Dinesh Phadnis: ʼಸಿಐಡಿʼ ಖ್ಯಾತಿಯ ಜನಪ್ರಿಯ ನಟ ಇನ್ನಿಲ್ಲ - Vistara News

ಕಿರುತೆರೆ

Dinesh Phadnis: ʼಸಿಐಡಿʼ ಖ್ಯಾತಿಯ ಜನಪ್ರಿಯ ನಟ ಇನ್ನಿಲ್ಲ

Dinesh Phadnis: ಜನಪ್ರಿಯ ʼಸಿಐಡಿʼ ಧಾರಾವಾಹಿಯ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಸೋಮವಾರ (ಡಿಸೆಂಬರ್ 4) ರಾತ್ರಿ ನಿಧನ ಹೊಂದಿದ್ದಾರೆ.

VISTARANEWS.COM


on

cid
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಜನಪ್ರಿಯ ʼಸಿಐಡಿʼ (CID) ಧಾರಾವಾಹಿಯ ಖ್ಯಾತಿಯ ನಟ ದಿನೇಶ್ ಫಡ್ನಿಸ್ (Dinesh Phadnis) ಸೋಮವಾರ (ಡಿಸೆಂಬರ್ 4) ರಾತ್ರಿ ನಿಧನ ಹೊಂದಿದ್ದಾರೆ. ಮಧ್ಯರಾತ್ರಿ ವೇಳೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. ಅವರ ಅಂತ್ಯಕ್ರಿಯೆ ಇಂದು (ಡಿಸೆಂಬರ್ 5) ನಡೆಯಲಿದೆ. ದಿನೇಶ್ ಫಡ್ನಿಸ್ ʼಸಿಐಡಿʼಯ ಫ್ರೆಡೆರಿಕ್ಸ್ ಪಾತ್ರದ ಮೂಲಕ ಜನಪ್ರಿಯರಾಗಿದ್ದರು. ಡಿಸೆಂಬರ್ 2ರಿಂದ ಅವರು ಮುಂಬೈಯ ತುಂಗಾ ಆಸ್ಪತ್ರೆಯ ವೆಂಟಿಲೇಟರ್‌ನಲ್ಲಿದ್ದರು.

ʼʼದಿನೇಶ್ ಮಧ್ಯರಾತ್ರಿ 12.8ರ ಸುಮಾರಿಗೆ ನಮ್ಮನ್ನು ತೊರೆದಿದ್ದಾರೆ. ಅವರಿಗೆ ಪಿತ್ತಜನಕಾಂಗದ ಸಮಸ್ಯೆಗಳಿದ್ದವು ಮತ್ತು ಅದು ಇತರ ಅಂಗಗಳ ಮೇಲೆ ಪರಿಣಾಮ ಬೀರಿತ್ತು. ಅವರು ಎರಡು, ಮೂರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ನೀಡಿದರೂ ಅವರು ಬದುಕುಳಿಯಲಿಲ್ಲʼʼ ಎಂದು ನಟ-ಸ್ನೇಹಿತ ಆದಿತ್ಯ ಶ್ರೀವಾಸ್ತವ ತಿಳಿಸಿದ್ದಾರೆ.

ಜನಪ್ರಿಯ ಪತ್ತೇದಾರಿ ಧಾರಾವಾಹಿ ʼಸಿಐಡಿʼ 1998ರಲ್ಲಿ ದೂರದರ್ಶನದಲ್ಲಿ ಪ್ರಸಾರವಾಗಲು ಆರಂಭಿಸಿತ್ತು. ಇದು ಎಷ್ಟು ಜನಪ್ರಿಯವಾಗಿತ್ತು ಎಂದರೆ 2018ರವರೆಗೆ ಪ್ರಸಾರವಾಗಿತ್ತು. ಇದು ಭಾರತೀಯ ದೂರದರ್ಶನದಲ್ಲಿ ದೀರ್ಘಕಾಲ ಪ್ರಸಾರವಾದ ಕಾರ್ಯಕ್ರಮಗಳಲ್ಲಿ ಒಂದಾಗಿತ್ತು. ದಿನೇಶ್ ಇದರಲ್ಲಿ ಫ್ರೆಡೆರಿಕ್ಸ್ ಪಾತ್ರವನ್ನು ನಿರ್ವಹಿಸಿದ್ದರು. ಪ್ರೇಕ್ಷಕರು ಈ ಪಾತ್ರವನ್ನು ಬಹುವಾಗಿ ಮೆಚ್ಚಿಕೊಂಡಿದ್ದರು.

ನಟನೆ ಜತೆಗೆ ದಿನೇಶ್‌ ಕೆಲವು ಕಂತುಗಳನ್ನು ಸಹ ಬರೆದಿದ್ದರು. ಅವರು ಮತ್ತೊಂದು ದೀರ್ಘಕಾಲದ ಶೋ ʼತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾʼದಲ್ಲಿ ಸಿಐಡಿಯ ಪಾತ್ರದಲ್ಲಿ ಅತಿಥಿಯಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ ʼಸರ್ಫರೋಶ್ʼ ಮತ್ತು ʼಸೂಪರ್ 30ʼ ಚಿತ್ರಗಳಲ್ಲಿಯೂ ಅಭಿನಯಿಸಿದ್ದರು. ಜತೆಗೆ ಅವರು ಮರಾಠಿ ಚಿತ್ರಕ್ಕೂ ಕಥೆ ಬರೆದಿದ್ದಾರೆ.

