vistara News

ಸಿನಿಮಾ

Dheekshith Shetty: ʻಕೆಟಿಎಂʼ ಟ್ರೈಲರ್ ರಿಲೀಸ್; ರಿಷಬ್, ರಶ್ಮಿಕಾ ಬೆಂಬಲ

Dheekshith Shetty: ದೀಕ್ಷಿತ್ ಶೆಟ್ಟಿ ನಟನೆಯ ಬಹುನಿರೀಕ್ಷಿತ ಸಿನಿಮಾ ʻಕೆಟಿಎಂʼ, ಟೈಟಲ್‌ನಿಂದ ಗಮನಸೆಳೆಯುತ್ತಿದೆ. ಈ ಹಾಡುಗಳ ಮೂಲಕ ಮೋಡಿ ಮಾಡಿದ್ದ ಈ ಸಿನಿಮಾದ ಟ್ರೈಲರ್‌ ಅನಾವರಣಗೊಂಡಿದೆ.

VISTARANEWS.COM


on

Dheekshith Shetty Trailer Of KTM Out
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʻದಸರಾʼ ಸಿನಿಮಾ ಮೂಲಕ ನ್ಯಾಚುಲರ್ ಸ್ಟಾರ್ ನಾನಿ ಜತೆಗೂಡಿ ಧಮಾಕಾ ಎಬ್ಬಿಸಿದ್ದ ಕನ್ನಡದ ʻದಿಯಾʼ ಖ್ಯಾತಿಯ ದೀಕ್ಷಿತ್ ಶೆಟ್ಟಿ (Dheekshith Shetty) ಈಗ ಬಹುಭಾಷಾ ನಟ. ಕನ್ನಡದ ಜತೆಗೆ ತೆಲುಗು, ಮಲಯಾಳಂಗೂ ಹೆಜ್ಜೆ ಇಟ್ಟಿರುವ ದೀಕ್ಷಿತ್ ಶೆಟ್ಟಿ ನಟನೆಯ ಬಹುನಿರೀಕ್ಷಿತ ಸಿನಿಮಾ ʻಕೆಟಿಎಂʼ, ಟೈಟಲ್‌ನಿಂದ ಗಮನಸೆಳೆಯುತ್ತಿದೆ. ಈ ಹಾಡುಗಳ ಮೂಲಕ ಮೋಡಿ ಮಾಡಿದ್ದ ಈ ಸಿನಿಮಾದ ಟ್ರೈಲರ್‌ ಅನಾವರಣಗೊಂಡಿದೆ.

ʻಕೆಟಿಎಂʼ ಸಿನಿಮಾದ ಟೀಸರ್‌ವನ್ನು ಏಕಕಾಲದಲ್ಲಿ 70ಕ್ಕೂ ಹೆಚ್ಚು ಕನ್ನಡ ಸೆಲೆಬ್ರೆಟಿಗಳು ಸೋಷಿಯಲ್ ಮೀಡಿಯಾದಲ್ಲಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ರಿಷಬ್ ಶೆಟ್ಟಿ, ಡಿಂಪಲ್ ಕ್ವೀನ್ ರಚಿತಾರಾಮ್, ಮಹಾನಟಿ ಕೀರ್ತಿ ಸುರೇಶ್, ರಶ್ಮಿಕಾ ಮಂದಣ್ಣ, ಮಲಯಾಳಂ ನಟ ಶೈನ್‌, ತೆಲುಗಿನ ರಾಹುಲ್ ರವೀಂದ್ರನ್ ಸೋಷಿಯಲ್ ಮೀಡಿಯಾದಲ್ಲಿ ಟ್ರೇಲರ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.

ಒಂದು ಸುಂದರ ಪ್ರೇಮಕಥೆ. ಈ ಕಥೆಯಲ್ಲಿ ಒಬ್ಬ ನಾಯಕ. ಇಬ್ಬರು ನಾಯಕಿಯರು. ಪ್ರೀತಿಗಾಗಿ ಪರಿತಪ್ಪಿಸುವ ನಾಯಕ. ನಾಯಕನ ಜೀವನದಲ್ಲಿ ನಡೆದ ಏರಿಳಿತಗಳು ʻಕೆಟಿಎಂʼ ಟ್ರೇಲರ್ ಹೈಲೆಟ್ಸ್. ಥೇಟ್ ದಿಯಾ ಸಿನಿಮಾವನ್ನು ಮತ್ತೊಮ್ಮೆ ನೆನಪು ಮಾಡಿರುವ ಈ ಝಲಕ್ ನೋಡುಗರಿಗೆ ಕುತೂಹಲ ಹೆಚ್ಚಿಸಿದೆ. ಹಾಗಂತ ಈ ಚಿತ್ರಕ್ಕೂ ಆ ಚಿತ್ರಕ್ಕೂ ಯಾವುದೇ ಲಿಂಕ್ ಇಲ್ಲ. ದೀಕ್ಷಿತ್ ಶೆಟ್ಟಿ ಭಗ್ನಪ್ರೇಮಿಯಾಗಿ ಪ್ರೇಕ್ಷಕರನ್ನು ಆವರಿಸಿಕೊಂಡ್ರೆ, ಅವರಿಗೆ ಜೋಡಿಯಾಗಿ ಸಂಜನಾ ದಾಸ್ ಹಾಗೂ ಕಾಜಲ್ ಕುಂದರ್ ಸಾಥ್ ಕೊಟ್ಟಿದ್ದಾರೆ.

ಉಷಾ ಭಂಡಾರಿ, ಪ್ರಕಾಶ್ ತುಮ್ಮಿನಾಡು, ರಘು ರಮಣಕೊಪ್ಪ, ಶಾನಿಲ್ ಗುರು, ಬಾಬು ಹಿರಣಯ್ಯ, ದೇವ್ ದೇವಯ್ಯ, ಅಭಿಷೇಕ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ಸಂತೋಷ್ ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ.

