Site icon Vistara News

Rishab Shetty: ವಿಶ್ವಸಂಸ್ಥೆಯಲ್ಲಿ ಕನ್ನಡ ಭಾಷಣ ಪೂರ್ತಿಯಾಗಿ ಮಾಡಿದ್ರಾ ರಿಷಬ್‌?ವಿಡಿಯೊದಲ್ಲಿ ಏನಿದೆ?

Did Rishabh complete his Kannada speech at the United Nations What is in the video

ಬೆಂಗಳೂರು: ಸೂಪರ್-ಹಿಟ್ ಚಲನಚಿತ್ರ ‘ಕಾಂತಾರ’ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಮಾರ್ಚ್‌ 16ರಂದು ಜಿನೀವಾದಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ (UNHRC) ಅಧಿವೇಶನದಲ್ಲಿ ಕನ್ನಡದಲ್ಲಿಯೇ ಮಾತನಾಡಿದ್ದಾರೆ. ಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತ ಹೆಚ್ಚು ಅವಧಿಯಿಂದ ತಳಮಟ್ಟದಿಂದ ಕಾರ್ಯನಿರ್ವಹಿಸುತ್ತಿರುವ ಭಾರತದ ಏಕೋಪಾಸ್‌ ಪ್ರತಿನಿಧಿಯಾಗಿ ರಿಷಬ್‌ ಮಾತನಾಡಿದ್ದಾರೆ.

ಆದರೆ ತಾಂತ್ರಿಕ ಕಾರಣಗಳಿಂದಾಗಿ ರಿಷಬ್ ಭಾಷಣವನ್ನು 12 ಸೆಕೆಂಡುಗಳ ನಂತರ ನಿಲ್ಲಿಸಲಾಗಿದ್ದು, ಅನುವಾದ ಸೌಲಭ್ಯ ಇಲ್ಲ ಎಂಬ ಕಾರಣ ನೀಡಿ ಮತ್ತೊಬ್ಬ ಸ್ಪೀಕರ್‌ಗೆ ಅವಕಾಶ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ವಿಡಿಯೊದಲ್ಲೂ ಈ ಅಂಶ ಕಂಡು ಬಂದಿದೆ.

ರಿಷಬ್ ಭಾಷಣವನ್ನು ನಿಲ್ಲಿಸಿರುವ ವಿಡಿಯೊ

ರಿಷಬ್‌ ಟ್ವೀಟ್‌ನಲ್ಲಿ ತಾವು ಮಾತನಾಡಿರುವ ಅಂಶಗಳ ಕುರಿತು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

ʻʻಪರಿಸರ ಸಂರಕ್ಷಣೆಗಾಗಿ ಕಳೆದ ಒಂದು ದಶಕಕ್ಕಿಂತ ಹೆಚ್ಚು ಅವಧಿಯಿಂದ ತಳಮಟ್ಟ ದಿಂದ ಕಾರ್ಯ ನಿರ್ವಹಿಸುತ್ತಿರುವ ಭಾರತದ ಏಕೋಪಾಸ್ ಪ್ರತಿನಿಧಿಯಾಗಿ ನಾನು ಬಂದಿದ್ದೇನೆ.

ಪರಿಸರ ಸುಸ್ಥಿರತೆ ಕಾಪಾಡುವುದು ಸದ್ಯದ ಅಗತ್ಯ, ಒಬ್ಬ ನಟ- ನಿರ್ದೇಶಕನಾಗಿ, ಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದೇ ನನ್ನ ಉದ್ದೇಶ. ಪರಿಸರ ಸುಸ್ಥಿಗಳಿಯ ಶೋಧನೆಗೆ ಜಾಗತಿಕ ಏಜೆನ್ಸಿಗಳು ಹಾಗೂ ಸರ್ಕಾರದ ಸಂಸ್ಥೆಗಳು ಮುಂಚೂಣಿಯಲ್ಲಿದೆ, ಜತೆಗೆ ಭಾರತದಲ್ಲಿ ನಾಗರಿಕ ಸಮಾಜ ಸಹ ಸ್ಥಳೀಯ ಪರಿಸರ ರಕ್ಷಣೆಯ ಕಾರ್ಯದಲ್ಲಿ ತೊಡಗಿದೆ, ಇಂತಹ ಪರಿಸರ ಪ್ರಜ್ಞೆಗೆ ಸಿನಿಮಾ ಎಂಬ ಮಾಧ್ಯಮವು ಕನ್ನಡಿ ಹಿಡಿಯುತ್ತದೆ ಹಾಗೂ ವಾಸ್ತವವನ್ನು ಜಗತ್ತಿಗೆ ತೋರಿಸುವ ಪ್ರಮುಖ ಪಾತ್ರ ನಿರ್ವಹಿಸುತ್ತವೆ, ಹಲವಾರು ಭಾರತೀಯ ಸಿನಿಮಾಗಳು ಕಾಲ್ಪನಿಕ ಹಾಗೂ ವಾಸ್ತವ ತಳಿಗಳ ಮೂಲಕ ಪರಿಸರ ಸಂರಕ್ಷಣೆಯ ವಿಚಾರ ಹೇಳಿದ್ದು, ಈ ಕುರಿತು ಜಾಗೃತಿ ಮೂಡಿಸಿವೆ ಎಂಬುದು ನಮ್ಮ ಹೆಮ್ಮೆ.