ಇದನ್ನೂ ಓದಿ: Thug Life Movie: ಕಮಲ್ ಹಾಸನ್ ಸಿನಿಮಾದಲ್ಲಿ ಎಂಟ್ರಿ ಕೊಟ್ಟ ಗೌತಮ್ ಕಾರ್ತಿಕ್!

ದಿನೇಶ್ ಫಡ್ನಿಸ್ ಅನಾರೋಗ್ಯದ ಕುರಿತು ಮಾತನಾಡಿದ್ದ ಸಹನಟ ದಯಾನಂದ ಶೆಟ್ಟಿ, ʼʼಫಡ್ನಿಸ್ ಅವರಿಗೆ ಹೃದಯಾಘಾತವಾಗಿಲ್ಲʼʼ ಎಂದು ಹೇಳಿದ್ದರು. “ದಿನೇಶ್ ಫಡ್ನಿಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೆಂಟಿಲೇಟರ್‌ನಲ್ಲಿ ವೈದ್ಯರು ಅವರ ನಿಗಾವಹಿಸುತ್ತಿದ್ದಾರೆ. ಅವರಿಗೆ ಹೃದಯಾಘಾತವಾಗಿಲ್ಲ, ಅವರಿಗೆ ಈಗ ಕೊಡುತ್ತಿರುವುದು ಬೇರೆ ಚಿಕಿತ್ಸೆʼʼ ಎಂದು ಅವರು ಹೇಳಿದ್ದರು. ಸಿಐಡಿ ಧಾರಾವಾಹಿಯಲ್ಲಿ ಇನ್ಸ್‌ಪೆಕ್ಟರ್‌ ದಯಾ ಪಾತ್ರವನ್ನು ದಯಾನಂದ ಶೆಟ್ಟಿ ನಿರ್ವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕಿರುತೆರೆ

Jhalak Dikhhla Jaa 11: `ಝಲಕ್ ದಿಖ್ಲಾ ಜಾ ಸೀಸನ್ 11′ ರ ವಿಜೇತರಾಗಿ ಹೊರಹೊಮ್ಮಿದ ಮನೀಷಾ ರಾಣಿ!

Jhalak Dikhhla Jaa 11: ವಿನ್ನರ್‌ಗೆ 30 ಲಕ್ಷ ರೂ, ನಗದು ಹಣ ಸಿಕ್ಕಿದೆ. ಮನೀಷಾ ರಾಣಿ ಅವರ ನೃತ್ಯ ಸಂಯೋಜಕ ಅಶುತೋಷ್ ಪವಾರ್ ಅವರೂ 10 ಲಕ್ಷ ರೂ. ನಗದು ಬಹುಮಾನ ಪಡೆದಿದ್ದಾರೆ. ಹಿಂದಿಯ ಬಿಗ್‌ ಬಾಸ್‌ ಒಟಿಟಿ ಸೀಸನ್‌ 2 ಮೂಲಕ ಜನಪ್ರೀಯತೆ ಪಡೆದುಕೊಂಡಿದ್ದರು ಮನೀಷಾ ರಾಣಿ.

VISTARANEWS.COM


on

Manisha Rani wins Jhalak Dikhhla Jaa 11
Koo

ಹಿಂದಿಯ ಜನಪ್ರಿಯ ಡ್ಯಾನ್ಸ್‌ ರಿಯಾಲಿಟಿ ಶೋ `ಝಲಕ್ ದಿಖ್ಲಾ ಜಾ ಸೀಸನ್ 11′ ರಲ್ಲಿ (Jhalak Dikhhla Jaa 11) ಮನೀಷಾ ರಾಣಿ ವಿಜೇತರಾದರು. ವಿನ್ನರ್‌ಗೆ 30 ಲಕ್ಷ ರೂ, ನಗದು ಹಣ ಸಿಕ್ಕಿದೆ. ಮನೀಷಾ ರಾಣಿ ಅವರ ನೃತ್ಯ ಸಂಯೋಜಕ ಅಶುತೋಷ್ ಪವಾರ್ ಅವರೂ 10 ಲಕ್ಷ ರೂ. ನಗದು ಬಹುಮಾನ ಪಡೆದಿದ್ದಾರೆ. ಹಿಂದಿಯ ಬಿಗ್‌ ಬಾಸ್‌ ಒಟಿಟಿ ಸೀಸನ್‌ 2 ಮೂಲಕ ಜನಪ್ರೀಯತೆ ಪಡೆದುಕೊಂಡಿದ್ದರು ಮನೀಷಾ ರಾಣಿ.