ಇದನ್ನೂ ಓದಿ: Dheekshith Shetty: ಜನರಿಂದಲೇ ದೇಶ ಜನರಿಂದಲೇ ಸಿನಿಮಾ ಎಂದ ದೀಕ್ಷಿತ್ ಶೆಟ್ಟಿ; ʻಬ್ಲಿಂಕ್ʼ ವಿನೂತನ ಪ್ರಯತ್ನ!

ಅಥರ್ವ ಸಿನಿಮಾ ನಿರ್ದೇಶಿಸಿದ್ದ ಅರುಣ್ ‘ಕೆಟಿಎಂ’ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಎರಡನೇ ಪ್ರಯತ್ನ. ಈ ಚಿತ್ರವನ್ನು ಮಹಾಸಿಂಹ ಮೂವೀಸ್ ಬ್ಯಾನರ್ ಅಡಿ ವಿನಯ್ ನಿರ್ಮಾಣ ಮಾಡಿದ್ದು, ರಕ್ಷಯ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ನವೀನ್ ಕ್ಯಾಮೆರಾ ವರ್ಕ್, ಅರ್ಜುನ್ ಕಿಟ್ಟು ಸಂಕಲನ, ಚೇತನ್ ಸಂಗೀತ ನಿರ್ದೇಶನ, ಅಭಿನಂದನ್ ದೇಶಪ್ರಿಯ ಸಂಭಾಷಣೆ ಈ ಚಿತ್ರಕ್ಕೆ ಇದೆ. ಭರದಿಂದ ಕೆಟಿಎಂ ಸಿನಿಮಾದ ಪ್ರಚಾರ ಕಾರ್ಯ ನಡೆಯುತ್ತಿದ್ದು, ಇದೇ ತಿಂಗಳ 16ಕ್ಕೆ ರಾಜ್ಯಾದ್ಯಂತ ಸಿನಿಮಾ ತೆರೆಗೆ ಬರ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Sidhartha Mallya: ಹಸೆಮಣೆಗೇರಲು ಸಜ್ಜಾದ ದೀಪಿಕಾ ಪಡುಕೋಣೆ ಮಾಜಿ ಪ್ರೇಮಿ ಸಿದ್ಧಾರ್ಥ್‌ ಮಲ್ಯ

Sidhartha Mallya: ಇಂಗ್ಲೆಂಡ್‌ನಲ್ಲಿ ತಲೆ ಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್‌ ಮಲ್ಯ ಪುತ್ರ, ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮಾಜಿ ಪ್ರೇಮಿ ಸಿದ್ಧಾರ್ಥ್‌ ಮಲ್ಯ ಶೀಘ್ರದಲ್ಲಿಯೇ ಹಸೆಮಣೆಗೇರಲಿದ್ದಾರೆ. ತಮ್ಮ ಬಹುಕಾಲದ ಗೆಳತಿ ಜಾಸ್ಮಿನ್ ಜತೆಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಅವರು ಸಜ್ಜಾಗಿದ್ದು, ಈ ವಾರ ಮದುವೆ ನೆರವೇರಲಿದೆ. ಲಂಡನ್‌ನಲ್ಲಿ ಆಪ್ತರ ಸಮ್ಮುಖದಲ್ಲಿ ವಿವಾಹ ಆಯೋಜಿಸಲಾಗಿದ್ದು, ಈಗಾಗಲೇ ಸಿದ್ಧತೆ ಆರಂಭವಾಗಿದೆ.

VISTARANEWS.COM


on

Sidhartha Mallya
Koo

ಲಂಡನ್‌: ಇಂಗ್ಲೆಂಡ್‌ನಲ್ಲಿ ತಲೆ ಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್‌ ಮಲ್ಯ ಪುತ್ರ ಸಿದ್ಧಾರ್ಥ್‌ ಮಲ್ಯ (Sidhartha Mallya) ಶೀಘ್ರದಲ್ಲಿಯೇ ಹಸೆಮಣೆಗೇರಲಿದ್ದಾರೆ. ತಮ್ಮ ಬಹುಕಾಲದ ಗೆಳತಿ ಜಾಸ್ಮಿನ್ ಜತೆಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಅವರು ಸಜ್ಜಾಗಿದ್ದು, ಈ ವಾರ ಮದುವೆ ನೆರವೇರಲಿದೆ. ಲಂಡನ್‌ನಲ್ಲಿ ಆಪ್ತರ ಸಮ್ಮುಖದಲ್ಲಿ ವಿವಾಹ ಆಯೋಜಿಸಲಾಗಿದ್ದು, ಈಗಾಗಲೇ ಸಿದ್ಧತೆ ಆರಂಭವಾಗಿದೆ. ಸಿದ್ಧಾರ್ಥ್‌ ಮಲ್ಯ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಜಾಸ್ಮಿನ್ ಜತೆಗಿರುವ ಫೋಟೊ ಪೋಸ್ಟ್‌ ಮಾಡಿದ್ದಾರೆ.

