Site icon Vistara News

Dhoomam Movie: ಧೂಮಂ ಇದೇ 23ಕ್ಕೆ ರಿಲೀಸ್‌; ಒಟಿಟಿಯಲ್ಲಿ ಯಾವಾಗ ಸ್ಟ್ರೀಮಿಂಗ್‌?

Dhoomam Movie OTT Release Date

ಬೆಂಗಳೂರು: ಹೊಂಬಾಳೆ ಫಿಲ್ಮ್ಸ್‌, ‘ಧೂಮಂ’ ಚಿತ್ರವನ್ನು (Dhoomam Trailer) ನಿರ್ಮಿಸುವ ಮೂಲಕ (Dhoomam Movie) ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿದೆ. ಸಿನಿಮಾದ ಟ್ರೈಲರ್‌ ಕೂಡ ಬಿಡುಗಡೆಗೊಂಡಿದೆ. ಇದೀಗ ಸಿನಿಮಾ ಬಿಡುಗಡೆ ಮುಂಚೆಯೇ ಒಟಿಟಿ ರಿಲೀಸ್‌ ಕುರಿತಾಗಿ ಚರ್ಚೆಗಳು ಆಗುತ್ತಿವೆ. ಸಿನಿಮಾ ಇದೇ ತಿಂಗಳ 23ಕ್ಕೆ ಥಿಯೇಟರ್‌ಗಳಲ್ಲಿ ರಿಲೀಸ್ ಆಗಲಿದೆ. ಆ ನಂತರ ಅಮೆಜಾನ್ ಪ್ರೈಂ ವಿಡಿಯೊ ಚಿತ್ರದ ಡಿಜಿಟಲ್ ರೈಟ್ಸ್ ಮಾರಾಟವಾಗಿರುವುದಾಗಿ ಹೇಳಲಾಗುತ್ತಿದೆ.

ವಿಜಯ್ ಕಿರಗಂದೂರು ನಿರ್ಮಾಣ, ‘ಲೂಸಿಯಾ’ ಮತ್ತು ‘ಯೂ ಟರ್ನ್’ ಖ್ಯಾತಿಯ ಪವನ್ ಕುಮಾರ್ ನಿರ್ದೇಶನ ಈ ಸಿನಿಮಾಕ್ಕಿದೆ. ಮೂಲ ಮಲಯಾಳಂ ಸಿನಿಮಾ ಇದಾಗಿದ್ದು, ಕನ್ನಡದಲ್ಲೂ ರಿಲೀಸ್ ಆಗುತ್ತಿದೆ. ಸಮಯದ ವಿರುದ್ಧದ ಓಟದಲ್ಲಿ ಸಿಕ್ಕಿರುವ ಅವಿ (ಫಹಾದ್ ಫಾಸಿಲ್) ಮತ್ತು ದಿಯಾ (ಅಪರ್ಣ) ಸುತ್ತ ಈ ಚಿತ್ರ ಸುತ್ತುತ್ತದೆ. ಅಪಾಯ ಮತ್ತು ಮನಸ್ಸೊಳಗಿನ ಭಯವನ್ನು ಮೆಟ್ಟಿ ನಿಲ್ಲುವುದಕ್ಕೆ ಅವರಿಬ್ಬರೂ ಏನೆಲ್ಲ ತ್ಯಾಗಗಳನ್ನು ಮಾಡುತ್ತಾರೆ ಎಂಬುದೇ ಈ ಚಿತ್ರದ ಕಥೆ. ನಿರ್ದೇಶನದ ಜತೆಗೆ ಕಥೆ ಮತ್ತು ಚಿತ್ರಕಥೆಯನ್ನು ಪವನ್ ಅವರೇ ರಚಿಸಿದ್ದಾರೆ.

ಇದನ್ನೂ ಓದಿ: Dhoomam Trailer: ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ‘ಧೂಮಂ’ ಸಿನಿಮಾ ಟ್ರೇಲರ್ ಔಟ್‌!

‘ಧೂಮಮ್’ ಕನ್ನಡ ಸಿನಿಮಾ ಎಂತಲೇ ಆಗಿತ್ತು. ಆದರೆ ಟ್ರೈಲರ್ ನೋಡಿದ ಮೇಲೆ ಇದು ಮಲಯಾಳಂನಲ್ಲಿ ನಿರ್ಮಾಣವಾಗಿರುವ ಸಿನಿಮಾ ಎನ್ನುವುದು ಸಿನಿರಸಿಕರಿಗೆ ಕ್ಲಾರಿಟಿ ಸಿಕ್ಕಿದೆ. ಈ ಚಿತ್ರವನ್ನು ಇದೇ ಜೂನ್ 23ರಂದು ಕೇರಳ ರಾಜ್ಯಾದ್ಯಂತ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಈ ಚಿತ್ರದಲ್ಲಿ ಫಹಾದ್ ಫಾಸಿಲ್, ಅಪರ್ಣಾ ಬಾಲಮುರಳಿ, ಅಚ್ಯುತ್ ಕುಮಾರ್, ರೋಶನ್ ಮ್ಯಾಥ್ಯೂ, ವಿನೀತ್ ರಾಧಾಕೃಷ್ಣನ್, ಅನು ಮೋಹನ್, ಜಾಯ್ ಮ್ಯಾಥ್ಯೂ, ನಂದು ಮುಂತಾದವರು ನಟಿಸಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ, ಸುರೇಶ್ ಅವರ ಸಂಕಲನ ಮತ್ತು ಪ್ರೀತಾ ಜಯರಾಮನ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

Exit mobile version