‘ರುಲಕ್‌ ದಿಖ್ಲಾ ಜಾ’ ಫೈನಾಲಿಸ್ಟ್‌ ಆಗಿ ಐವರು ಸ್ಪರ್ಧಿಗಳಿದ್ದರು. ಜನಪ್ರಿಯ ಟಿವಿ ನಟ ಶೋಯೆಬ್‌ ಇಬ್ರಾಹಿಂ, ಹಿನ್ನೆಲೆ ಗಾಯಕ ಮತ್ತು ʻಇಂಡಿಯನ್‌ ಐಡಲ್‌ 5′ ವಿಜೇತ ಶ್ರೀರಾಮ ಚಂದ್ರ, ನಟ ಅದ್ರಿಜಾ ಸಿನ್ಹಾ ಮತ್ತು ಕ್ರಿಕೆಟಿಗ ಯುಜ್ವೇಂದ್ರ ಚಹಾಲ್‌ ಅವರ ಪತ್ನಿ ಮತ್ತು ಸಾಮಾಜಿಕ ಜಾಲತಾಣದ ಪ್ರಭಾವಿ ಧನಶ್ರೀ ವರ್ಮಾ ಪೈನಲಿಸ್ಟ್‌ ಆಗಿದ್ದರು. ಕಾರ್ಯಕ್ರಮದಲ್ಲಿ ಮನೀಷಾ ರಾಣಿ ಮತ್ತು ಧನಶ್ರೀ ಇಬ್ಬರೂ ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿದ್ದರು. ವೀಕ್ಷಕರ ವೋಟಿಂಗ್‌ ಆಧಾರದಲ್ಲಿ ಮನೀಷಾ ರಾಣಿ ಹೆಚ್ಚು ಮತವನ್ನು ಪಡೆದಿದ್ದಾರೆ.

ಮನೀಷಾ ರಾಣಿ ತಮ್ಮ ಈ ಪ್ರಯಾಣದ ಬಗ್ಗೆ ಮಾತನಾಡಿ “ನನ್ನ ಕನಸು ನನಸಾಗಿದೆ. ತೀರ್ಪುಗಾರರು ಮತ್ತು ಪ್ರೇಕ್ಷಕರ ಪ್ರೀತಿ, ಬೆಂಬಲ ಮತ್ತು ಪ್ರೋತ್ಸಾಹಕ್ಕೆ ನಾನು ಋಣಿಯಾಗಿದ್ದೇನೆ. ಈ ಜರ್ನಿ ನನ್ನ ಜೀವನವನ್ನು ಬದಲಾಯಿಸಿದೆ. ವೈಲ್ಡ್‌ಕಾರ್ಡ್ ಎಂಟ್ರಿ ಕೊಟ್ಟು ನನ್ನನ್ನು ಸಾಬೀತುಪಡಿಸಲು ನಾನು ಎರಡು ಪಟ್ಟು ಹೆಚ್ಚು ಕೆಲಸ ಮಾಡಬೇಕಾಗಿತ್ತು. ಈಗ ನಿಜವಾಗಿಯೂ ಆಗಿದೆ. ಅಶುತೋಷ್ ಅವರಿಗೆ ನಾನು ಆಭಾರಿಯಾಗಿದ್ದೇನೆ. ಈ ಗೆಲುವು ನನ್ನದಲ್ಲ. ಇದು ನನ್ನನ್ನು ನಂಬಿದ ಪ್ರತಿಯೊಬ್ಬರಿಗೂ ಸೇರಿದೆʼʼ ಎಂದರು.

ಇದನ್ನೂ ಓದಿ: Mahesh Babu: ಮಹೇಶ್ ಬಾಬು-ರಾಜಮೌಳಿ ಸಿನಿಮಾ ಮುಹೂರ್ತ ಎಲ್ಲಿ? ಯಾವಾಗ?

ಸೋನಿ ಟೆಲಿವಿಷನ್‌ನಲ್ಲಿ ಶನಿವಾರ ಅಂತಿಮ ಸಂಚಿಕೆ `ಝಲಕ್ ದಿಖ್ಲಾ ಜಾ ಸೀಸನ್ 11′ ಪ್ರಸಾರವಾಯಿತು. ʻಮರ್ಡರ್ ಮುಬಾರಕ್ʼ ಚಿತ್ರದ ತಾರಾ ಬಳಗ ಸಾರಾ ಅಲಿ ಖಾನ್, ವಿಜಯ್ ವರ್ಮಾ ಮತ್ತು ಸಂಜಯ್ ಕಪೂರ್ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದರು. ʻಝಲಕ್ ದಿಖ್ಲಾ ಜಾ ಸೀಸನ್‌ 11ʼರಲ್ಲಿ ಫರಾ ಖಾನ್, ಅರ್ಷದ್ ವಾರ್ಸಿ ಮತ್ತು ಮಲೈಕಾ ಅರೋರಾ ತೀರ್ಪುಗಾರರಾಗಿದ್ದರು. ಗೌಹರ್ ಖಾನ್ ಮತ್ತು ರಿತ್ವಿಕ್ ಧಂಜನಿ ಕಾರ್ಯಕ್ರಮದ ನಿರೂಪಕರಾಗಿದ್ದರು.

