ಬೆಂಗಳೂರು: ಬಿಗ್‌ಬಾಸ್ ಜೋಡಿ ದಿವ್ಯಾ ಉರುಡುಗ (Divya Uruduga) ಹಾಗೂ ಬೈಕ್ ರೇಸರ್ ಅರವಿಂದ್ ಕೆಪಿ (aravind kp). ಬೆಳ್ಳಿತೆರೆಯ ಮೇಲೆ ಯುವ ಪ್ರೇಮಿಗಳಾಗಿ ಕಾಣಿಸಿಕೊಳ್ಳುತ್ತಿರುವುದು ಗೊತ್ತಿರುವ ವಿಚಾರ. ಆದರೀಗ ಜೋಡಿ ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದೆ ಎನ್ನಲಾಗಿದೆ. ಇದೀಗ ಮದುವೆಯ ಆಮಂತ್ರಣ ಪತ್ರಿಕೆಗೆ ಪೂಜೆ ಮಾಡಿಸಿದ್ದಾರೆ. ವಿನಾಯಕನ ದೇವಸ್ಥಾನಕ್ಕೆ ಭೇಟಿ ಕೊಟ್ಟ ದಿವ್ಯಾ ಉರುಡುಗ ಹಾಗೂ ಅರವಿಂದ್, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವಿಡಿಯೊ ಕೂಡ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೆ ಇದು ಸಿನಿಮಾಗಾಗಿ ಜೋಡಿ ಮಾಡುತ್ತಿರುವ ಗಿಮಿಕ್ ಎಂತಲೂ ಹೇಳಲಾಗುತ್ತಿದೆ.
ಹುಲಿರಾಯ ಖ್ಯಾತಿಯ ಅರವಿಂದ್ ಕೌಶಿಕ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಅರ್ದಂಬರ್ದ’ ಪ್ರೇಮಕಥೆಯಲ್ಲಿ ಇವರೇ ನಾಯಕ ನಾಯಕಿ. ಈಗಾಗಲೇ ಸಿನಿಮಾ ಪ್ರಚಾರ ಕಾರ್ಯಗಳು ಭರದಿಂದ ಸಾಗುತ್ತಿದೆ. ಆದರೀಗ ಜೋಡಿ ಇದ್ದಕ್ಕಿದ್ದಂತೆ ದೇವಸ್ಥಾನಕ್ಕೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದೆ. ಅರ್ಧಂಬರ್ಧ ಪ್ರೇಮಕಥೆ ಸಿನಿಮಾ ರಿಲೀಸ್ಗೆ ರೆಡಿ ಇದೆ.ಇದರ ಮಧ್ಯೆ ತಮ್ಮ ಮದುವೆಗೆ ಎಲ್ಲ ರೀತಿಯಲ್ಲಿ ಸಿದ್ಧತೆ ನಡೆಸಿಕೊಳ್ಳುತ್ತಿದ್ದಾರೆ ಎಂತಲೂ ವರದಿಯಾಗಿದೆ. ಮದುವೆಯ ಆಮಂತ್ರಣ ಪತ್ರಿಕೆ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಜೋಡಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.
ಇದನ್ನೂ ಓದಿ: Divya Uruduga: `ಅರ್ಧಂಬರ್ಧ’ ವಿಚಾರ ಹೊರಹಾಕಿದ ʻಬಿಗ್ ಬಾಸ್ʼ ಖ್ಯಾತಿಯ ದಿವ್ಯಾ ಉರುಡುಗ;ಮದುವೆ ಯಾವಾಗ?
ಬಕ್ಸಾಸ್ ಮೀಡಿಯಾ, ಆರ್‌ಎಸಿ ವಿಷುವಲ್ಸ್ ಮತ್ತು ಲೈಟ್ಹೌಸ್ ಮೀಡಿಯಾದ ಸಹಕಾರದೊಂದಿಗೆ ಈ ಚಿತ್ರವನ್ನು ನಿರ್ಮಿಸಿದೆ. ಬಕ್ಸಸ್ ಪರವಾಗಿ ದಿವ್ಯಾ ಉತ್ತಪ್ಪ, ಲೈಟ್ ಹೌಸ್ ನ ಸಂತೋಷ್ ಉಪಸ್ಥಿತರಿದ್ದರು. ರ‍್ಯಾಪರ್ ಅಲೋಕ್, ಶ್ರೇಯಾ ಬಾಬು, ವೆಂಕಟಶಾಸ್ತ್ರಿ, ಪ್ರದೀಪ್ ರೋಷನ್, ಸೂರಜ್ ಹೂಗಾರ್, ಸುಜಿಶ್ ಶೆಟ್ಟಿ ಚಿತ್ರದ ಪ್ರಮುಖ ಪಾತ್ರಗಳಲ್ಲಿದ್ದಾರೆ. ಹಿರಿಯನಟ ದ್ವಾರಕೀಶ್ ಪುತ್ರ ಅಭಿಲಾಷ್ ವಿಶೇಷ ಪಾತ್ರದ ಮೂಲಕ 25 ವರ್ಷಗಳ ನಂತರ ನಟನೆಗೆ ಮರಳಿದ್ದಾರೆ. ಸೂರ್ಯ ಅವರ ಛಾಯಾಗ್ರಹಣ, ಶಿವರಾಜ್ ಮೇಹು ಅವರ ಸಂಕಲನ, ಸತೀಶ್ ಬ್ರಹ್ಮಾವರ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ.