Site icon Vistara News

Divya Uruduga: `ಅರ್ಧಂಬರ್ಧ’ ವಿಚಾರ ಹೊರಹಾಕಿದ ʻಬಿಗ್‌ ಬಾಸ್‌ʼ ಖ್ಯಾತಿಯ ದಿವ್ಯಾ ಉರುಡುಗ;ಮದುವೆ ಯಾವಾಗ?

Divya Uruduga aravind KP

ಬೆಂಗಳೂರು: ಬಿಗ್‌ಬಾಸ್ ಖ್ಯಾತಿಯ ಯುವಜೋಡಿ ಅರವಿಂದ್ ಕೆಪಿ (aravind kp) ಮತ್ತು ದಿವ್ಯಾ ಉರುಡುಗ (Divya Uruduga) ಈಗ ತೆರೆಯ ಮೇಲೂ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸುದ್ದಿ ಬೆನ್ನಲ್ಲೇ ನಟಿ ದಿವ್ಯಾ ಉರುಡುಗ ರೇಷ್ಮೆ ಸೀರೆ, ಮಲ್ಲಿಗೆ ಹೂ ಮುಡಿದು ಮದುಮಗಳ ಹಾಗೆ ಕಂಗೊಳಿಸುತ್ತ ʻಸದ್ಯದಲ್ಲೇ ಹೊಸ ನ್ಯೂಸ್‌ ಅನೌನ್ಸ್ ಮಾಡುತ್ತೀವಿʼ ಎನ್ನುವ ವಿಚಾರ ಬಹಿರಂಗಪಡಿಸಿದ್ದಾರೆ. ʻʻಅದೆಷ್ಟೋ ದಿನಗಳ ಕನಸು, ನನಸಾಗೋ ಹಂತದಲ್ಲಿದೆ. ನನ್ನಷ್ಟೇ ಕಾತುರ ನಿಮಗೂ ಇದೆ ಅಲ್ವಾ?ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

ಸದ್ಯ ದಿವ್ಯಾ ಉರುಡುಗ ಬಿಟ್ಟಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿ ಹುಟ್ಟಿಸಿದೆ. ಮೇಲ್ನೋಟಕ್ಕೆ ನೋಡಿದರೆ ದಿವ್ಯಾ ಮತ್ತು ಅರವಿಂದ್ ಮದುವೆಯ ವಿಚಾರವಾಗಿ ಏನಾದರೂ ಅನೌನ್ಸ್ ಮಾಡುತ್ತಾರಾ ಎನ್ನುವ ಅನುಮಾನ ಹುಟ್ಟಿಸಿದೆ. ತೆರೆಮೇಲೆ ಜೋಡಿಯಾಗಿರುವ ದಿವ್ಯಾ-ಅರವಿಂದ್ ನಿಜಜೀವನದಲ್ಲೂ ಒಂದಾಗುತ್ತಾರೆ ಎನ್ನುವ ಮಾಹಿತಿ ಇರುವುದು ಬಹುಶಃ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಅಂತಿಮವಾಗಿ ದಿವ್ಯಾ ಉರುಡುಗ ಯಾವ ವಿಚಾರವನ್ನು ಘೋಷಿಸುತ್ತಾರೆ ಎನ್ನುವುದು ಅತಿ ಶೀಘ್ರದಲ್ಲಿ ಗೊತ್ತಾಗಲಿದೆ.