Continue Reading

ಕಿರುತೆರೆ

Nayana Nagaraj: ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡ ‘ಗಿಣಿರಾಮ’ ಖ್ಯಾತಿಯ ನಟಿ ನಯನ ನಾಗರಾಜ್

Nayana Nagaraj ಕುಟುಂಬಸ್ಥರ ಸಮ್ಮುಖದಲ್ಲಿ ನಯನ ನಾಗರಾಜ್ ಹಾಗೂ ಸುಹಾಸ್ ಶಿವಣ್ಣ ಉಂಗುರ ಬದಲಿಸಿಕೊಂಡಿದ್ದಾರೆ. ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನೆರವೇರಿದ್ದು, ಫೋಟೊ ಹಾಗೂ ವಿಡಿಯೊಗಳು ವೈರಲ್‌ ಆಗಿವೆ.

VISTARANEWS.COM


on

ginirama serial actress nayana nagaraj gets engaged to suhas shivanna
Koo

ಪಾಪ ಪಾಂಡು’ ಹಾಗೂ ‘ಗಿಣಿರಾಮ’ ಧಾರಾವಾಹಿಗಳಲ್ಲಿ ನಾಯಕಿಯಾಗಿ ಮಿಂಚಿದ ನಯನ ನಾಗರಾಜ್ (Nayana Nagaraj) ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ಉಂಗುರ ಬದಲಿಸಿಕೊಂಡ ಜೋಡಿ.

ದೀರ್ಘಕಾಲದ ಗೆಳೆಯ ಸುಹಾಸ್ ಶಿವಣ್ಣ ಅವರೊಂದಿಗೆ ನಯನ ನಾಗರಾಜ್ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Mahesh Babu: ಮಹೇಶ್ ಬಾಬು-ರಾಜಮೌಳಿ ಸಿನಿಮಾ ಮುಹೂರ್ತ ಎಲ್ಲಿ? ಯಾವಾಗ?

ಕುಟುಂಬಸ್ಥರ ಸಮ್ಮುಖದಲ್ಲಿ ನಯನ ನಾಗರಾಜ್ ಹಾಗೂ ಸುಹಾಸ್ ಶಿವಣ್ಣ ಉಂಗುರ ಬದಲಿಸಿಕೊಂಡಿದ್ದಾರೆ. ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನೆರವೇರಿದ್ದು, ಫೋಟೊ ಹಾಗೂ ವಿಡಿಯೊಗಳು ವೈರಲ್‌ ಆಗಿವೆ.

ಹತ್ತು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ನಯನ ನಾಗರಾಜ್ ಹಾಗೂ ಸುಹಾಸ್ ಶಿವಣ್ಣ .

Continue Reading

ಕಿರುತೆರೆ

Kannada Serials TRP: ‘ಲಕ್ಷ್ಮೀ ನಿವಾಸ’ಕ್ಕೆ ಮೊದಲ ಸ್ಥಾನ: ಟಾಪ್‌ 5ನಲ್ಲಿ ಇಲ್ಲ ʻಭಾಗ್ಯಲಕ್ಷ್ಮೀʼ!

Kannada Serials TRP:  ಟಾಪ್‌ 5ನಲ್ಲಿ ಕಲರ್ಸ್‌ ಕನ್ನಡದ ಒಂದೂ ಧಾರಾವಾಹಿ ಇಲ್ಲ. ಜೀ ಕನ್ನಡದಲ್ಲಿ ಇತ್ತೀಚೆಗೆ ಪ್ರಸಾರ ಆರಂಭಿಸಿದ ‘ಲಕ್ಷ್ಮೀ ನಿವಾಸ’ ಮೊದಲ ಸ್ಥಾನ ಪಡೆದು ಮುನ್ನುಗ್ಗುತ್ತಿದೆ.

VISTARANEWS.COM


on

Kannada Serials TRP Lakshmi Nivasa Serial
Koo

ಬೆಂಗಳೂರು: ಎಂಟನೇ ವಾರದ ಟಿಆರ್​ಪಿ ಲಿಸ್ಟ್ (Kannada Serials TRP)ರಿಲೀಸ್ ಆಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 10’ (BBk 10) ಪೂರ್ಣಗೊಂಡ ಬಳಿಕ ಕಲರ್ಸ್ ಕನ್ನಡದಲ್ಲಿ ಕೆಲವು ಧಾರಾವಾಹಿಗಳು ಪ್ರಾರಂಭ ಆದವು. ಆದರೆ ಟಾಪ್‌ 5ನಲ್ಲಿ ಕಲರ್ಸ್‌ ಕನ್ನಡದ ಒಂದು ಧಾರಾವಾಹಿಗಳೂ ಇಲ್ಲ. ಜೀ ಕನ್ನಡದಲ್ಲಿ ಇತ್ತೀಚೆಗೆ ಪ್ರಸಾರ ಆರಂಭಿಸಿದ ‘ಲಕ್ಷ್ಮೀ ನಿವಾಸ’ ಮೊದಲ ಸ್ಥಾನ ಪಡೆದು ಮುನ್ನುಗ್ಗುತ್ತಿದೆ.

