Site icon Vistara News

Dhruva Sarja: ʻಯುವʼ, ʻಮಾರ್ಟಿನ್‌ʼ ನಡುವೆ ಕ್ಲ್ಯಾಶ್‌; ರಿಲೀಸ್‌ ಡೇಟ್‌ ಅನೌನ್ಸ್‌!

Dhruva Sarja

ಬೆಂಗಳೂರು: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ಅಭಿನಯದ ʻಮಾರ್ಟಿನ್‌ʼ ಟೀಸರ್‌ ಈಗಾಗಲೇ ಬಿಡುಗಡೆಗೊಂಡಿದ್ದು ನೋಡುಗರು ಮೆಚ್ಚಿದ್ದಾರೆ. ಅದ್ಧೂರಿ ಬಜೆಟ್‌ ಮತ್ತು ಮೇಕಿಂಗ್‌ನಿಂದಾಗಿ ಸದ್ದು ಮಾಡುತ್ತಿರುವ ಸಿನಿಮಾ ‘ಮಾರ್ಟಿನ್ (‘MARTIN’ TEASER) ಇದೀಗ ಮತ್ತೆ ಸಿಹಿ ಸುದ್ದಿಯನ್ನು ನೀಡಿದೆ. ಡಿಸೆಂಬರ್‌ 22ರಂದು ಅದ್ಧೂರಿಯಾಗಿ ʻಮಾರ್ಟಿನ್‌ʼ ತೆರೆಗೆ ಬರುತ್ತಿದೆ.

ಕ್ಲೈಮ್ಯಾಕ್ಸ್‌ನ ಆ್ಯಕ್ಷನ್‌ ದೃಶ್ಯಗಳಿಗೆ ರಾಮ್‌-ಲಕ್ಷ್ಮಣ್‌ ಮತ್ತು ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಒಂದು ಸಿನಿಮಾದ ಕ್ಲೈಮ್ಯಾಕ್ಸ್‌ಗಾಗಿ ಮೂರು ಸಾಹಸ ನಿರ್ದೇಶಕರು ಕೆಲಸ ಮಾಡಿರುವುದು ಎಂದು ಹೇಳಲಾಗುತ್ತಿದೆ.

ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಇದೀಗ ಪಂಚ ಭಾಷೆಗಳಲ್ಲಿ, ಮಾರ್ಟಿನ್‌ ಸಿನಿಮಾದ ಟೀಸರ್‌ ಬಿಡುಗಡೆಗೊಂಡಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರಿಗೆ ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸಿದ್ದಾರೆ. ಮಾರ್ಟಿನ್‌ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ನಿಕಿತನ್‌ ಧೀರ್‌, ನವಾಬ್‌ ಶಾ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್‌ ಅಧಿಕಾರಂ ಒಂಡ್ರು’ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್‌ ಪಾಠಕ್‌ ಸಹ ‘ಮಾರ್ಟಿನ್‌’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Dhruva Sarja: ಧ್ರುವ ಸರ್ಜಾ ಜನುಮದಿನಂದೇ ಚಿರಂಜೀವಿ ಸರ್ಜಾ ಸಿನಿಮಾ ರಿಲೀಸ್‌!

ಇದೇ ಸಮಯಕ್ಕೆ ಯುವ ಸಿನಿಮಾ ಕೂಡ ತೆರೆಗೆ ಅಪ್ಪಳಿಸುತ್ತಿದೆ. ಈ ಸಿನಿಮಾದಲ್ಲಿ ಯುವ ರಾಜಕುಮಾರ್ (Yuvraj Kumar) ನಾಯಕನಾಗಿ ನಟಿಸುತ್ತಿದ್ದಾರೆ. ಸಪ್ತಮಿ ಗೌಡ ಅವರು ಸಿರಿ ಎನ್ನುವ ಪಾತ್ರ ಮಾಡುತ್ತಿದ್ದಾರೆ. ಡಿಗ್ಲಾಮರ್ ಪಾತ್ರ ಎಂದು ಹೇಳಲಾಗುತ್ತಿದೆ. ಕಾಲೇಜು ಹುಡುಗಿಯಾಗಿ ಈ ಸಿನಿಮಾದಲ್ಲಿ ಪಾತ್ರ ನಿರ್ವಹಿಸುತ್ತಿದ್ದಾರೆ ಸಪ್ತಮಿ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್‌ನಲ್ಲಿ ಸಂತೋಷ್ ಆನಂದ್‌ ರಾಮ್ ಈ ಸಿನಿಮಾ ಕಟ್ಟಿಕೊಡುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ, ಶ್ರೀಶ ಕುದುವಳ್ಳಿ ಛಾಯಾಗ್ರಹಣ ‘ಯುವ’ ಚಿತ್ರಕ್ಕಿದೆ. 

Exit mobile version