Site icon Vistara News

Dhruva Sarja | ʻಕೆಡಿʼ ಚಿತ್ರಕ್ಕೆ ಖಡಕ್ ಲುಕ್ ನಲ್ಲಿ ಎಂಟ್ರಿ ಕೊಟ್ಟ ಕ್ರೇಜಿ ಸ್ಟಾರ್‌ ರವಿಚಂದ್ರನ್‌

Dhruva Sarja

ಬೆಂಗಳೂರು : ಸ್ಯಾಂಡಲ್‌ವುಡ್‌ ನಟ, ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ಹಾಗೂ ನಿರ್ದೇಶಕ ಪ್ರೇಮ್‌ ಕಾಂಬಿನೇಶನ್‌ ಸಿನಿಮಾ ʻಕೆಡಿ’ಗೆ ಕ್ರೇಜಿ ಸ್ಟಾರ್ ರವಿಚಂದ್ರನ್‌ ಎಂಟ್ರಿ ಕೊಡ್ತಿದ್ದಾರೆ. ಇದೀಗ ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್ ರಿವೀಲ್ ಆಗಿದೆ. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದಾರೆ.

ಸಂಜಯ್ ದತ್, ಶಿಲ್ಪಾ ಶೆಟ್ಟಿ ಈ ಸಿನಿಮಾಗೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿಯ ಬೆನ್ನಲ್ಲೇ ಈಗ ರವಿಚಂದ್ರನ್ `ʻಕೆಡಿ’ ಸಿನಿಮಾದಲ್ಲಿನ ಫಸ್ಟ್ ಲುಕ್ ಬಿಡುಗಡೆಯಾಗಿದೆ.ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಫ್ಯಾಂಟ್‌ನಲ್ಲಿ ರವಿಚಂದ್ರನ್ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದಾರೆ. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದಾರೆ.

ಇದನ್ನೂ ಓದಿ | Shivanna Birthday | ಜೀ ಟಿವಿಯಲ್ಲಿ ಶಿವರಾಜೋತ್ಸವ; 60 ಗಂಟೆ ಪ್ರಸಾರವಾಗಲಿದೆ ಶಿವಣ್ಣನ ಸಿನಿಮಾ

ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

ಧ್ರುವ ಸರ್ಜಾ ʻಮಾರ್ಟಿನ್‌ʼ ಸಿನಿಮಾದಲ್ಲಿ ಬ್ಯಸಿಯಾಗಿದ್ದಾರೆ. ಎ.ಪಿ ಅರ್ಜುನ್‌ ಮಾರ್ಟಿನ್‌ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ | Dhruva Sarja | ಧ್ರುವ ಸರ್ಜಾ-ಪ್ರೇಮ್‌ ಕಾಂಬಿನೇಶನ್‌ ಸಿನಿಮಾದ ಟೈಟಲ್‌ ರಿವೀಲ್‌!

Exit mobile version