ಲಕ್ಷ್ಮೀ ನಿವಾಸ

ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು ಎನ್ನುವ ಮಾತನ್ನೇ ಎಳೆಯಾಗಿಟ್ಟುಕೊಂಡು ಕಥೆಯನ್ನು ಹೆಣೆದಿರುವ ಜೀ ಕನ್ನಡ ವಾಹಿನಿಯ ಹೊಸ ಧಾರಾವಾಹಿ ‘ಲಕ್ಷ್ಮೀ ನಿವಾಸ’ ಕರುನಾಡಿನ ಮನೆಮನಗಳಿಗೆ ಪ್ರವೇಶ ಮಾಡಿದ್ದಾಗಿದೆ. ನಗರ ಭಾಗದ ಟಿಆರ್​ಪಿ ಪರಿಗಣಿಸಿದರೆ ಮೊದಲ ಸ್ಥಾನದಲ್ಲಿ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ಹೊಸ ಧಾರಾವಾಹಿ ‘ಲಕ್ಷ್ಮಿ ನಿವಾಸ’ ಇದೆ. ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ ಇರಲಿದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಸದ್ಯ ಜಾಹ್ನವಿಯನ್ನು ವಿಶ್ವ ಮನಸಾರೆ ಪ್ರೀತಿ ಮಾಡುತ್ತಾ ಇದ್ದರೂ ವಿಶ್ವನಿಗೆ ವಿಲನ್ ಆಗಿ ಜಯಂತ್ ಬಂದಾಗಿದೆ. ಆದರೂ ಜಾಹ್ನವಿಗೆ ವಿಶ್ವನೇ ಜೋಡಿ ಎನ್ನುತ್ತಿದ್ದಾರೆ ವೀಕ್ಷಕರು. ಇದೀಗ ಈ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.ಈ ಧಾರಾವಾಹಿ ನಗರ ಹಾಗೂ ರಾಜ್ಯದ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದು ಮುನ್ನುಗ್ಗುತ್ತಿದೆ.

ಇದನ್ನೂ ಓದಿ: Kannada Serials TRP: ಭರ್ಜರಿ ಟಿಆರ್‌ಪಿ ಕಂಡ ʻಬಿಗ್‌ ಬಾಸ್‌ʼ ಫಿನಾಲೆ; ʻಲಕ್ಷ್ಮೀ ನಿವಾಸʼ ಧಾರಾವಾಹಿಯದ್ದೇ ಹವಾ!

ಪುಟ್ಟಕ್ಕನ ಮಕ್ಕಳು

ಪುಟ್ಟಕ್ಕನ ಮಕ್ಕಳು ಧಾರಾವಾಹಿ ಶುರುವಾಗಿ ಎರಡು ವರ್ಷಗಳು ಸಂದಿದೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಲಕ್ಷ್ಮೀ ನಿವಾಸ’ ಧಾರಾವಾಹಿ ಆರಂಭಕ್ಕೂ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಕಾಯ್ದುಕೊಂಡು ಬಂದಿತ್ತು. ಈಗ ಧಾರಾವಾಹಿಗೆ ಎರಡನೇ ಸ್ಥಾನ ಸಿಕ್ಕಿದೆ. ಇತ್ತೀಚೆಗೆ ಟಿಆರ್​ಪಿ ಕಡಿಮೆ ಆಗಿದೆ.ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಶ್ರೀರಸ್ತು ಶುಭಮಸ್ತು

ಸುಧಾರಾಣಿ ಅವರು ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಲ್ಲಿ ಸೊಸೆಯ ಪಾತ್ರ ನಿರ್ವಹಿಸುತ್ತಿದ್ದಾರೆ. ಶ್ರೀರಸ್ತು ಶುಭಮಸ್ತು’ ಧಾರಾವಾಹಿ ಕೂಡ ಸಮಾನ ಟಿಆರ್​ಪಿ ಪಡೆದು ಎರಡನೇ ಸ್ಥಾನದಲ್ಲಿ ಇದೆ. ತುಳಸಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಮಾಧವನ ಎರಡನೇ ಮಗ ಅಭಿಯ ಮದುವೆ ನೆರವೇರಿದೆ. ಮಾಧವನ ವಿರುದ್ಧ.. ತುಳಸಿ ಮುಗ್ಧತೆಯನ್ನೇ ದಾಳವಾಗಿಸಿಕೊಳ್ಳುತ್ತಿದ್ದಾಳೆ ಸೊಸೆ ದೀಪಿಕಾ. ಈ ಧಾರಾವಾಹಿ ಮೂರನೇ ಸ್ಥಾನದಲ್ಲಿ ಇದೆ.  ಜೀ ವಾಹಿನಿಯಲ್ಲಿ ಧಾರಾವಾಹಿ ಪ್ರಸಾರ ಕಾಣುತ್ತಿದೆ.