ʻಅರ್ಧಂಬರ್ಧ ಪ್ರೇಮಕಥೆಯಲ್ಲಿ ಈ ಜೋಡಿ

ಬಿಗ್‌ಬಾಸ್ ಖ್ಯಾತಿಯ ಯುವಜೋಡಿ ಅರವಿಂದ್ ಕೆಪಿ ಮತ್ತು ದಿವ್ಯಾ ಉರುಡುಗ ಈಗ ತೆರೆಯ ಮೇಲೂ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಅರವಿಂದ್ ಕೌಶಿಕ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರದ ಹೆಸರು ʻಅರ್ಧಂಬರ್ಧ ಪ್ರೇಮಕಥೆʼ. ಹುಲಿರಾಯ, ತುಘ್ಲಕ್, ನಮ್ ಏರಿಯಾಲ್ ಒಂದಿನ ಸಿನಿಮಾಗಳಿಂದ ಗುರುತಿಸಿಕೊಂಡ ಅರವಿಂದ್ ಕೌಶಿಕ್, ರಕ್ಷಿತ್‌ ಶೆಟ್ಟಿ, ರಿಷಬ್‌ಶೆಟ್ಟಿ, ರಚಿತಾರಾಮ್, ಅನೀಶ್, ಬಾಲು ನಾಗೇಂದ್ರ ಸೇರಿದಂತೆ ಅನೇಕ ಕಲಾವಿದರನ್ನು ಪರಿಚಯಿಸಿದ್ದರು. ಈಗ ಬೈಕ್ ರೇಸರ್ ಅರವಿಂದ್‌ರನ್ನು ನಾಯಕನಾಗಿ ಇಂಟ್ರಡ್ಯೂಸ್ ಮಾಡುತ್ತಿದ್ದಾರೆ. ಅರ್ಜುನ್ ಜನ್ಯ ಅವರು ಅರ್ದಂಬರ್ಧ ಪ್ರೇಮಕಥೆಗೆ ಚೆಂದದ ಹಾಡುಗಳನ್ನು ಮಾಡಿಕೊಟ್ಟಿದ್ದಾರೆ. ಈ ಚಿತ್ರದ ಆಡಿಯೊ ರೈಟ್ಸ್‌ವನ್ನು ಎ2 ಚಾನೆಲ್ ಖರೀದಿಸಿದೆ.

ಇದನ್ನೂ ಓದಿ: Ranveer Singh: ರಣ್‌ವೀರ್ ಸಿಂಗ್ ಭೇಟಿ ಮಾಡಿದ `ಬಿಗ್‌ ಬಾಸ್‌’ ಖ್ಯಾತಿಯ ಅರವಿಂದ್ ಕೆಪಿ!

ಬಕ್ಸಸ್ ಮೀಡಿಯಾ, ಲೈಟ್‌ಹೌಸ್ ಮೀಡಿಯಾ ಮತ್ತು ಆರ್‌ಎಸಿ ವಿಷುವಲ್ಸ್ ಸೇರಿ ಅರ್ದಂಬರ್ಧ ಪ್ರೇಮ ಕಥೆ ಚಿತ್ರವನ್ನು ನಿರ್ಮಿಸಿದ್ದಾರೆ. ಸೂರ್ಯ ಅವರ ಛಾಯಾಗ್ರಹಣ, ಸಂತೋಷ್ ರಾಧಾಕೃಷ್ಣನ್ ಅವರು ಶೀರ್ಷಿಕೆ ವಿನ್ಯಾಸದ ಜತೆಗೆ ಗ್ರಾಫಿಕ್ಸ್ ಕೆಲಸವನ್ನೂ ನಿಭಾಯಿಸಿದ್ದಾರೆ. ರ‍್ಯಾಪರ್ ಆಲ್‌ಓಕೆ ಅಲೋಕ್, ಶ್ರೇಯಾ, ವೆಂಕಟ್‌ಶಾಸ್ತ್ರಿ, ಪ್ರದೀಪ್‌ ರೋಷನ್, ಸೂರಜ್ ಹೂಗಾರ್, ಸುಜಿತ್‌ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಶಿವರಾಜ್ ಮೇಹು ಅವರ ಸಂಕಲನ, ಸತೀಶ್ ಬ್ರಹ್ಮಾವರ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ. ಒಂದು ವಿಶೇಷ ಹಾಡನ್ನು ನವೀನ್ ಸಜ್ಜು ಹಾಡಿದ್ದಾರೆ.

Exit mobile version