ʼʼಮದುವೆಯ ಖುಷಿಯ ಕ್ಷಣ ಆರಂಭವಾಯಿತುʼʼ ಎಂದು ಬರೆದುಕೊಂಡು ಫೋಟೊ ಹಂಚಿಕೊಂಡಿದ್ದಾರೆ. ಸಿದ್ಧಾರ್ಥ್‌ ಬಿಳಿ ಟಕ್ಸೆಡೋ ಮತ್ತು ಗುಲಾಬಿ ಪ್ಯಾಂಟ್‌ನಲ್ಲಿ ಕಾಣಿಸಿಕೊಂಡರೆ, ಜಾಸ್ಮಿನ್ ತಿಳಿ ಹಸಿರು ಬಣ್ಣದ ಉಡುಪು ಧರಿಸಿ ನಗುತ್ತಾ ಪೋಸ್‌ ನೀಡಿದ್ದಾರೆ. ಸದ್ಯ ಈ ಜೋಡಿಗೆ ಸೋಷಿಯಲ್‌ ಮೀಡಿಯಾದಲ್ಲಿ ಶುಭಾಶಯಗಳ ಸುರಿಮಳೆಯೇ ಆಗುತ್ತಿದ್ದು, ಸೆಲೆಬ್ರಿಟಿಗಳು, ಅಭಿಮಾನಿಗಳು ಹಾರೈಸಿದ್ದಾರೆ.

ವರ್ಷದ ಹಿಂದೆಯೇ ಪ್ರಪೋಸ್‌

ಬಹುಕಾಲದ ಗೆಳತಿ ಜಾಸ್ಮಿನ್‌ಗೆ 2023ರ ಆರಂಭದಲ್ಲಿ ಸಿದ್ಧಾರ್ಥ್ ಪ್ರಪೋಸ್ ಮಾಡಿದ್ದರು. ಕ್ಯಾಲಿಫೋರ್ನಿಯಾದಲ್ಲಿನ ಹ್ಯಾಲೋವಿನ್ ಪಾರ್ಟಿಯಲ್ಲಿ ಸಿದ್ದಾರ್ಥ್ ಹಾಗೂ ಜಾಸ್ಮಿನ್ ಇಬ್ಬರು ಜತೆಯಾಗಿ ಪಾಲ್ಗೊಂಡಿದ್ದರು. ಈ ವೇಳೆ ಸಿದ್ದಾರ್ಥ್ ತಮ್ಮ ಪ್ರೀತಿಯನ್ನು ಹೇಳಿಕೊಂಡಿದ್ದರು. ಇದಕ್ಕೆ ಜಾಸ್ಮಿನ್ ಗ್ರೀನ್ ಸಿಗ್ನಲ್ ನೀಡಿದ್ದರು. ಬಳಿಕ ಈ ಜೋಡಿ ಕಳೆದ ವರ್ಷವೇ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಮದುವೆ ದಿನಾಂಕ ಶೀಘ್ರ ಬಹಿರಂಗಪಡಿಸುವುದಾಗಿ ಸಿದ್ಧಾರ್ಥ್‌ ತಿಳಿಸಿದ್ದರು.

ದೀಪಿಕಾ ಜತೆ ಪ್ರೀತಿಯಲ್ಲಿ ಬಿದ್ದಿದ್ದ ಸಿದ್ಧಾರ್ಥ್‌

ಕೆಲವು ವರ್ಷಗಳ ಹಿಂದೆ ಬಾಲಿವುಡ್‌ ಬೆಡಗಿ, ಕನ್ನಡತಿ ದೀಪಿಕಾ ಪಡುಕೋಣೆ ಮತ್ತು ಸಿದ್ಧಾರ್ಥ್‌ ಮಲ್ಯ ಡೇಟಿಂಗ್‌ ನಡೆಸುತ್ತಿದ್ದರು. ಇವರು ಐಪಿಎಲ್‌ ಪಂದ್ಯಗಳಿಗೆ ಜತೆಯಾಗಿ ತೆರಳುತ್ತಿದ್ದರು. ಒಂದೊಮ್ಮೆ ಇಬ್ಬರು ಪಂದ್ಯ ವೀಕ್ಷಿಸುತ್ತಿರುವಾಗಲೇ ಪರಸ್ಪರ ಚುಂಬಿಸಿ ಸದ್ದು ಮಾಡಿದ್ದರು. ಆರಂಭದಲ್ಲಿ ದೀಪಿಕಾ ಕಿಂಗ್‌ ಫಿಷರ್‌ ಕ್ಯಾಲಂಡರ್‌ಗೆ ಮಾಡೆಲ್‌ ಆಗಿದ್ದರು. ಆ ವೇಳೆ ಸಿದ್ಧಾರ್ಥ್‌ನ ಪರಿಚಯವಾಗಿತ್ತು. ಬಳಿಕ ಇಬ್ಬರು ಜತೆಗೆ ಹಲವು ಕಡೆ ಸುತ್ತಾಡುತ್ತಾ ಗಾಸಿಪ್‌ಗೆ ಆಹಾರವಾಗಿದ್ದರು. ಅದಾಗ್ಯೂ ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಬಾಯ್ಬಿಟ್ಟಿರಲಿಲ್ಲ.

ಬಳಿಕ ಕಾರಣಾಂತರಗಳಿಂದ ಈ ಜೋಡಿ ಬೇರ್ಪಟ್ಟಿತ್ತು. ದೀಪಿಕಾ ಬಾಲಿವುಡ್‌ನಲ್ಲಿ ಗಟ್ಟಿಯಾಗಿ ನೆಲೆಯೂರಿದ್ದರು. ಬಳಿಕ ರಣವೀರ್‌ ಸಿಂಗ್‌ ಜತೆ ಸಪ್ತಪದಿ ತುಳಿದರು. ಇತ್ತ ಸಿದ್ಧಾರ್ಥ್‌ ತಂದೆ ಜತೆಗೆ ಲಂಡನ್‌ಗೆ ಹಾರಿ ಅಲ್ಲೇ ನೆಲೆಸಿದರು. ಬ್ರೇಕಪ್‌ ಆದ ಆರಂಭದಲ್ಲಿ ಸಿದ್ಧಾರ್ಥ್‌ ಸನ್ಯಾಸತ್ವ ಸ್ವೀಕರಿಸುತ್ತಾರೆ ಎಂಬೆಲ್ಲ ಸುದ್ದಿ ಹರಡಿದ್ದವು. ಲಂಡನ್‌ಗೆ ಪರಾರಿಯಾದ ಬಳಿಕ ಸಿದ್ದಾರ್ಥ್ ಮತ್ತು ಜಾಸ್ಮಿನ್ ಆತ್ಮೀಯರಾಗಿದ್ದರು.