ಇದನ್ನೂ ಓದಿ: Rishab Shetty: ಕಾಂತಾರ ಚಿತ್ರದ ಬಳಿಕ ಬೊಮ್ಮಾಯಿಗೆ ರಿಷಬ್‌ ಶೆಟ್ಟಿ ಮನವಿ ಸಲ್ಲಿಸಿದ್ದೇನು?

ಇತ್ತೀಚಿನ ನನ್ನ ಕಾಂತಾರ ಸಿನಿಮಾದಲ್ಲಿ ಸಹ, ನಿಸರ್ಗದ ಮಡಿಲಲ್ಲಿ, ಮನುಷ್ಯನ ಜೀವನ, ಜನರ ಸ್ಥಳೀಯ ನಂಬಿಕೆ, ಆಚರಣೆ ಕುರಿತ ಪ್ರಮುಖ ಅಂಶಗಳು ಅಡಕವಾಗಿವೆ.

ಪರಿಸರದ ಜತೆ ನಾವು ಹೊಂದಿರುವ ನಂಟು, ಅದು ನಮ್ಮ ಮೇಲೆ ಬೀರುವ ಪರಿಣಾಮ, ಸಹಬಾಳ್ವೆ, ಸಾಂಸ್ಕೃತಿಕ ಹಿರಿಮೆಗಳು ಹೇಗೆ ಪರಸ್ಪರ ಅವಲಂಬಿಸಿದೆ ಎಂಬುದನ್ನು ಕಾಂತಾರ ಸಿನಿಮಾ ತೋರಿಸಿದೆ.

ಸ್ಥಳೀಯ ಪರಿಸರ ರಕ್ಷಣೆ, ಇದರಲ್ಲಿ ಸರ್ಕಾರದ ಪಾತ್ರ, ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಮುದಾಯಗಳ ಪ್ರಾಮುಖ್ಯತೆಗಳನ್ನು ಸಿನಿಮಾ ಎಳೆಎಳೆಯಾಗಿ ಬಿಚ್ಚಿಟ್ಟಿದೆ.

ಕಾಂತಾರದಂತಹ ಸಿನಿಮಾಗಳು ವಾಸ್ತವವನ್ನು ತೆರೆದಿಡುವ ಜತೆಗೆ ಪರಿಸರದ ಸವಾಲುಗಳನ್ನು ಎದುರಿಸಲು, ಸಮಸ್ಯೆಗಳನ್ನು ಬಗೆಹರಿಸಲು ಜನರಿಗೆ ಸ್ಫೂರ್ತಿ ನೀಡುತ್ತವೆ. ಭಾವನೆಗಳನ್ನು ಜಾಗೃತಗೊಳಿಸಿ, ಪರಿಸರ ರಕ್ಷಣೆಯತ್ತ ಜನ ತೆರಳುವಂತೆ ಮಾಡುತ್ತವೆ. ಇಂತಹ ಪ್ರಯತ್ನ ಪರಿಶ್ರಮವನ್ನು ಗುರುತಿಸಬೇಕು, ಪ್ರೋತ್ಸಾಹಿಸಬೇಕು ಎಂಬುದಾಗಿ ಇಲಿ ನೆರೆದಿರುವ ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇನೆʼʼಎಂದು ಬರೆದುಕೊಂಡಿದ್ದಾರೆ.

ರಿಷಬ್‌ ಶೆಟ್ಟಿ ಟ್ವೀಟ್‌

ಅವರ ಅಭಿಮಾನಿಗಳು ವಿಡಿಯೊ ವೈರಲ್‌ ಆಗುತ್ತಿದ್ದಂತೆ ʻʻವೇದಿಕೆಯಲ್ಲಿ ರಿಷಬ್‌ ಅವರು ಕನ್ನಡ ಮಾತನಾಡಿರುವುದು ಸಂತಸದ ವಿಚಾರ. ಕನ್ನಡದಲ್ಲೇ ಮಾತನಾಡುವ ಹಂಬಲದಿಂದ ಹೋಗಿದ್ದ ರಿಷಬ್ ಅವರಿಗೆ ಈ ಅವಕಾಶ ಸಿಕ್ಕಿದ್ದು ನಿಜಕ್ಕೂ ಸಂತಸ ತಂದಿದೆ. ರಿಷಬ್ ಕನ್ನಡ ಭಾಷೆಯತ್ತ ತಮ್ಮ ಪ್ರೀತಿ ಅಭಿಮಾನ ಗೌರವವನ್ನು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಕನ್ನಡ ಮಾತನಾಡುವ ಮೂಲಕ ಅಭಿವ್ಯಕ್ತಿಸಿದ್ದಾರೆʼʼ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

Exit mobile version