Site icon Vistara News

Dhruva Sarja: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ʻಮಾರ್ಟಿನ್‌ʼ ಟೀಸರ್‌ ಔಟ್‌

Dhruva Sarja MARTIN TEASER out

ಬೆಂಗಳೂರು: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ಅಭಿನಯದ ʻಮಾರ್ಟಿನ್‌ʼ ಟೀಸರ್‌ ಫೆಬ್ರವರಿ 23ರಂದು ಬಿಡುಗಡೆಗೊಂಡಿದೆ. ಅದ್ಧೂರಿ ಬಜೆಟ್‌ ಮತ್ತು ಮೇಕಿಂಗ್‌ನಿಂದಾಗಿ ಸದ್ದು ಮಾಡುತ್ತಿರುವ ಸಿನಿಮಾ ‘ಮಾರ್ಟಿನ್ (‘MARTIN’ TEASER), ಕ್ಲೈಮ್ಯಾಕ್ಸ್‌ನ ಆ್ಯಕ್ಷನ್‌ ದೃಶ್ಯಗಳಿಗೆ ರಾಮ್‌-ಲಕ್ಷ್ಮಣ್‌ ಮತ್ತು ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಒಂದು ಸಿನಿಮಾದ ಕ್ಲೈಮ್ಯಾಕ್ಸ್‌ಗಾಗಿ ಮೂರು ಸಾಹಸ ನಿರ್ದೇಶಕರು ಕೆಲಸ ಮಾಡಿರುವುದು ಎಂದು ಹೇಳಲಾಗುತ್ತಿದೆ. ಪಂಚ ಭಾಷೆಗಳ‌ಲ್ಲಿ ಟೀಸರ್ ರಿಲೀಸ್ ಆಗಿದೆ.

ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಇದೀಗ ಪಂಚ ಭಾಷೆಗಳಲ್ಲಿ, ಮಾರ್ಟಿನ್‌ ಸಿನಿಮಾದ ಟೀಸರ್‌ ಬಿಡುಗಡೆಗೊಂಡಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರಿಗೆ ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸಿದ್ದಾರೆ. ಮಾರ್ಟಿನ್‌ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ನಿಕಿತನ್‌ ಧೀರ್‌, ನವಾಬ್‌ ಶಾ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್‌ ಅಧಿಕಾರಂ ಒಂಡ್ರು’ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್‌ ಪಾಠಕ್‌ ಸಹ ‘ಮಾರ್ಟಿನ್‌’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Dhruva Sarja: ಬ್ರೈನ್ ಡೆಡ್ ಆದ ಧ್ರುವ ಸರ್ಜಾ ಅಭಿಮಾನಿಯ ಅಂಗಾಗ ದಾನ: ನಟ ಹೇಳಿದ್ದೇನು?

ಸದ್ಯ ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ನಿರ್ದೇಶಕ ಪ್ರೇಮ್‌ ಅವರ ʻಕೆಡಿ’ ಸಿನಿಮಾ ʻ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಕಥೆ 1970ರ ದಶಕದಲ್ಲಿ ಸಾಗಲಿದೆ ಎಂದು ಹೇಳಲಾಗುತ್ತಿದೆ. ಟೈಟಲ್‌ ಟೀಸರ್‌ನಲ್ಲಿ ಧ್ರುವ ಸರ್ಜಾ ಮಾಸ್‌ ಆಗಿ ಕಾಣಿಸಿಕೊಂಡಿದ್ದಾರೆ. ‘ಕೆವಿಎನ್​ ಪ್ರೊಡಕ್ಷನ್ಸ್’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ.

Exit mobile version