ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ಆಗಾಗ ತಮ್ಮ ಮುದ್ದು ಮಗಳ (dhruva sarja daughter) ಜತೆ ಸಮಯ ಕಳೆಯುತ್ತಿರುವ ಫೋಟೊಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಲೇ ಇರುತ್ತಾರೆ. ಇದೀಗ ವರಮಹಾಲಕ್ಷ್ಮೀ ದಿನ ಅವರ ಫ್ಯಾನ್ಸ್ಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ಇದೀಗ ಧ್ರುವ ಸರ್ಜಾ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ಸಣ್ಣ ವಿಡಿಯೊ ಹಂಚಿಕೊಳ್ಳುವುದರ ಮೂಲಕ ಎರಡನೇ ಮಗುವಿನ ಆಗಮನದ ಬಗ್ಗೆ ಅನೌನ್ಸ್ ಮಾಡಿದೆ ಧ್ರುವ-ಪ್ರೇರಣಾ (Prerana Shankar) ಜೋಡಿ. ಇದೇ ಸೆಪ್ಟೆಂಬರ್ನಲ್ಲಿ ಪ್ರೇರಣಾ ಮಗುವಿಗೆ ಜನ್ಮ ಕೊಡಲಿದ್ದಾರೆ ಎಂದು ಕುಟುಂಬ ಮಾಹಿತಿ ಹಂಚಿಕೊಂಡಿದೆ. ಈ ಸುದ್ದಿ ವೈರಲ್ ಆಗುತ್ತಿದ್ದಂತೆ ಧ್ರುವ ಅವರ ಅಭಿಮಾನಿಗಳು ಕಮೆಂಟ್ ಮೂಲಕ ಶುಭ ಹಾರೈಸುತ್ತಿದ್ದಾರೆ.
ಈ ಹಿಂದೆಯಷ್ಟೇ ಧ್ರುವ ಸರ್ಜಾ ಮಗಳ ಫೋಟೊಗಳನ್ನು ಹಂಚಿಕೊಂಡು ಮಗಳು ಬಂದ ಮೇಲೆ ನಮ್ಮ ಜೀವನವು ಇನ್ನಷ್ಟು ಬೆಳಕಾಗಿದೆ ಎಂದು ಹೇಳಿಕೊಂಡಿದ್ದರು. ಕಳೆದ ಅಕ್ಟೋಬರ್ 2ರಂದು ಹೆಣ್ಣು ಮಗುವಿಗೆ ಪ್ರೇರಣಾ ಜನ್ಮ ನೀಡಿದ್ದರು. ಆಗ ತಮ್ಮ ಮನೆಗೆ ಮಹಾಲಕ್ಷ್ಮಿ ಬಂದಿದ್ದಾಳೆ ಎಂದು ಧ್ರುವ ಸರ್ಜಾ ಬರೆದುಕೊಂಡಿದ್ದರು.
ಇದನ್ನೂ ಓದಿ; Dhruva Sarja: ದೇವತೆಯ ಚೆಲುವ ನೋಡಲು, ಮಾಯಗಾತಿ ನಗುವ ಕಲಿಯಲು ಹೊರಟ ಧ್ರುವ ಸರ್ಜಾ!
ಧ್ರುವ ಸರ್ಜಾ ಪೋಸ್ಟ್ ಮಾಡಿರುವ ವಿಡಿಯೊ
ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿಯಾದ ಧ್ರುವ
KD ಸಿನಿಮಾ
ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ಹಾಗೂ ನಿರ್ದೇಶಕ ಪ್ರೇಮ್ ಕಾಂಬಿನೇಶನ್ ಇರುವ ʻಕೆಡಿ’ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಶಿಲ್ಪಾ ಶೆಟ್ಟಿ 17 ವರ್ಷಗಳ ನಂತರ ಕೆಡಿ’ ಸಿನಿಮಾದ ಮೂಲಕ ಕನ್ನಡ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ‘ಕೆವಿಎನ್ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ.
ಇದನ್ನೂ ಓದಿ: Dhruva Sarja: `ಪೊಗರು’ ಸಿನಿಮಾದಲ್ಲಿ ನಟಿಸಿದ್ದ ಬಾಡಿಬಿಲ್ಡರ್ ಜೋ ಲಿಂಡ್ನರ್ ಕೇವಲ 30ನೇ ವಯಸ್ಸಿಗೆ ನಿಧನ
ಮಾರ್ಟಿನ್ ಸಿನಿಮಾ
ಧ್ರುವ ಸರ್ಜಾ ʻಮಾರ್ಟಿನ್ʼ ಸಿನಿಮಾ ಬಿಡುಗಡೆಗೂ ಸಜ್ಜಾಗಿದ್ದಾರೆ. ಎ.ಪಿ ಅರ್ಜುನ್ ಮಾರ್ಟಿನ್ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡುತ್ತಿರುವ ಮಾರ್ಟಿನ್ ಸಿನಿಮಾದಲ್ಲಿ ಮಾಸ್ ಆಗಿ ಧ್ರುವ ಸರ್ಜಾ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಅದ್ಧೂರಿ ಬಜೆಟ್ ಮತ್ತು ಮೇಕಿಂಗ್ನಿಂದಾಗಿ ಸದ್ದು ಮಾಡುತ್ತಿರುವ ಈ ಸಿನಿಮಾ ಕ್ಲೈಮ್ಯಾಕ್ಸ್ ಆ್ಯಕ್ಷನ್ ದೃಶ್ಯಗಳಿಗೆ ರಾಮ್-ಲಕ್ಷ್ಮಣ್ ಮತ್ತು ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಒಂದು ಸಿನಿಮಾದ ಕ್ಲೈಮ್ಯಾಕ್ಸ್ಗಾಗಿ ಮೂರು ಸಾಹಸ ನಿರ್ದೇಶಕರು ಕೆಲಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.