ಬೆಂಗಳೂರು: ಕರ್ನಾಟಕ ಚಲನಚಿತ್ರ ಪೋಷಕರ ಸಂಘದ ಅಧ್ಯಕ್ಷ ಡಿಂಗ್ರಿ ನಾಗರಾಜ್ (Dingri Nagaraj) ಹಾಗೂ ಪ್ರಧಾನ ಕಾರ್ಯದರ್ಶಿ ಆಡುಗೋಡಿ ಶ್ರೀನಿವಾಸ್, ಖಚಾಂಚಿ ಸುರೇಶ್ ಅವರು ಸೊಂಟದ ಕೆಳಗಿನ ಮಾತುಗಳನ್ನಾಡುತ್ತಾರೆ ಎಂದು ಕನ್ನಡ ಚಿತ್ರರಂಗದ ಪೋಷಕ ಕಲಾವಿದೆ ರಾಣಿ ಆರೋಪ ಮಾಡಿದ್ದಾರೆ.
ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು ನಟ ಡಿಂಗ್ರಿ ನಾಗರಾಜ್, ಆಡುಗೋಡಿ ಶ್ರೀನಿವಾಸ್ ಅವರು ಅಸಭ್ಯ, ಅಶ್ಲೀಲ ಮೆಸೇಜ್‌ಗಳನ್ನು ಕಳಿಸುತ್ತಿದ್ದಾರೆ ಎಂದೂ ಆಪಾದಿಸಿದರು.
ʻʻಡಿಂಗ್ರಿ ನಾಗರಾಜ್ ಅವರು ಪೋಷಕ ಕಲಾವಿದರ ಸಂಘದ ಅಧ್ಯಕ್ಷರಾಗಿ ಮೋಸ ಮಾಡುತ್ತಿದ್ದಾರೆ. ಸಂಘದಲ್ಲಿ ಆಗುಹೋಗುಗಳ ಬಗ್ಗೆ ಮಾಹಿತಿ ನೀಡುವುದಿಲ್ಲ. ಅವರಿಗೆ ಇಷ್ಟ ಬಂದ ಹಾಗೆ ನಿರ್ಧಾರ ತಗೆದುಕೊಳ್ಳುತ್ತಾರೆ. ಏಕವಚನದಲ್ಲಿ ಮಾತನಾಡಿಸುತ್ತಾರೆ. ಮಹಿಳೆಯರಿಗೆ ಅಗೌರವ ತೋರಿ ಮಾತಾಡಿದ್ದಾರೆ. ಕೆಲವೊಮ್ಮೆ ಅಶ್ಲೀಲ ವಿಡಿಯೊ ಕಳುಹಿಸುತ್ತಿದ್ದರು. ಆ ವಿಚಾರವಾಗಿ ಈ ಹಿಂದೆ ಗಲಾಟೆಯೂ ಆಗಿದೆ. ಹಣಕಾಸಿನ ದುರುಪಯೋಗ ಜತೆಗೆ ಅವಾಚ್ಯ ಶಬ್ದಗಳ ನಿಂದನೆ ಮಾಡಿದ್ದಾರೆ. ಉಪಾಧ್ಯಕ್ಷೆ ಸ್ಥಾನದಿಂದ ಏಕಾಏಕಿ ನನ್ನನ್ನು ಉಚ್ಚಾಟನೆ ಮಾಡಿದ್ದಾರೆ. ಅವರು ಕಳುಹಿಸಿರುವ ಅಶ್ಲೀಲ ವಿಡಿಯೊ ಡಿಲೀಟ್ ಆಗಿದೆ. ಇದರಲ್ಲಿ ಆಡುಗೋಡಿ ಶ್ರೀನಿವಾಸ್ ಅವರ ಕೈವಾಡ ಕೂಡ ಇದೆʼʼ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ | Operation Meghchakra | ಮಕ್ಕಳ ಅಶ್ಲೀಲ ವಿಡಿಯೊ ಹಂಚಿಕೆ ಜಾಲ ಭೇದಿಸಿದ ಸಿಬಿಐ, 20 ರಾಜ್ಯದಲ್ಲಿ ದಾಳಿ
ಈ ಬಗ್ಗೆ ಡಿಂಗ್ರಿ ನಾಗರಾಜ್ ಪ್ರತಿಕ್ರಿಯೆ ನೀಡಿದ್ದು ʻʻರಾಣಿ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇವೆ. ರಾಣಿ ಮಾಡಿರುವ ಆರೋಪ ಎಲ್ಲವೂ ಸುಳ್ಳು. ಪೋಷಕ ಕಲಾವಿದರ ಸಂಘದ ಹಣ ದುರುಪಯೋಗ ಮಾಡಿಲ್ಲ. ಸಂಘದ ಆವರಣದಲ್ಲಿ ವೈಯಕ್ತಿಕ ಗಲಾಟೆ ಶುರು ಮಾಡಿದ್ದಾರೆ. ಹಾಗಾಗಿ ಅವರನ್ನು ಉಚ್ಚಾಟನೆ ಮಾಡಿದ್ದೇವೆ. ಅಶ್ಲೀಲ ವಿಡಿಯೊ ಕಳುಹಿಸಿರುವುದು ಸುಳ್ಳು ಮಾಹಿತಿʼʼ ಎಂದು ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ | Yogaraj Bhat | ʻನೀನು ಬೆಳೆಯೋ ಮಗ ಅಲ್ಲʼ: ಜೀ ಟಿವಿಯ ಹುಣಸೂರ್‌ಗೆ ಯೋಗರಾಜ್ ಭಟ್ ಅವಾಚ್ಯ ಬೈಗುಳ!