Site icon Vistara News

Dolly Dhananjay : ಮತ್ತೆ ಒಂದಾದ ’ಬಡವ ರಾಸ್ಕಲ್’ ತಂಡ; ಡಾಲಿ ಧನಂಜಯ್ ಹೊಸ ಸಿನಿಮಾ ಅನೌನ್ಸ್‌

Anna From Mexico Poster

ಬೆಂಗಳೂರು: ನಟ ರಾಕ್ಷಸ ಡಾಲಿ ಧನಂಜಯ್ (Dolly Dhananjay) ಆಗಸ್ಟ್‌ 23ರಂದು ಹುಟ್ಟುಹಬ್ಬದ (Dolly Dhananjay Birthday) ಸಂಭ್ರಮದಲ್ಲಿದ್ದಾರೆ. ಧನಂಜಯ್‌ ಜನುಮದಿನದ ಅಂಗವಾಗಿ ಹೊಸ ಸಿನಿಮಾಗಳ ಪೋಸ್ಟರ್, ಟೀಸರ್ ಉಡುಗೊರೆಯಾಗಿ ಸಿಕ್ಕಿದೆ. ಅದರಂತೆ ʻಬಡವ ರಾಸ್ಕಲ್ʼ (Badava Rascal ) ಚಿತ್ರತಂಡದಿಂದ ಡಾಲಿ ಬರ್ತ್‌ಡೇಗೆ ಸ್ಪೆಷಲ್ ಗಿಫ್ಟ್ ಸಿಕ್ಕಿದೆ. ಮಧ್ಯರಾತ್ರಿ 12 ಗಂಟೆಗೆ ಟೈಟಲ್ ಹಾಗೂ ಫಸ್ಟ್ ಲುಕ್ motion ಪೋಸ್ಟರ್ ಅನೌನ್ಸ್ ಮಾಡಲಾಗಿದೆ. ಈ ಚಿತ್ರಕ್ಕೆ ’ಅಣ್ಣ From Mexico’ (Anna From Mexico)ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ.

2021ರಲ್ಲಿ ತೆರೆಗೆ ಬಂದ ಬಡವ ರಾಸ್ಕಲ್ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಚಿತ್ರದ ಮೂಲಕ ಧನಂಜಯ್ ನಿರ್ಮಾಪಕರಾಗಿ ಬಡ್ತಿ ಪಡೆದಿದ್ದರು. ತಮ್ಮದೇ ಡಾಲಿ ಪಿಕ್ಚರ್ಸ್‌ನಡಿ ನಿರ್ಮಿಸಿ ನಟಿಸಿದ್ದ ಬಡವ ರಾಸ್ಕಲ್ ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದರು. ಮೊದಲ ಹೆಜ್ಜೆಯಲ್ಲಿಯೇ ಗೆದ್ದಿದ್ದ ಶಂಕರ್ ಗುರು ಈಗ ಮತ್ತೊಂದು ಚೆಂದದ ಕಥೆ ಮಾಡಿ ಡಾಲಿ ಫ್ಯಾನ್ಸ್ ರಂಜಿಸಲು ಅಣಿಯಾಗಿದ್ದಾರೆ. ಅದರ ಮೊದಲ ಭಾಗವೆಂಬಂತೆ ಇಂದು ’ಅಣ್ಣ From Mexico’ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಕೊರಳಿಗೆ ಕರ್ನಾಟಕ ಮ್ಯಾಪ್ ಇರುವ ಪೆಂಡೆಂಟ್ ಆಭರಣ ಧರಿಸಿ, ಸೂಟ್‌ ತೊಟ್ಟಿರುವ ಧನಂಜಯ್ ಲುಕ್ ರಿವೀಲ್ ಮಾಡದೇ ಚಿತ್ರತಂಡ ನಿರೀಕ್ಷೆ ಹೆಚ್ಚಿಸಿದೆ.

ಇದನ್ನೂ ಓದಿ: Dolly Dhananjay: ಡಾಲಿ ಧನಂಜಯ್‌ಗೆ ಹುಟ್ಟುಹಬ್ಬದ ಸಂಭ್ರಮ; ಟೈಮ್ಸ್‌ ಸ್ಕ್ವೇರ್‌ನಲ್ಲಿ ಪೋಸ್ಟರ್‌ ರಿಲೀಸ್

’ಅಣ್ಣ From Mexico’ ಶಂಕರ್ ಗುರು ನಿರ್ದೇಶನದ ಎರಡನೇ ಸಿನಿಮಾ. ಪಕ್ಕ ಆ್ಯಕ್ಷನ್ ಎಂಟರ್‌ಟೈನರ್‌ ಚಿತ್ರವಾದ, ಅಜ್ಜಿ ಮೊಮ್ಮಗನ ಬಾಂಧವ್ಯದ ಕಥೆಯೂ ಸಿನಿಮಾದಲ್ಲಿರಲಿದೆ. ಸತ್ಯ ರಾಯಲ್ ನಿರ್ಮಾಣದಲ್ಲಿ ತಯಾರಾಗಲಿರುವ ಈ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಲಿದ್ದು,. ನವೆಂಬರ್ ತಿಂಗಳಿನಿಂದ ಶೂಟಿಂಗ್ ಶುರುವಾಗಲಿದ್ದು, ಮೆಕ್ಸಿಕೋ ಸೇರಿದಂತೆ ಹಲವೆಡೆ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

Exit mobile version