‘ಸೀತಾ ರಾಮ’

‘ಬಿಗ್ ಬಾಸ್’ ಪ್ರಸಾರ ಕಾಣುತ್ತಿತ್ತು. ಈ ಕಾರಣಕ್ಕೆ ‘ಸಿತಾ ರಾಮ’ ಧಾರಾವಾಹಿಗೆ ಟಿಆರ್​ಪಿ ಕಡಿಮೆ ಆಗಿತ್ತು. ಈಗ ವೀಕ್ಷಕರು ಮರಳಿದ್ದಾರೆ. ಈ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ.ಸೀತಾ ರಾಮ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಈಗ ಬಿಗ್ ಬಾಸ್ ಪೂರ್ಣಗೊಂಡ ಬಳಿಕ ಧಾರಾವಾಹಿ ವೀಕ್ಷಕರ ಸಂಖ್ಯೆ ಹೆಚ್ಚಿದೆ. ಈ ಧಾರಾವಾಹಿಗೆ ನಾಲ್ಕನೇ ಸ್ಥಾನ ಸಿಕ್ಕಿದೆ.

ಅಮೃತಧಾರೆ

‘ಅಮೃತಧಾರೆ’ ಧಾರಾವಾಹಿ ಸಾಕಷ್ಟು ಟ್ವಿಸ್ಟ್​ಗಳನ್ನು ಪಡೆದು ಸಾಗುತ್ತಿದೆ. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರ ಕಾಂಬಿನೇಷನ್ ಜನರಿಗೆ ಇಷ್ಟ ಆಗಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಐದನೇ ಸ್ಥಾನದಲ್ಲಿ ಇದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

Continue Reading

ಕ್ರೀಡೆ

TPL 3: ಹುಬ್ಬಳ್ಳಿಯಲ್ಲಿ ಟಿಪಿಎಲ್ ಸೀಸನ್-3 ಶುಭಾರಂಭ

ಹುಬ್ಬಳ್ಳಿಯ ರಾಜನಗರದ ಕೆಎಸ್ಸಿಎ ಕ್ರೀಡಾಂಗಣದಲ್ಲಿ
TPL3 : ಪಂದ್ಯ ನಡೆಯುತ್ತಿದ್ದು, ಮೊದಲ ದಿನ ನಡೆದ ಪಂದ್ಯದಲ್ಲಿ ಅಶ್ವಸೂರ್ಯ ರೈಡರ್ಸ್ ಹಾಗೂ ಜಿಎಲ್ ಆರ್ ವಾರಿಯರ್ಸ್ ಹಾಗೂ ರಾಸು ತಂಡಗಳು ಜಯಗಳಿಸಿವೆ.

VISTARANEWS.COM


on

TPL
Koo

ಹುಬ್ಬಳ್ಳಿ: ಟಿಪಿಎಲ್ ಮೂರನೇ ಸೀಸನ್ ಗೆ (TPL 3) ಅಧಿಕೃತ ಚಾಲನೆ ಸಿಕ್ಕಿದೆ. ಹುಬ್ಬಳ್ಳಿ ಕೆ.ಎಸ್.ಸಿ.ಎ ಮೈದಾನದಲ್ಲಿ ಫೆಬ್ರುವರಿ 29ರಿಂದ ಪಂದ್ಯಾವಳಿಗಳು ಪ್ರಾರಂಭವಾಗಿವೆ. ಕಲಾವಿದರು ಮತ್ತು ತಂತ್ರಜ್ಞರ ಬದುಕಿಗೆ ಆಸರೆಯಾಗುವ ಉದ್ದೇಶದಿಂದ N1 ಕ್ರಿಕೆಟ್ ಅಕಾಡೆಮಿಯ ಬಿಆರ್ ಸುನಿಲ್ ಕುಮಾರ್ ಕಳೆದ ಎರಡು ವರ್ಷಗಳಿಂದ ಟೆಲಿವಿಷನ್ ಪ್ರೀಮಿಯರ್ ಲೀಗ್ ನಡೆಸುತ್ತಾ ಬಂದಿದ್ದಾರೆ. ಫೆಬ್ರವರಿ 29ರಿಂದ ಮೂರನೇ ಸೀಸನ್ ಶುರುವಾಗಿದ್ದು, ಮಾರ್ಚ್ 3 ರವರೆಗೆ ಟೆಲಿವಿಷನ್ ಪ್ರೀಮಿಯರ್ ಲೀಗ್ ನಡೆಯಲಿದೆ.

ಹುಬ್ಬಳ್ಳಿಯ ರಾಜನಗರದ ಕೆಎಸ್ಸಿಎ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು, ಮೊದಲ ದಿನ ನಡೆದ ಪಂದ್ಯದಲ್ಲಿ ಅಶ್ವಸೂರ್ಯ ರೈಡರ್ಸ್ ಹಾಗೂ ಜಿಎಲ್ ಆರ್ ವಾರಿಯರ್ಸ್ ಹಾಗೂ ರಾಸು ತಂಡಗಳು ಜಯಗಳಿಸಿವೆ.

ಯಾವ ಯಾವ ತಂಡಗಳು ಭಾಗಿ?

