Site icon Vistara News

Dhruva Sarja | ʻಕೆಡಿʼ ಚಿತ್ರಕ್ಕೆ 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡ ಧ್ರುವ ಸರ್ಜಾ

Dhruva Sarja

ಬೆಂಗಳೂರು : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ಹಾಗೂ ನಿರ್ದೇಶಕ ಪ್ರೇಮ್‌ ಕಾಂಬಿನೇಶನ್‌ ಸಿನಿಮಾ ʻಕೆಡಿ’, ಈ ಹಿಂದೆ ಅಷ್ಟೇ ಕ್ರೇಜಿ ಸ್ಟಾರ್ ರವಿಚಂದ್ರನ್‌ ಲುಕ್‌ ರಿವೀಲ್‌ ಮಾಡಿತ್ತು. ಇದೀಗ ಧ್ರುವ ಸರ್ಜಾ 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದಾರೆ. ʻಧ್ರುವ ಸರ್ಜಾ ಕೆಡಿ ಯುದ್ಧಭೂಮಿ ಪ್ರವೇಶಿಸಲು ಸಿದ್ಧರಾಗಿದ್ದಾರೆ’ ಎಂದು ಪ್ರೇಮ್ ಕ್ಯಾಪ್ಷನ್‌ನಲ್ಲಿ ಬರೆದುಕೊಂಡಿದ್ದಾರೆ. 

ಸಂಜಯ್ ದತ್, ಶಿಲ್ಪಾ ಶೆಟ್ಟಿ ಈ ಸಿನಿಮಾಗೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿಯ ಬೆನ್ನಲ್ಲೇ ʻಕೆಡಿʼ ಸಿನಿಮಾಗೆ ರವಿಚಂದ್ರನ್ ಎಂಟ್ರಿ ಕೊಟ್ಟು ಲುಕ್‌ ರಿವೀಲ್‌ ಮಾಡಿದ್ದರು. ಈಗ ನಿರ್ದೇಶಕ ಪ್ರೇಮ್‌ ಧ್ರುವ ಸರ್ಜಾ ಜತೆಗಿನ ಫೋಟೊವನ್ನು ಹಂಚಿಕೊಂಡಿದ್ದು, ಕೆಡಿ ಯುದ್ಧ ಭೂಮಿಗೆ ಎಂಟರ್‌ ಆಗಲು ಧ್ರುವ ಸರ್ಜಾ ರೆಡಿಯಾಗಿದ್ದಾರೆ. 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಯುದ್ಧವು ನಾಯಕನನ್ನು ಬಿಡಿಸಲು ಸಿದ್ಧವಾಗಿದೆ ಎಂದು ಪ್ರೇಮ್ ಬರೆದುಕೊಂಡಿದ್ದಾರೆ.ʻಕೆಡಿʼ ಸಿನಿಮಾ ಅನೌನ್ಸ್ ಮಾಡಿದ ಆರಂಭದಲ್ಲಿ ಸೆರೆ ಹಿಡಿದ ಫೋಟೋ ಮತ್ತು ಈಗ ತೂಕ ಇಳಿಸಿಕೊಂಡ ನಂತರ ಧ್ರುವ ಸರ್ಜಾ ಹೇಗೆ ಕಾಣಿಸಿಕೊಳ್ಳುತ್ತಿದ್ದಾರೆಂದು ಪ್ರೇಮ್ ಅಪ್ಲೋಡ್‌ ಮಾಡಿದ್ದಾರೆ. 

ಇದನ್ನೂ ಓದಿ | Dhruva Sarja | ʻಕೆಡಿʼ ಚಿತ್ರಕ್ಕೆ ಖಡಕ್ ಲುಕ್ ನಲ್ಲಿ ಎಂಟ್ರಿ ಕೊಟ್ಟ ಕ್ರೇಜಿ ಸ್ಟಾರ್‌ ರವಿಚಂದ್ರನ್‌

ಫೋಟೊ ನೋಡುತ್ತಿದ್ದಂತೆ ಧ್ರುವ ಸರ್ಜಾ ಅಭಿಮಾನಿಗಳು ಆರೋಗ್ಯ ನೋಡಿಕೊಳ್ಳಿ ಎಂದು ಕಮೆಂಟ್ ಮೂಲಕ ವ್ಯಕ್ತಪಡಿಸುತ್ತಿದ್ದಾರೆ. ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಟೀಸರ್‌ ಪಂಚ ಭಾಷೆಯಲ್ಲಿ ಬಿಡುಗಡೆಗೊಂಡಿರುವುದು ವಿಶೇಷ.

ಧ್ರುವ ಸರ್ಜಾ ʻಮಾರ್ಟಿನ್‌ʼ ಸಿನಿಮಾದಲ್ಲಿ ಬ್ಯಸಿಯಾಗಿದ್ದಾರೆ. ಎ.ಪಿ ಅರ್ಜುನ್‌ ಮಾರ್ಟಿನ್‌ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ | Dhruva Sarja | ʻʻಅಣ್ಣ ಇಲ್ಲ ಅಂದಾಗ ಹೇಗೇಗೋ ಡಬ್ಬಿಂಗ್‌ ಮಾಡೋಕಾಗಲ್ಲʼʼ: ಧ್ರುವ ಸರ್ಜಾ

Exit mobile version