ಬೆಂಗಳೂರು: ಬೆದರಿಕೆ ಹಾಗೂ ಸುಲಿಗೆ ಯತ್ನ ಪ್ರಕರಣದಲ್ಲಿ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತ (Divya Vasantha) ಜು.11 ಅರೆಸ್ಟ್ ಆಗಿದ್ದಾರೆ. ಸದ್ಯ ಹೆಚ್ಚಿನ ತನಿಖೆ ಮುಂದುವರಿದಿದ್ದಾರೆ. ಇನ್ನು ಸೋಶಿಯಲ್ ಮೀಡಿಯಾದಲ್ಲಿ ದಿವ್ಯಾ ವಸಂತಳನ್ನು ಬಹಳ ಟ್ರೋಲ್ ಮಾಡಲಾಗುತ್ತಿದೆ.ಇಂದಿರಾನಗರದ ಟ್ರೀ ಸ್ಪಾ & ಬ್ಯೂಟಿ ಮಾಲೀಕ ಸೇರಿದಂತೆ ಹಲವರನ್ನು ಬೆದರಿಸಿ ಸುಲಿಗೆ ಮಾಡಿರುವ ಗ್ಯಾಂಗ್‌ನಲ್ಲಿ ದಿವ್ಯಾ ಹೆಸರು ಕೇಳಿಬಂದಿತ್ತು. ಇದೀಗ ತಮ್ಮ ಮಗಳನ್ನು ಟ್ರೋಲ್ ಮಾಡುತ್ತಿರುವ ಬಗ್ಗೆ ವಸಂತಮ್ಮ ಬೇಸರಗೊಂಡಿದ್ದಾರೆ.
ವಿಡಿಯೊದಲ್ಲಿ ವಸಂತಮ್ಮ ಮಾತನಾಡಿ ʻʻನನ್ನ ಮಗಳ ಬಗ್ಗೆ ಕೆಟ್ಟದ್ದಾಗಿ ಮಾತನಾಡಿದ್ದೀರಾ. ಮಾತನಾಡಿದವರೆಲ್ಲ ದರ್ಶನ್ ಫ್ಯಾನ್ಸ್ ಅಂತ ಚೆನ್ನಾಗಿ ಗೊತ್ತು. ಆದರೆ ಅವಳು ತಪ್ಪು ಮಾಡಿದ್ದಾಳೋ ಇಲ್ಲವೋ ಎನ್ನುವುದು ಬಂದ ಮೇಲೆ ಗೊತ್ತಾಗತ್ತೆ. ಅವಳ ಕೆಲಸ ಮಾಡಿದ್ದಾಳೆ. ನಮಗೂ ದರ್ಶನ್ ಇಷ್ಟ. ನಮ್ಮ ಮಕ್ಕಳಿಗೂ ಇಷ್ಟ. ಆಕೆಗೆ ಏನು ಕೆಲಸ ಕೊಟ್ಟಿದ್ದಾರೆ. ಅದು ಮಾಡಿದ್ದಾಳೆ, ಅವಳೇ ಬಂದು ಅದಕ್ಕೆ ಉತ್ತರ ಕೊಡುತ್ತಾಳೆ. ಅಲ್ಲಿಯವರೆಗೆ ಕೆಟ್ಟದಾಗಿ ಏನೂ ವೈರಲ್ ಮಾಡಬೇಡಿ. ನಿಮ್ಮ ಸಪೋರ್ಟ್ ಇರಬೇಕು. ಅವಳು ಏನು ತಪ್ಪು ಮಾಡಿದ್ದಾಳೋ ಇಲ್ವೋ ದೇವರು ನೋಡ್ಕೋತ್ತಾನೆ. ಟಿವಿಯಲ್ಲಿ ಕೆಲಸ ಮಾಡುತ್ತಿದ್ದಳು. ಅವರು ಏನು ಕೆಲಸ ಕೊಡುತ್ತಿದ್ದರೂ ಅದನ್ನಷ್ಟೇ ಮಾಡ್ತಾ ಇದ್ದಳು.ನಿಮ್ಮ ಮನೆ ಹೆಣ್ಣುಮಗಳೆಂದು ತಿಳ್ಕೊಳಿ.ನೀವು ಅಂದುಕೊಂಡಂತೆ ನನ್ನ ಮಗಳು ಕೆಟ್ಟವಳಲ್ಲ. ಅವಳು ದರ್ಶನ್ ಅಭಿಮಾನಿ. ಅವಳು ಕೆಟ್ಟವಳಲ್ಲ, ಇಷ್ಟು ದಿನ ದಿವ್ಯಾಳನ್ನು ಹೇಗೆ ಬೆಳೆಸಿದ್ದೀರೋ ದಿವ್ಯಾನ, ಅದೇ ಬೆಳೆಸಿ, ಬೆಂಬಲಿಸಿ ಎಂದು ಕೇಳಿಕೊಳ್ಳುತ್ತೇನೆʼʼಎಂದು ಕಣ್ಣೀರಿಟ್ಟಿದ್ದಾರೆ.
