ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ಅಭಿನಯದ ʻಮಾರ್ಟಿನ್ʼ ಇದೀಗ ಹೊಸ ಅಪ್‌ಡೇಟ್ ಹಂಚಿಕೊಂಡಿದೆ. ಇಟಲಿ ಮೂಲದ ನಟಿ ಜಾರ್ಜಿಯಾ ಆಂಡ್ರಿಯಾನಿ (Giorgia Andriani) ಮಾರ್ಟಿನ್ ಸ್ಪೆಷಲ್ ಸಾಂಗ್‌ನಲ್ಲಿ ಧ್ರುವ ಜತೆ ಹೆಜ್ಜೆ ಹಾಕಿದ್ದಾರೆ. ಹೈದರಾಬಾದ್‌ನಲ್ಲಿ ಶೂಟಿಂಗ್ ನಡೆದಿದೆ. ಅದ್ಧೂರಿ ಬಜೆಟ್ ಮತ್ತು ಮೇಕಿಂಗ್‌ನಿಂದಾಗಿ ಸದ್ದು ಮಾಡುತ್ತಿರುವ ಸಿನಿಮಾ ‘ಮಾರ್ಟಿನ್ʼ (Martin Cinema), ಕ್ಲೈಮ್ಯಾಕ್ಸ್‌ನ ಆ್ಯಕ್ಷನ್ ದೃಶ್ಯಗಳಿಗೆ ರಾಮ್-ಲಕ್ಷ್ಮಣ್ ಮತ್ತು ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಒಂದು ಸಿನಿಮಾದ ಕ್ಲೈಮ್ಯಾಕ್ಸ್‌ಗಾಗಿ ಮೂರು ಸಾಹಸ ನಿರ್ದೇಶಕರು ಕೆಲಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ʼಮಾರ್ಟಿನ್ʼ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಪಂಚ ಭಾಷೆಗಳಲ್ಲಿ ʼಮಾರ್ಟಿನ್ʼ ಸಿನಿಮಾದ ಟೀಸರ್ ಬಿಡುಗಡೆಗೊಂಡಿತ್ತು. ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರಿಗೆ ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸಿದ್ದಾರೆ. ʼಮಾರ್ಟಿನ್ʼ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್ ಕುಮಾರ್, ನಿಕಿತನ್ ಧೀರ್, ನವಾಬ್ ಶಾ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್ ಅಧಿಕಾರಂ ಒಂಡ್ರು’ ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್ ಪಾಠಕ್ ಸಹ ‘ಮಾರ್ಟಿನ್’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಸದ್ಯ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಿರ್ದೇಶಕ ಪ್ರೇಮ್ ಅವರ ʻಕೆಡಿ’ ಸಿನಿಮಾ ʻ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ.
ಇದನ್ನೂ ಓದಿ: Dhruva Sarja: ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಧ್ರುವ ಸರ್ಜಾ-ಪ್ರೇರಣಾ ದಂಪತಿ!
ʼಕೆಡಿ’ ಸಿನಿಮಾದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಹಿಂದೆ ಚಿತ್ರತಂಡ ರವಿಚಂದ್ರನ್ ಅವರ ಲುಕ್ ಹಂಚಿಕೊಂಡಿತ್ತು. ರವಿಚಂದ್ರನ್ ಅವರ ಸಿನಿಮಾ ಫಸ್ಟ್ ಲುಕ್‌ನಲ್ಲಿ ಹಣೆಯಲ್ಲಿ ವಿಭೂತಿ, ಕಪ್ಪು ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಖಡಕ್ ಆಗಿ ಕಾಣಿಸಿಕೊಂಡಿದ್ದರು. ತಮ್ಮ ಬಲಗಾಲಿನಲ್ಲಿ ಕಾರಿನ ಡೋರ್ ಓಪನ್ ಮಾಡಿ ಪೋಸ್ ಕೊಟ್ಟಿದ್ದರು. ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರವಿಚಂದ್ರನ್ ಮಿಂಚಿದ್ದರು. ಅಷ್ಟೇ ಅಲ್ಲದೇ ಧ್ರುವ ಸರ್ಜಾ ಅವರು 23 ದಿನಗಳಲ್ಲಿ 18 ಕೆಜಿ ತೂಕ ಇಳಿಸಿಕೊಂಡಿದ್ದರು.