Site icon Vistara News

Dhruva Sarja: ಧ್ರುವ ಸರ್ಜಾ ಜನುಮದಿನದಂದೇ ಚಿರಂಜೀವಿ ಸರ್ಜಾ ಸಿನಿಮಾ ರಿಲೀಸ್‌!

Dhruva Sarja chiranjeevi Sarja

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದಿ. ಚಿರಂಜೀವಿ ಸರ್ಜಾ ನಟನೆಯ ಕೊನೆಯ ಸಿನಿಮಾ ರಾಜಮಾರ್ತಾಂಡ ಚಿತ್ರ ಯಾವಾಗ ಬಿಡುಗಡೆಯಾಲಿದೆ ಎಂದು ಅಭಿಮಾನಿಗಳು ಕಾತರದಿಂದ ಕಾದಿದ್ದರು. ಇದೀಗ ಆ ಕ್ಷಣ ಸಮೀಪಿಸಿದೆ. ರಾಮ್‌ನಾರಾಯಣ್‌ ನಿರ್ದೇಶನದಲ್ಲಿ ಮೂಡಿಬಂದಿದ್ದ ರಾಜಮಾರ್ತಾಂಡ ಸಿನಿಮಾ, ಧ್ರುವ ಸರ್ಜಾ (Dhruva Sarja) ಅವರ ಜನುಮದಿನದ ನಿಮಿತ್ತ ರಿಲೀಸ್‌ ಆಗಲಿದೆ. ಅಕ್ಟೋಬರ್‌ 6ರಂದು ರಾಜ್ಯಾದ್ಯಂತ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇದೀಗ ಚಿತ್ರತಂಡ ಪ್ರಚಾರ ಕಣಕ್ಕಿಳಿದಿದೆ.

ಚಿರಂಜೀವಿ ಸರ್ಜಾ (chiranjeevi sarja) ನಟನೆಯ ಕೊನೆಯ ಸಿನಿಮಾ ರಾಜಮಾರ್ತಾಂಡ (rangamarthanda). ಇದೀಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದು ನಿಂತಿದೆ. ವಿಶೇಷ ಏನೆಂದರೆ, ಧ್ರುವ ಸರ್ಜಾ ಅವರ ಬರ್ತ್‌ಡೇ ದಿನವೇ ಈ ಸಿನಿಮಾ ರಿಲೀಸ್‌ ಆಗಲಿದೆ. ಚಿರಂಜೀವಿ ಸರ್ಜಾ ಅವರು ನಿಧನರಾದಾಗ ಚಿತ್ರದ ಡಬ್ಬಿಂಗ್‌ ಆಗಿರಲಿಲ್ಲ. ಸಹೋದರ ಧ್ರುವ ಸರ್ಜಾ ಧ್ವನಿ ನೀಡಿ ಜೀವ ತುಂಬಿದ್ದರು. ಶಿವಕುಮಾರ್ ನಿರ್ಮಾಣದ ಚಿತ್ರ ಇದಾಗಿದೆ. ಇದೊಂದು ರೊಮ್ಯಾಂಟಿಕ್ ಆ್ಯಕ್ಷನ್ ಚಿತ್ರವಾಗಿದ್ದು ಚಿರಂಜೀವಿ ಸರ್ಜಾ, ದೀಪ್ತಿ ಸತಿ, ತ್ರಿವೇಣಿ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಈಗಾಗಲೇ ಚಿತ್ರದ ಟೀಸರ್, ಟ್ರೈಲರ್ ಹಾಗೂ ಹಾಡುಗಳು ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದು ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

ಇದನ್ನೂ ಓದಿ: Dhruva Sarja: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಜತೆ ಹೆಜ್ಜೆ ಹಾಕಿದ ಇಟಲಿ‌ ಮೂಲದ ನಟಿ!

ಧರ್ಮವಿಶ್ ಅವರ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಕೆ. ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು.ಡಿ.ವಿ ಅವರ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ ಪಾತ್ರವರ್ಗದಲ್ಲಿದ್ದಾರೆ.

Exit mobile version