ಇದನ್ನೂ ಓದಿ: Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿ ಜನಿಸಿದ ಸಿದ್ಧಾರ್ಥ್‌ ಮಲ್ಯ ಲಂಡನ್‌ನಲ್ಲಿ ಶಿಕ್ಷಣ ಪೂರೈಸಿದರು. ಪದವಿ ಪಡೆದ ನಂತರ ಅವರು ಮಾಡೆಲ್‌ ಮತ್ತು ನಟನಾಗಿ ವೃತ್ತಿ ಜೀವನ ಆರಂಭಿಸಿದರು. ಬ್ರಾಹ್ಮಣ ನಮನ್ (Brahman Naman), ಬೆಸ್ಟ್‌ ಫೇಕ್‌ ಫ್ರೆಂಡ್ಸ್‌ (Best Fake Friends) ಮುಂತಾದ ಚಿತ್ರಗಳಲ್ಲಿ ನಟಿಸಿದರು. ಬಳಿಕ ಅಭಿನಯದಿಂದ ದೂರ ಸರಿದಿದ್ದರು.

Continue Reading

ಬಾಲಿವುಡ್

Sonakshi Sinha: ಮುಸ್ಲಿಂ ಹುಡುಗನ ಜತೆ ಮಗಳು ಸೋನಾಕ್ಷಿ ಮದುವೆ; ಶತ್ರುಘ್ನ ಸಿನ್ಹಾ ಮುನಿಸು?

Sonakshi Sinha: ಶತ್ರುಘ್ನ ತಮ್ಮ ಮಗಳೊಂದಿಗೆ ಅಸಮಾಧಾನ ಹೊಂದಿದ್ದಾರೆ. ಆದರೆ ಈ ಮುನಿಸು ಹೆಚ್ಚು ಕಾಲ ಉಳಿಯುವುದಿಲ್ಲ. ಶತ್ರುಘ್ನ ಕೂಡ ಮದುವೆ (Sonakshi Sinha’s Wedding) ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸೋನಾಕ್ಷಿ ಅವರ ಮಾವ ಪಹ್ಲಾಜ್ ನಿಹಲಾನಿ ತಿಳಿಸಿದ್ದಾರೆ.

VISTARANEWS.COM


on

By

Sonakshi Sinha
Koo

ಮುಂಬಯಿ: ಬಾಲಿವುಡ್ ನಟಿ (bollywood actress) ಸೋನಾಕ್ಷಿ ಸಿನ್ಹಾ (Sonakshi Sinha) ಮುಸ್ಲಿಂ ಹುಡುಗನ ಜತೆ ಮದುವೆ ಆಗುತ್ತಿರುವ ಬಗ್ಗೆ (Sonakshi Sinha’s Wedding) ಮತ್ತು ತಮ್ಮ ಮದುವೆ ಬಗ್ಗೆ ಮೊದಲೇ ತಿಳಿಸದಿದ್ದಕ್ಕಾಗಿ ತಂದೆ ಶತ್ರುಘ್ನ ಸಿನ್ಹಾ (Shatrughan Sinha) ಅವರು ಅಸಮಾಧಾನಗೊಂಡಿದ್ದಾರೆ ಎಂದು ಸೋನಾಕ್ಷಿ ಅವರ ಮಾವ ಪಹ್ಲಾಜ್ ನಿಹಲಾನಿ (Pahlaj Nihalani) ಖಚಿತಪಡಿಸಿದ್ದಾರೆ.

ಕಳೆದ ವಾರವಷ್ಟೇ ಸೋನಾಕ್ಷಿ ಅವರು ತಮ್ಮ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಅವರನ್ನು ವರಿಸುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿದ್ದು, ಬಳಿಕ ಇದನ್ನು ಮದುವೆಯ ಆಮಂತ್ರಣವು ದೃಢಪಡಿಸಿತು. ಸೋನಾಕ್ಷಿ ಏಳು ವರ್ಷಗಳಿಂದ ಜಹೀರ್ ಜೊತೆ ಡೇಟಿಂಗ್ ನಡೆಸುತ್ತಿದ್ದಾರೆ. ಮದುವೆಯ ವದಂತಿಗಳಿಗೆ ಮೊದಲ ಪ್ರತಿಕ್ರಿಯೆ ನೀಡಿದ ಶತ್ರುಘ್ನ ಅವರು ಮದುವೆಯ ಬಗ್ಗೆ ತಿಳಿದಿರಲಿಲ್ಲ ಎಂದು ಒಪ್ಪಿಕೊಂಡರು. ಮಾತ್ರವಲ್ಲದೇ ಅವರು ಇದರಿಂದ ಅಸಮಾಧಾನಗೊಂಡಿರುವುದು ಅವರ ಹೇಳಿಕೆಯಿಂದ ತಿಳಿದು ಬಂದಿತ್ತು.

ಈ ಬಗ್ಗೆ ಪಹ್ಲಾಜ್ ನಿಹಲಾನಿ ಅವರು ಪ್ರತಿಕ್ರಿಯೆ ನೀಡಿದ್ದು, ಶತ್ರುಘ್ನ ತಮ್ಮ ಮಗಳೊಂದಿಗೆ ಅಸಮಾಧಾನ ಹೊಂದಿದ್ದಾರೆ. ಆದರೆ ಅದು ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಅವರು ಖಚಿತಪಡಿಸಿದರು. ಶತ್ರುಘ್ನ ಕೂಡ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.