ಅಶ್ವಸೂರ್ಯ ರೈಡರ್ಸ್, ಗೋಲ್ಡನ್ ಈಗಲ್, ಕೆಕೆಆರ್ ಮೀಡಿಯಾ ಹೌಸ್, ಬಯೋಟಾಪ್ ಲೈಫ್ ಸೆವಿಯರ್, AVR ಟಸ್ಕರ್ಸ್, ರಾಸು ವಾರಿಯರ್, ಭಜರಂಗಿ ಬಾಯ್ಸ್, ದಿ ಬುಲ್ ಸ್ಕ್ವಾಡ್, ಇನ್ಸೇನ್ ಕ್ರಿಕೆಟ್ ಟೀಂ, ಜಿಎಲ್ಆರ್ ವಾರಿಯರ್ಸ್ ಸೇರಿದಂತೆ ಒಟ್ಟು 10 ಟೀಮ್ ಗಳು ಭಾಗವಹಿಸಿದ್ದು, 170 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಟ್ಟಿದ್ದಾರೆ. ಈ 10 ತಂಡಗಳಿಗೂ ಅಂಬಾಸಿಡರ್ ಹಾಗೂ ಓನರ್ಗಳಿರಲಿದ್ದಾರೆ. ಎವಿಆರ್ ಗ್ರೂಪ್ಸ್ನ ಹೆಚ್ ವೆಂಕಟೇಶ್ ರೆಡ್ಡಿ ಹಾಗೂ ಅರವಿಂದ್ ವೆಂಕಟೇಶ್ ರೆಡ್ಡಿ ಟೈಟಲ್ ಸ್ಪಾನ್ಸರ್ ಮಾಡಿದ್ದಾರೆ.

ಇದನ್ನೂ ಓದಿ : WPL 2024 : ಡೆಲ್ಲಿ ತಂಡಕ್ಕೆ ತಲೆಬಾಗಿದ ಆರ್​ಸಿಬಿ, ಅಂಕಪಟ್ಟಿಯಲ್ಲಿ ಕುಸಿತ

ಅಶ್ವಸೂರ್ಯ ರೈಡರ್ಸ್ ತಂಡಕ್ಕೆ ಹರ್ಷ ಸಿಎಂ ಗೌಡ ನಾಯಕ. ರಂಜಿತ್ ಕುಮಾರ್ ಎಸ್ ಓನರ್, ಜಿಎಲ್ಆರ್ ವಾರಿಯರ್ಸ್ ಟೀಂಗೆ ಲೂಸ್ ಮಾದ ಯೋಗಿ ನಾಯಕನಾದರೆ ರಾಜೇಶ್ ಎಲ್ ಓನರ್, ಇನ್ಸೇನ್ ಕ್ರಿಕೆಟ್ ಟೀಂಗೆ ರವಿಶಂಕರ್ ಗೌಡ ನಾಯಕ-ಫೈಜಾನ್ ಖಾನ್ ಓನರ್, ದಿ ಬುಲ್ ಸ್ಕ್ವಾಡ್ ತಂಡಕ್ಕೆ ಶರತ್ ಪದ್ಮನಾಭ್ ನಾಯಕ-ಮೋನಿಶ್ ಓನರ್, ಭಜರಂಗಿ ಬಾಯ್ಸ್ ಟೀಂಗೆ ಸಾಗರ್ ಬಿಳಿಗೌಡ ನಾಯಕ- ಸ್ವಸ್ತಿಕ್ ಆರ್ಯ ಓನರ್, ರಾಸು ವಾರಿಯರ್ಸ್ ಟೀಂಗೆ ದೀಕ್ಷಿತ್ ಶೆಟ್ಟಿ ನಾಯಕ-ರಘು ಭಟ್ ಹಾಗೂ ಸುಗುಣ ಓನರ್, ಎವಿಆರ್ ಟಸ್ಕರ್ಸ್ಗೆ ಚೇತನ್ ಸೂರ್ಯ ನಾಯಕ – ಅರವಿಂದ್ ವೆಂಕಟ್ ರೆಡ್ಡಿ ಓನರ್, ಬಯೋಟಾಪ್ ಲೈಫ್ ಸೆವಿಯರ್ ಅಲಕಾ ನಂದ ಶ್ರೀನಿವಾಸ್ ನಾಯಕ-ವಿಶ್ವನಾಥ್, ಪ್ರಸನ್ನ ಓನರ್, ಕೆಕೆಆರ್ ಮೀಡಿಯಾ ಹೌಸ್ ಗೆ ಅರುಣ್ ರಾಮ್ ಗೌಡ ನಾಯಕ-ಲಕ್ಷ್ಮೀ ಕಾಂತ್ ರೆಡ್ಡಿ ಓನರ್, ಗೋಲ್ಡನ್ ಈಗಲ್ ವಿಹಾನ್ ನಾಯಕ-ಕುಶಾಲ್ ಗೌಡ ಒಡೆತನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಟಿಪಿಎಲ್ ರಾಯಭಾರಿಯಾಗಿ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಇದ್ದು, ಪ್ರಮುಖ ನಟರಾದ ಲೂಸ್ ಮಾದ ಯೋಗಿ, ರವಿಶಂಕರ್ ಗೌಡ ಟಿಪಿಎಲ್ 3 ನಲ್ಲಿ ಆಡುತ್ತಿರುವುದು ವಿಶೇಷ..