ಇದನ್ನೂ ಓದಿ: Divya Vasantha: ಗೌರ್ಮೆಂಟ್ ಸ್ಕೂಲ್‌ನಲ್ಲಿ ಓದಿ, ಸೇಲ್ಸ್ ಗರ್ಲ್ ಆಗಿದ್ದ ದಿವ್ಯಾ ವಸಂತ ಬಳಿ ಇದೆ ಈ ದುಬಾರಿ ಕಾರು!
ಒಂದು ವಾರದಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ದಿವ್ಯಾ ಅವರನ್ನು ಕೊನೆಗೂ ಬಂದನ ಮಾಡಿದ್ದಾರೆ ಪೊಲೀಸರು. ತಮಿಳುನಾಡಿನಿಂದ ಕೇರಳದಲ್ಲಿ ತಲೆ ಮರೆಸಿಕೊಂಡಿದ್ದರು ದಿವ್ಯಾ. ಕೇರಳದಿಂದ ಬಂಧಿಸಿ ಪೊಲೀಸರು ಕರೆತಂದಿದ್ದಾರೆ. ಸದ್ಯ ಇದೀಗ ಕೇಸ್ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಜೆ. ಬಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ‘ಸ್ಪಾ’ವೊಂದರ ವ್ಯವಸ್ಥಾಪಕನನ್ನು ಬೆದರಿಸಿ ಹಣ ಸುಲಿಗೆ ಯತ್ನಿಸಿದ ಪ್ರಕರಣದಲ್ಲಿ ಈ ಮುಂಚೆ ಪೊಲೀಸರು ಮೂವರನ್ನು ಬಂಧಿಸಿದ್ದರು. ರಾಜ್‌ನ್ಯೂಸ್ ಸುದ್ದಿವಾಹಿನಿ ಸಿಇಓ ಎನ್ನಲಾಗುತ್ತಿದ್ದ ವೆಂಕಟೇಶ್ ಹಾಗೂ ದಿವ್ಯಾ ವಸಂತ ಸಹೋದರ ಸಂದೇಶ್ ಬಂಧನವಾಗಿದ್ದು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ಮೊಬೈಲ್ ಜಪ್ತಿ ಮಾಡಿಕೊಳ್ಳಲಾಗಿತ್ತು. ವೆಂಕಟೇಶ್ ಹಾಗೂ ದಿವ್ಯಾ ಸೇರಿ ‘ಸ್ಪೈ ರೀಸರ್ಚ್ ಟೀಂ’ ಹೆಸರಿನ ವಾಟ್ಸಪ್ ಗ್ರೂಪ್ ಮಾಡಿಕೊಂಡು ದುಷ್ಕೃತ್ಯಗಳನ್ನು ನಡೆಸುತ್ತಿದ್ದರು ಎಂದು ವರದಿಯಾಗಿತ್ತು.
ಶ್ರೀಮಂತರು, ಮಸಾಜ್ ಪಾರ್ಲರ್‌ಗಳು ಹಾಗೂ ವೈದ್ಯರೇ ಈ ಗ್ಯಾಂಗ್‌ನ ಟಾರ್ಗೆಟ್ ಆಗಿದ್ದರು. ಹನಿಟ್ರ್ಯಾಪ್ ರೀತಿ ಹಣವುಳ್ಳವರನ್ನು ಬಲೆಗೆ ಬೀಳಿಸಿ ಸುಲಿಗೆ ಮಾಡುತ್ತಿದ್ದರು ಎಂದು ಪೊಲೀಸರ ತನಿಖೆ ವೇಳೆ ಗೊತ್ತಾಗಿತ್ತು.ಪ್ರಕರಣ ಸಂಬಂಧ ಲಗ್ಗೆರೆಯಲ್ಲಿರುವ ದಿವ್ಯಾ ವಸಂತ ಮನೆ ಮೇಲೆ ದಾಳಿ ನಡೆಸಿ ಕ್ಯಾಮೆರಾ, ಲ್ಯಾಪ್‌ಟಾಪ್ ಸೇರಿ ಕೆಲ ವಸ್ತುಗಳನ್ನು ವಶಪಡಿಸಿಕೊಂಡಿದ್ದರು ಪೊಲೀಸರು.