ಸೋನಾಕ್ಷಿ ಅವರ ಮುದ್ದಿನ ಮಗಳು. ಅವರು ಮದುವೆಗೆ ಬಾರದೇ ಇರಲು ಸಾಧ್ಯವೇ ಇಲ್ಲ. ಶತ್ರುಜಿ ಅವರು “”ಈಗಿನ ಮಕ್ಕಳು ಪೋಷಕರ ಅನುಮತಿ ಪಡೆಯದೇ ಮದುವೆಯಾಗುತ್ತಾರೆ. ಸೋನಾಕ್ಷಿ ತನ್ನ ಇಷ್ಟದ ಹುಡುಗನನ್ನು ಮದುವೆಯಾಗುವುದಾದರೆ ನಾನೇಕೆ ಅಸಮಾಧಾನಗೊಳ್ಳಬೇಕುʼʼ ಎಂದು ಹೇಳಿರುವುದಾಗಿ ತಿಳಿಸಿದ್ದಾರೆ.

ನಲವತ್ತು ವರ್ಷಗಳ ಹಿಂದೆ ತಮಗೆ ಇಷ್ಟವಾದ ಹುಡುಗಿಯನ್ನು ಮದುವೆಯಾಗಿದ್ದಾರೆ. ನಾನು ನನ್ನ ಹೆಂಡತಿಯನ್ನು ಮದುವೆಯಾದಾಗ ನಾನು ನನ್ನ ಜೀವನ ಸಂಗಾತಿಯನ್ನು ಆರಿಸಿಕೊಂಡೆ. ಒಬ್ಬನು ತನ್ನ ಮಕ್ಕಳಿಂದ ಅವಾಸ್ತವಿಕ ನಿರೀಕ್ಷೆಗಳನ್ನು ಹೊಂದಿರಬಾರದು ಎಂದು ಶತ್ರುಘ್ನ ಸಿನ್ಹಾ ಇತ್ತೀಚೆಗೆ ಹೇಳಿದ್ದರು.

ಶತ್ರುಘ್ನ ಅವರ ಆರಂಭಿಕ ಪ್ರತಿಕ್ರಿಯೆಯನ್ನು ಸಮರ್ಥಿಸಿಕೊಂಡ ಪಹ್ಲಾಜ್, ಚುನಾವಣೆಯಿಂದಾಗಿ ಅವರು ಸುಮಾರು ಮೂರು ತಿಂಗಳ ಕಾಲ ಮುಂಬಯಿನಿಂದ ಹೊರಗಿದ್ದರು. ಶತ್ರುಘ್ನ ಅವರ ಪತ್ನಿಗೆ ಈ ವಿಷಯ ಗೊತ್ತಿರಬೇಕು. ಶತ್ರುಘ್ನ ಅವರು ಹಿಂದಿರುಗಿದ ಅನಂತರ ಅವರಿಗೆ ಈ ಬಗ್ಗೆ ಹೇಳಲು ನಿರ್ಧರಿಸಿರಬೇಕು. ಈಗ ಅವರು ಮುಂಬಯಿಗೆ ಮರಳಿದ್ದಾರೆ ಮತ್ತು ಸೋನಾಕ್ಷಿ ಮತ್ತು ಅವರ ಕುಟುಂಬದ ನಡುವೆ ಎಲ್ಲವೂ ಚೆನ್ನಾಗಿದೆ ಎಂದು ತಿಳಿಸಿದರು.


ಶತ್ರುಘ್ನ ಹೇಳಿದ್ದೇನು?

ಸೋನಾಕ್ಷಿ ವಿವಾಹದ ಕುರಿತು ಮಾತನಾಡಿದ್ದ ಶತ್ರುಘ್ನ ಅವರು, ನನಗೆ ಸೋನಾಕ್ಷಿ ಮದುವೆ ಬಗ್ಗೆ ಯಾಕೆ ತಿಳಿದಿಲ್ಲ ಎಂದು ನನ್ನ ಹತ್ತಿರದ ಜನರು ನನ್ನನ್ನು ಕೇಳುತ್ತಿದ್ದಾರೆ. ನಾನು ಹೇಳುವುದು ಇಷ್ಟೇ, ಅವರು ಇವತ್ತಿನ ಮಕ್ಕಳು ತಂದೆ ತಾಯಿಯ ಅನುಮತಿ ಕೇಳುವುದಿಲ್ಲ. ಕೇವಲ ಮಾಹಿತಿ ನೀಡುತ್ತಾರೆ. ನಾವು ಆ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದಿದ್ದರು.

ಅವರ ಈ ಹೇಳಿಕೆ ಬಳಿಕ ಮದುವೆಯ ವದಂತಿಗಳನ್ನು ಅವರು ದೃಢೀಕರಿಸದೇ ಇದ್ದರೂ, ಸೋನಾಕ್ಷಿಗೆ ತಮ್ಮ ಜೀವನದ ಮಹತ್ವದ ದಿನಕ್ಕಾಗಿ ಎಲ್ಲಾ ಆಶೀರ್ವಾದಗಳನ್ನು ನೀಡುತ್ತಿದ್ದೇನೆ ಎಂದು ಹೇಳಿದ್ದರು.