Continue Reading
Advertisement
Shehbaz Shariff
ಪ್ರಮುಖ ಸುದ್ದಿ1 min ago

Pakistan Prime Minster : ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಆಯ್ಕೆ

Nathan Lyon
ಕ್ರೀಡೆ11 mins ago

Nathan Lyon: ಬ್ಯಾಟಿಂಗ್​ನಲ್ಲಿ ವಿಶ್ವ ದಾಖಲೆ ಬರೆದ ಬೌಲರ್​ ನಥಾನ್​ ಲಿಯೋನ್

Murder Case Son kills Mother
ಕ್ರೈಂ12 mins ago

Murder Case: ಹಣಕ್ಕಾಗಿ ತಾಯಿಯನ್ನೇ ಪೀಡಿಸುತ್ತಿದ್ದ ಧೂರ್ತ; ಕೊನೆಗೆ ಅಮ್ಮನ ಕೊಂದು ತಾನೂ ಸತ್ತ

Murder Case _ Shootout
ಉಡುಪಿ23 mins ago

Murder Case : ಒಂಟಿ ಮನೆಯಲ್ಲಿ ಫೈರಿಂಗ್‌ ಸೌಂಡ್‌, ನಿಗೂಢವಾಗಿ ಕೊಲೆ ಮಾಡಿ ಹೋದವರು ಯಾರು?

Pawan Singh
ಪ್ರಮುಖ ಸುದ್ದಿ30 mins ago

BJP candidate list : ಬಿಜೆಪಿ ಟಿಕೆಟ್ ತಿರಸ್ಕರಿಸಿದ ಭೋಜಪುರಿ ಗಾಯಕ ಪವನ್ ಸಿಂಗ್​

Mother attack to child
ಬೆಂಗಳೂರು59 mins ago

Bengaluru News : ಛೇ.. ಇವಳೆಂಥಾ ತಾಯಿ? ಬುದ್ಧಿ ಕಲಿಸಲು 3 ವರ್ಷದ ಮಗುವನ್ನು ಕೂಡಿಹಾಕಿದ್ದಳಂತೆ!

Robin Minz
ಪ್ರಮುಖ ಸುದ್ದಿ1 hour ago

Accident News : 3.6 ಕೋಟಿ ರೂ. ಪಡೆದ ಬುಡಕಟ್ಟು ಸಮುದಾಯದ ಐಪಿಎಲ್ ಆಟಗಾರನಿಗೆ ಬೈಕ್ ಅವಘಡದಲ್ಲಿ ಗಾಯ

Elephant Attack New
ಕೊಡಗು1 hour ago

Elephant Attack : ನಿಶಾನಿ ಬೆಟ್ಟದಲ್ಲಿ ಆನೆ ದಾಳಿಗೆ ವೃದ್ಧ ಬಲಿ; ಟ್ರೆಕಿಂಗ್‌ಗೆ ಹೋದವರಿಗೆ ಕಂಡಿತು ಶವ

Yuva Rajkumar And Shiva Rajkumar Dance Together obbane shiva song
ಸ್ಯಾಂಡಲ್ ವುಡ್1 hour ago

Yuva Movie: ಡ್ಯಾನ್ಸ್ ಮೂವ್ಸ್‌ನಲ್ಲಿ ಕಿಚ್ಚು ಹಚ್ಚಿದ ದೊಡ್ಮನೆ ಕುಡಿಗಳು: ಯಾರು ಬೆಸ್ಟ್?

Team India
ಕ್ರೀಡೆ1 hour ago

WTC Ranking : ಭಾರತ ತಂಡವೀಗ ನಂಬರ್​ 1

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

read your daily horoscope predictions for march 3rd 2024
ಭವಿಷ್ಯ10 hours ago

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Rameswaram cafe bomb blast case Accused caught on CCTV
ಬೆಂಗಳೂರು22 hours ago

Blast In Bengaluru: ಸನ್ನೆ ಮಾಡಿ ಪೊಲೀಸರಿಗೆ ಶಂಕಿತನ ಚಾಲೆಂಜ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಏನು

Rameswaram Cafe Blast Suspected travels in BMTC Volvo bus
ಬೆಂಗಳೂರು1 day ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು2 days ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು2 days ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ2 days ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ2 days ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

dina bhavishya read your daily horoscope predictions for February 28 2024
ಭವಿಷ್ಯ3 days ago

Dina Bhavishya: ಇಂದು 12 ರಾಶಿಯವರ ಲಕ್ಕಿ ನಂಬರ್‌ ಏನು? ಯಾರಿಗೆ ಧನ ಲಾಭ?

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಮುಕ್ತಿ ಪಡೆಯುವಿರಿ

Rajya Sabha election Pakistan Zindabad slogans raised inside Vidhana Soudha by Nasir Hussain supporters
ರಾಜಕೀಯ5 days ago

ವಿಧಾನಸೌಧದೊಳಗೇ ಪಾಕಿಸ್ತಾನ ಜಿಂದಾಬಾದ್‌ ಘೋಷಣೆ; ನಾಸಿರ್‌ ಹುಸೇನ್‌ ಬೆಂಬಲಿಗ ದೇಶದ್ರೋಹಿಗಳ ಉದ್ಧಟತನ

ಟ್ರೆಂಡಿಂಗ್‌