ನನ್ನ ಮಗಳು ಮದುವೆಯಾದರೆ ನಾನು ಅವಳಿಗೆ ನನ್ನ ಆಶೀರ್ವಾದವನ್ನು ನೀಡುತ್ತೇನೆ. ಅವಳ ನಿರ್ಧಾರ ಮತ್ತು ಆಯ್ಕೆಯನ್ನು ಬೆಂಬಲಿಸುತ್ತೇನೆ. ಸೋನಾಕ್ಷಿಗೆ ತನ್ನ ಒಡನಾಡಿಯನ್ನು ಆಯ್ಕೆ ಮಾಡುವ ಹಕ್ಕಿದೆ ಮತ್ತು ಅವಳ ಮದುವೆಯ ದಿನದಂದು ನಾನು ಅತ್ಯಂತ ಸಂತೋಷದ ತಂದೆಯಾಗುತ್ತೇನೆ. ನಾನು ಯಾವಾಗಲೂ ಅವಳಿಗೆ ಶುಭ ಹಾರೈಸುತ್ತೇನೆ ಎಂದು ಶತ್ರುಘ್ನ ಹೇಳಿದರು. ಮುಂಬಯಿನಲ್ಲಿ ಆತ್ಮೀಯರ ಸಮ್ಮುಖದಲ್ಲಿ ಜೂನ್ 23ರಂದು ಸೋನಾಕ್ಷಿ ಮತ್ತು ಜಹೀರ್ ವಿವಾಹವಾಗಲಿದ್ದಾರೆ.

Continue Reading

ಕರ್ನಾಟಕ

Actor Chikkanna: ದರ್ಶನ್‌ ಊಟಕ್ಕೆ ಕರೆದಿದ್ರು, ಹೋಗಿದ್ದೆ; ಪೊಲೀಸ್‌ ವಿಚಾರಣೆ ಬಳಿಕ ಚಿಕ್ಕಣ್ಣ ಫಸ್ಟ್‌ ರಿಯಾಕ್ಷನ್!

Actor Chikkanna: Actor Chikkanna: ರೇಣುಕಾಸ್ವಾಮಿ ಕೊಲೆಯಾದ ದಿನವೇ ಅಂದರೆ, ಜೂನ್‌ 8ರಂದು ನಟ ದರ್ಶನ್‌ ಜತೆ ಪಾರ್ಟಿ ಮಾಡಿರುವುದು ನಿಜ ಎಂಬುದಾಗಿ ನಟ ಚಿಕ್ಕಣ್ಣ ಒಪ್ಪಿಕೊಂಡಿದ್ದಾರೆ. ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಮಹಜರು ಮಾಡುವ ವೇಳೆ ಪಬ್‌ಗೆ ತೆರಳಿದ ಚಿಕ್ಕಣ್ಣ, ಪಾರ್ಟಿಯ ಕುರಿತು ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೂ ತೆರಳಿ, ಸುಮಾರು ಮೂರು ತಾಸು ವಿಚಾರಣೆ ಎದುರಿಸಿದ್ದಾರೆ.

VISTARANEWS.COM


on

actor darshan Actor Chikkanna
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ನಟ ಚಿಕ್ಕಣ್ಣ (Actor Chikkanna) ಅವರನ್ನೂ ಕಾಮಾಕ್ಷಿಪಾಳ್ಯ ಪೊಲೀಸರು ವಿಚಾರಣೆ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದ ದಿನವಾದ ಜೂನ್‌ 8ರಂದೇ ಕೊಲೆ ಆರೋಪಿ ನಟ ದರ್ಶನ್‌ (Actor Darshan) ಜತೆಗೆ ಚಿಕ್ಕಣ್ಣ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್‌ ನೀಡಿದ್ದು, ಅದರಂತೆ ಚಿಕ್ಕಣ್ಣ ಅವರು ವಿಚಾರಣೆಗೆ ಹಾಜರಾದರು. ಸುಮಾರು ಮೂರು ತಾಸಿನ ವಿಚಾರಣೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಚಿಕ್ಕಣ್ಣ, “ದರ್ಶನ್‌ ಅವರು ಜೂನ್‌ 8ರಂದು ಊಟಕ್ಕೆ ಕರೆದಿದ್ರು, ಹೋಗಿದ್ದೆ” ಎಂದಷ್ಟೇ ತಿಳಿಸಿದ್ದಾರೆ.

“ಸಾಮಾನ್ಯವಾಗಿ ದರ್ಶನ್‌ ಅವರು ನನ್ನನ್ನು ಊಟಕ್ಕೆ ಕರೆಯುತ್ತಾರೆ. ಅದರಂತೆ, ಜೂನ್‌ 8ರಂದು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಊಟಕ್ಕೆ ಹೋಗಿದ್ದೆ. ಊಟ ಮುಗಿಸಿಕೊಂಡು ನಾನು ಅಲ್ಲಿಂದ ತೆರಳಿದೆ. ಅದಕ್ಕೆ ಸಂಬಂಧಿಸಿದಂತೆ ಪೊಲೀಸರು ಕರೆದಿದ್ದರು” ಎಂಬುದಾಗಿ ಚಿಕ್ಕಣ್ಣ ಮೊದಲ ಪ್ರತಿಕ್ರಿಯೆ ನೀಡಿದರು. “ದರ್ಶನ್‌ ಜತೆ ಊಟಕ್ಕೆ ಹೋದಾಗ ಯಾರ‍್ಯಾರು ಇದ್ದರು” ಎಂದು ಮಾಧ್ಯಮದವರು ಕೇಳಿದ್ದಕ್ಕೆ, “ಪ್ರಕರಣವು ವಿಚಾರಣೆ ಹಂತದಲ್ಲಿದೆ. ನಾನು ಇದುವರೆಗೆ ವಿಚಾರಣೆಗೆ ಸಹಕರಿಸಿದ್ದೇನೆ. ಇದಕ್ಕಿಂತ ಹೆಚ್ಚೇನೂ ಹೇಳಲು ಆಗುವುದಿಲ್ಲ” ಎಂಬುದಾಗಿ ಪ್ರತಿಕ್ರಿಯಿಸಿದರು.

ರೇಣುಕಾಸ್ವಾಮಿ ಕೊಲೆಗೀಡಾದ ದಿನವೇ ಸ್ಟೋನಿ ಬ್ರೂಕ್‌ನಲ್ಲಿ ದರ್ಶನ್‌ ಸೇರಿ ಹಲವರು ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಣ್ಣ ಅವರೂ ಸ್ಥಳ ಮಹಜರಿನ ವೇಳೆ ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಭೇಟಿ ನೀಡಿದ್ದಾರೆ. ಅಲ್ಲಿಯೇ, ದರ್ಶನ್‌ ಜತೆ ಪಾರ್ಟಿ ಮಾಡಿರುವುದನ್ನು ಚಿಕ್ಕಣ್ಣ ಪೊಲೀಸರ ಎದುರು ಒಪ್ಪಿಕೊಂಡಿದ್ದಾರೆ.

“ಜೂನ್‌ 8ರಂದು ಆರ್‌ ಆರ್‌ ನಗರದ ಸ್ಟೋನಿ ಬ್ರೂಕ್‌ ಪಬ್‌ಗೆ ಹೋಗಿದ್ದೆ. ಮಧ್ಯಾಹ್ನ 1.30ರ ಸುಮಾರಿಗೆ ಪಬ್‌ಗೆ ಹೋಗಿದ್ದೆ. ದರ್ಶನ್‌ ಹಾಗೂ ನಾನು ಒಂದೇ ಟೇಬಲ್‌ನಲ್ಲಿ ಪಾರ್ಟಿ ಮಾಡಿದ್ವಿ. ಸಂಜೆ 4.30ರ ಸುಮಾರಿಗೆ ದರ್ಶನ್‌ ಅವರು ಪಬ್‌ನಿಂದ ಹೊರಟರು. ಅವರ ಜತೆ ನಾನೂ ಅಲ್ಲಿಂದ ಹೊರಟೆ. ನಾನು ನಮ್ಮ ಮನೆಗೆ ಹೋದೆ, ದರ್ಶನ್‌ ಅವರು ಎಲ್ಲಿಗೆ ಹೋದರೋ ಗೊತ್ತಿಲ್ಲ. ನಾವು ಸಿನಿಮಾ ವಿಚಾರಕ್ಕಾಗಿ ಭೇಟಿ ಮಾಡಿದ್ವಿ. ಅದಷ್ಟೇ ಮಾತನಾಡಿ ನಾವು ಹೊರಟು ಹೋದೆವು” ಎಂಬುದಾಗಿ ಪೊಲೀಸರಿಗೆ ಚಿಕ್ಕಣ್ಣ ಮಾಹಿತಿ ನೀಡಿದ್ದಾರೆ.

ನಟ ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡ ಹೋದ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಇದಾದ ನಂತರ ಚಿಕ್ಕಣ್ಣ ಅವರು ಕೂಡ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ತೆರಳಿ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೆ ಹೋದ ವಿಡಿಯೊ ಕೂಡ ಲಭ್ಯವಾಗಿದೆ. ಪಾರ್ಟಿ ಹಿನ್ನೆಲೆಯಲ್ಲಿ ನಟ ಚಿಕ್ಕಣ್ಣ ಅವರಿಗೆ ಇದಕ್ಕೂ ಮೊದಲು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ನೋಟಿಸ್‌ ನೀಡಿದ್ದರು. ಇದು ಚಿಕ್ಕಣ್ಣ ಅವರಿಗೂ ಆತಂಕ ತಂದಿತ್ತು ಎನ್ನಲಾಗಿದೆ.

ಇದನ್ನೂ ಓದಿ: Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

Continue Reading

ಕರ್ನಾಟಕ

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Kalki 2898 AD: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ಬಿಡುಗಡೆಯ ಬಳಿಕ ಇದೀಗ ಇದೇ ಚಿತ್ರದ ಭೈರವ ಆಂಥಮ್‌ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಹಾಡು ರಿಲೀಸ್‌ ಆಗಿದೆ. ನಟ ಪ್ರಭಾಸ್‌ ನಟಿಸಿರುವ ಈ ಚಿತ್ರದ ಹಾಡಿಗೆ ಮೊದಲ ಸಲ ಪಂಜಾಬಿ ಗಾಯಕ ದಿಲ್ಜಿತ್‌ ದೋಸಾಂಜ್‌ ಧ್ವನಿ ನೀಡಿದ್ದಾರೆ. ಸಂತೋಷ್‌ ನಾರಾಯಣನ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ.

VISTARANEWS.COM


on

Kalki 2898 AD Movie Bhairava Anthem Released
Koo

ಬೆಂಗಳೂರು: ಪ್ರಭಾಸ್‌, ಅಮಿತಾಭ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ನಟಿಸಿರುವ ‘ಕಲ್ಕಿ 2898 AD’ ಚಿತ್ರದ ಟ್ರೈಲರ್ ಬಿಡುಗಡೆಯ ಬಳಿಕ ಇದೀಗ ಇದೇ ಚಿತ್ರದ ಭೈರವ ಆಂಥಮ್‌ ಬಿಡುಗಡೆಯಾಗಿದೆ. ವೈಜಯಂತಿ ಮೂವೀಸ್‌ ಯೂಟ್ಯೂಬ್‌ ಚಾನಲ್‌ನಲ್ಲಿ ಹಾಡು ರಿಲೀಸ್‌ ಆಗಿದೆ. ನಟ ಪ್ರಭಾಸ್‌ ನಟಿಸಿರುವ ಈ ಚಿತ್ರದ ಹಾಡಿಗೆ ಮೊದಲ ಸಲ ಪಂಜಾಬಿ ಗಾಯಕ ದಿಲ್ಜಿತ್‌ ದೋಸಾಂಜ್‌ ಧ್ವನಿ ನೀಡಿದ್ದಾರೆ. ಸಂತೋಷ್‌ ನಾರಾಯಣನ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ.

ಪಕ್ಕಾ ಮಾಸ್‌ ಅವತಾರದಲ್ಲಿ ನಟ ಪ್ರಭಾಸ್‌ ಈ ಹಾಡಿನಲ್ಲಿ ಎದುರಾಗಿದ್ದಾರೆ. ತಲೆಗೆ ಟರ್ಬನ್‌ ಧರಿಸಿ ಮತ್ತು ಪಂಚೆಯಲ್ಲಿ ಮಿಂಚಿದ್ದಾರೆ. ಈಗಾಗಲೇ ಟ್ರೇಲರ್‌ ಮೂಲಕ ಎಲ್ಲರ ಗಮನ ಸೆಳೆದ ಈ ಸಿನಿಮಾ, ಇದೀಗ ಭೈರವ ಆಂಥಮ್‌ ಮೂಲಕ ಕಿಕ್‌ ಹೆಚ್ಚಿಸುತ್ತಿದೆ. ತೆಲುಗು ಮಾತ್ರವಲ್ಲದೆ ಹಿಂದಿ, ತಮಿಳು, ಮಲಯಾಳಂ, ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ಬಹು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 AD’ ಚಿತ್ರದಲ್ಲಿ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ಪ್ರಭಾಸ್,‍ ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ಅಶ್ವಿನಿ ದತ್‍ ನಿರ್ಮಿಸಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ. ‘ಕಲ್ಕಿ 2898 AD’ ಚಿತ್ರವು ಜಗತ್ತಿನಾದ್ಯಂತ ಜೂನ್‍ 27ರಂದು ಬಿಡುಗಡೆ ಆಗಲಿದೆ.

Continue Reading
Advertisement
Viral News
Latest4 mins ago

Viral News: 20 ತಿಂಗಳ ಮಗುವಿಗೆ ಸಿಗರೇಟ್ ಸೇದಿಸಲು, ಮದ್ಯ ಕುಡಿಸಲು ಯತ್ನಿಸಿದ ತಾಯಿ!

Drowned in water
ಯಾದಗಿರಿ19 mins ago

Drowned in Water : ಯಾದಗಿರಿಯಲ್ಲಿ ತೆರೆದ ಗುಂಡಿಗೆ ಬಾಲಕ ಬಲಿ; ಬಳ್ಳಾರಿಯಲ್ಲಿ ಕೃಷಿ ಹೊಂಡಕ್ಕೆ ಬಿದ್ದವನು ಮೃತ್ಯು

WI vs AFG
ಕ್ರೀಡೆ19 mins ago

WI vs AFG: ಒಂದೇ ಓವರ್​ನಲ್ಲಿ 36 ರನ್​ ಗಳಿಸಿ ಯುವರಾಜ್​ ಸಿಂಗ್​ ದಾಖಲೆ ಸರಿಗಟ್ಟಿದ ನಿಕೋಲಸ್​ ಪೂರನ್​

NEET UG 2024
Latest42 mins ago

NEET UG 2024: ಮಗಳ ಜೊತೆ ಸೇರಿ ನೀಟ್ ಯುಜಿ ಪರೀಕ್ಷೆ ಬರೆದು ಪಾಸಾದ ಅಪ್ಪ!

Sidhartha Mallya
ಸಿನಿಮಾ47 mins ago

Sidhartha Mallya: ಹಸೆಮಣೆಗೇರಲು ಸಜ್ಜಾದ ದೀಪಿಕಾ ಪಡುಕೋಣೆ ಮಾಜಿ ಪ್ರೇಮಿ ಸಿದ್ಧಾರ್ಥ್‌ ಮಲ್ಯ

murder case
ಕ್ರೈಂ1 hour ago

Murder case : ರಸ್ತೆಯಲ್ಲಿ ಅಡ್ಡಗಟ್ಟಿ ಚಿಕ್ಕಮ್ಮನನ್ನು ಹೊಡೆದು ಕೊಂದ ದುಷ್ಟ

How Much Salt Is Too Much
ಆರೋಗ್ಯ1 hour ago

How Much Salt Is Too Much: ಉಪ್ಪು ಅತಿಯಾಗದಿರಲಿ; ದಿನಕ್ಕೆ ನಾವೆಷ್ಟು ಉಪ್ಪು ತಿನ್ನುತ್ತಿದ್ದೇವೆ ಗೊತ್ತಿರಲಿ

T20 World Cup 2024
ಕ್ರೀಡೆ1 hour ago

T20 World Cup 2024: ಸೂಪರ್​-8 ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ಆಘಾತ; ಅಭ್ಯಾಸದ ವೇಳೆ ಸ್ಟಾರ್​ ಆಟಗಾರನಿಗೆ ಗಾಯ

Narendra Modi
ದೇಶ2 hours ago

Narendra Modi: ಮೂರನೇ ಬಾರಿ ಪ್ರಧಾನಿ ಪಟ್ಟಕ್ಕೇರಿದ ಬಳಿಕ ಇಂದು ಸ್ವಕ್ಷೇತ್ರ ವಾರಾಣಸಿಗೆ ಮೋದಿ ಮೊದಲ ಭೇಟಿ

Prajwal revanna case
ಪ್ರಮುಖ ಸುದ್ದಿ2 hours ago

Prajwal Revanna Case: ಇಂದು ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯ, ಮತ್ತೊಂದು ಕೇಸ್‌ನಲ್ಲಿ ಅಂದರ್!‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು23 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು23 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